ನನ್ನ ರಕ್ತ ಬೆರಕೆಯಲ್ಲ, ಪ್ಯೂರ್‌ ಹಿಂದುತ್ವ – ಸಿಟಿ ರವಿ

Public TV
2 Min Read

ಚಿಕ್ಕಮಗಳೂರು: ನನ್ನ ರಕ್ತ ಬೆರಕೆಯಲ್ಲ, ಪ್ಯೂರ್‌ ಹಿಂದುತ್ವ ಅಂತ ವಿಧಾನ ಪರಿಷತ್‌ ಸದಸ್ಯ ಸಿ.ಟಿ ರವಿ (CT Ravi) ಹೇಳಿದ್ದಾರೆ.

ಮಂಡ್ಯದ (Mandya) ಮದ್ದೂರಿನ ಸಾಮೂಹಿಕ ಗಣೇಶ ವಿಸರ್ಜನೆ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎನ್ನುವ ಆರೋಪದ ಮೇಲೆ ಸಿ.ಟಿ ರವಿ ವಿರುದ್ಧ ಸ್ವಯಂಪ್ರೇರಿತ ಕೇಸ್ ದಾಖಲಾಗಿದೆ. ಈ ಕುರಿತು ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನ ರಕ್ತ ಪ್ಯೂರ್ ಹಿಂದುತ್ವ ಬೆರಕೆ ಅಲ್ಲ ಎಂದು ತಿರುಗೇಟು ನೀಡಿದ್ದಾರೆ.

ಮಿಸ್ಟರ್ ಮಂಜುನಾಥ್, ರಾತ್ರಿ 10 ರಿಂದ ಬೆಳಗ್ಗೆ 6ರ ವರೆಗೆ ಧ್ವನಿವರ್ಧಕ ಬಳಸುವಂತಿಲ್ಲ, ಸುಪ್ರೀಂ ಕೋರ್ಟ್ ಆದೇಶವಿದೆ. ನನ್ನ ಮೇಲೆ ಕೇಸ್ ಹಾಕಿ ನಿಯತ್ ತೋರ್ಸೋದಲ್ಲ. ನಾಳೆ ನೀನು ಮದ್ದೂರು ವ್ಯಾಪ್ತಿಯಲ್ಲಿ ಸುಮೋಟೋ ಕೇಸ್ ಹಾಕಬೇಕು. ಯಾರ‍್ಯಾರು ಬೆಳಗ್ಗೆ 5ಕ್ಕೆ ಕೂಗ್ತಾರೆ, ಅವರ ಮೇಲೆ ಕೇಸ್ ಹಾಕಿ ಖಾಕಿ ಬಟ್ಟೆಗೆ ನಿಯತ್ ಇದೆ ಅಂತ ತೋರ್ಸು ಅಂತ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಮದ್ದೂರಿನಲ್ಲಿ ಪ್ರಚೋದನಕಾರಿ ಭಾಷಣ – ಸಿ.ಟಿ ರವಿ ವಿರುದ್ಧ ಕೇಸ್ ದಾಖಲು

ಕೇಸ್ ನನಗೆ ಹೊಸದಲ್ಲ, ಕೇಸಿಗೆ ಹೆದರುವ ಜಾಯಮಾನದವನೂ ನಾನಲ್ಲ. ನೀವು ಕಲ್ಲು ಹೊಡೆದು, ತೊಡೆ ತಟ್ಟಿ, ಪೆಟ್ರೋಲ್ ಬಾಂಬ್ ಹಾಕಿದ್ರೆ, ಸಹಿಸುವ ಕಾಲ ಮುಗಿದಿದೆ ಎಂದಿದ್ದೆ. ಕ್ರಿಯೆಗೆ ತಕ್ಕ ಪ್ರತಿಕ್ರಿಯೆ ಎಂದು ಹೇಳಿದ್ದೆ, ಪ್ರೀತಿಗೆ ಪ್ರೀತಿ-ಕಲ್ಲಿಗೆ ಕಲ್ಲು ಎಂದಿದ್ದೆ. ನನ್ನ ಹೇಳಿಕೆಗೆ ಇಂದಿಗೂ ನಾನು ಬದ್ಧ. ಶಿವನ ನೆಲದಲ್ಲಿ ಅಲ್ಲಾ ಒಬ್ಬನೇ ಅಂತ ಅಂದ್ರೆ ಉಳಿದ ದೇವರ ಅಸ್ತಿತ್ವ ಏನು? ಅಂತ ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ – ಸೆ.12ರ ನಂತರ ಮದ್ದೂರಿಗೆ ಹೆಚ್‌ಡಿಕೆ

ಕೆಲವರು ನಾನು ಹಿಂದೂ ಅಂತಾರೆ, ನಾಮ ಹಾಕ್ಕೊಂಡ್, ನಾಮ ಅಳಿಸಿ ಟೋಪಿ ಹಾಕಿ ನಮಾಜ್ ಮಾಡೋದು. ಇಂತಹ ತಾರಾತಕಡಿ, ನಾಟಕದ ಜಾಯಮಾನದವನು ನಾನಲ್ಲ. ನನ್ನ ರಕ್ತ ಪ್ಯೂರ್ ಹಿಂದುತ್ವ, ಬೆರಕೆ ಅಲ್ಲ ಅಂತ ʻಕೈʼ ನಾಯಕರಿಗೆ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಮದ್ದೂರಿನಲ್ಲಿ ʼಕೇಸರಿʼ ಘರ್ಜನೆ; ಬಿಜೆಪಿ-ಜೆಡಿಎಸ್ ಒಗ್ಗೂಡಿ ಗಣೇಶ ಮೆರವಣಿಗೆ – ಶಿಂಷಾ ನದಿಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆ

ಸಿ.ಟಿ ರವಿ ವಿರುದ್ಧ ಪ್ರಕರಣ ದಾಖಲಾಗಿದ್ದೇಕೆ?
ಮದ್ದೂರಿನಲ್ಲಿ (Maddur) ಗಣೇಶ ಮೆರವಣಿಗೆ ವೇಳೆ ನಡೆದಿದ್ದ ಕಲ್ಲು ತೂರಾಟದ ಬಳಿಕ ಬುಧವಾರ (ಸೆ.10) ಸಾಮೂಹಿಕ ಗಣೇಶ ವಿಸರ್ಜನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ವೇದಿಕೆಯಲ್ಲಿ ಸಿ.ಟಿ.ರವಿ ಭಾಷಣ ಮಾಡಿದ್ದರು. ಭಾಷಣದ ವೇಳೆ ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಮದ್ದೂರು ಪೊಲೀಸ್ ಸಬ್‌ಇನ್ಸ್‌ಪೆಕ್ಟರ್‌ ಮಂಜುನಾಥ್ ಅವರ ದೂರಿನನ್ವಯ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮೂರು ದಿನಗಳ ಬಳಿಕ ಸಹಜ ಸ್ಥಿತಿಯತ್ತ ಮದ್ದೂರು

Share This Article