ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ತಾನೇ RSS ಬ್ಯಾನ್ ಮಾಡೋದು – ಪ್ರಿಯಾಂಕ್ ಖರ್ಗೆಗೆ ಶಾಸಕ ಶ್ರೀವತ್ಸ ತಿರುಗೇಟು

By
1 Min Read

ಮೈಸೂರು: ಕೇಂದ್ರದಲ್ಲಿ ಕಾಂಗ್ರೆಸ್  (Congress) ಅಧಿಕಾರಕ್ಕೆ ಬಂದ್ರೆ ಆರ್‌ಎಸ್‌ಎಸ್‌ (RSS) ಬ್ಯಾನ್ ಮಾಡ್ತೇವೆ ಎಂದಿದ್ದ ಸಚಿವ ಪ್ರಿಯಾಂಕ್ ಖರ್ಗೆ (Priyank Kharge)  ಹೇಳಿಕೆಗೆ ಶಾಸಕ ಶ್ರೀವತ್ಸ ತಿರುಗೇಟು ನೀಡಿದ್ದಾರೆ.

ಮೈಸೂರಿನಲ್ಲಿ‌ (Mysuru) ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ, ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ತಾನೇ ಆರ್‌ಎಸ್‌ಎಸ್ ಬ್ಯಾನ್ ಮಾಡೋದು. ಪ್ರಿಯಾಂಕ್ ಖರ್ಗೆ ಮಾನಸಿಕ ಸ್ಥಿಮಿತ ಕಳೆದುಕೊಂಡು ಮಾತಾಡುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಬಹುಭಾಷಾ ನಟ ಪ್ರಕಾಶ್ ರಾಜ್ ಗುಜರಾತ್‌ನಲ್ಲೂ ಹೋರಾಟ ಮಾಡಲಿ – ಎಂಬಿಪಿ ತಿರುಗೇಟು

ಪ್ರಿಯಾಂಕ್ ಖರ್ಗೆ ಒಂದು ಗಂಟೆ ಆರ್‍ಎಸ್‍ಎಸ್ ಶಾಖೆಗೆ ಹೋಗಿ ಬರಲಿ. ಅಲ್ಲಿ ಏನು ನಡೆಯುತ್ತಿದೆ ಎಂಬುದು ಅವರಿಗೆ ಗೊತ್ತಾಗುತ್ತದೆ. ಆರ್‍ಎಸ್‍ಎಸ್ ಹೇಗೆ ದೇಶದ್ರೋಹಿ ಸಂಘಟನೆ? ಅವರಿಗೆ ತಿಳುವಳಿಕೆ ಇಲ್ಲದೆ ಮಾತನಾಡುತ್ತಿದ್ದಾರೆ. ಆರ್‌ಎಸ್‌ಎಸ್ ಬಗ್ಗೆ ಅವರಿಗೆ ಏನು ಗೊತ್ತು ಎಂದು ಅಸಮಾಧಾನ ಹೊರಹಾಕಿದ್ದಾರೆ.

ಹಿಂದೆ ಇದೆ ಕಾಂಗ್ರೆಸ್ ಆರ್‍ಎಸ್‍ಎಸ್ ಬ್ಯಾನ್ ಮಾಡಿ, ಅದನ್ನು ಮತ್ತೆ ವಾಪಸ್ ತೆಗೆದುಕೊಂಡಿತ್ತು. ಆಗ ಪ್ರಿಯಾಂಕ್ ಖರ್ಗೆ ರಾಜಕಾರಣದಲ್ಲೇ ಇರಲಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ತಾನೇ ಪ್ರಿಯಾಂಕ್ ಖರ್ಗೆ ಮಾತು ನಿಜವಾಗೋದು. ಇಪ್ಪತ್ತು ವರ್ಷ ಕಾಲ ಕೇಂದ್ರದಲ್ಲಿ ಎನ್‍ಡಿಎ ಸರ್ಕಾರ ಅಧಿಕಾರದಲ್ಲಿ ಇರುತ್ತೆ. ಅವರು ಸುಮ್ಮನೆ ಕನಸು ಕಾಣಲಿ ಎಂದಿದ್ದಾರೆ. ಇದನ್ನೂ ಓದಿ: ರಾಜ್ಯದ ಜನರಿಗೆ ಕಾಂಗ್ರೆಸ್ ಸರ್ಕಾರ ಮಕ್ಮಲ್ ಟೋಪಿ ಹಾಕಿದೆ: ರೇಣುಕಾಚಾರ್ಯ

Share This Article