ಕೊರೊನಾ ನಡುವೆ ಸಾವಿರಾರು ಬೆಂಬಲಿಗರೊಂದಿಗೆ ಎಂಎಲ್‍ಸಿ ಅದ್ದೂರಿ ಹುಟ್ಟುಹಬ್ಬ

By
1 Min Read

– ಎಂಎಲ್‍ಸಿ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದ ಸಾರ್ವಜನಿಕರು
– ಹುಟ್ಟುಹಬ್ಬ ಆಚರಣೆಯಿಂದ ಗಂಟೆಗಟ್ಟಲೆ ಟ್ರಾಫಿಕ್ ಜಾಮ್

ಹಾಸನ: ರಾಜಕಾರಣಿಗಳಿಗೆ ಒಂದು ನಿಯಮ, ಜನಸಾಮಾನ್ಯರಿಗೆ ಮತ್ತೊಂದು ನಿಯಮ ಎಂಬಂತೆ, ಹಾಸನದಲ್ಲಿ ಎಂಎಲ್‍ಸಿ ಗೋಪಾಲಸ್ವಾಮಿ ಕೊರೊನಾ ನಿಯಮಗಳನ್ನು ಗಾಳಿಗೆ ತೂರಿ ಸಾವಿರಾರು ಬೆಂಬಲಿಗರೊಂದಿಗೆ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಿಕೊಂಡಿದ್ದಾರೆ.

ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಿರುವ ಎಂಎಲ್‍ಸಿ ಗೋಪಾಲಸ್ವಾಮಿ ನಿನ್ನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಅದ್ದೂರಿಯಾಗಿ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದಾರೆ. ಅದು ಅಲ್ಲದೇ ಇವರು ಚನ್ನರಾಯಪಟ್ಟಣದ ಪಟ್ಟಣ ಪೊಲೀಸ್ ಠಾಣೆ, ತಹಶಿಲ್ದಾರ್ ಕಚೇರಿ ಸಮೀಪವೇ ಅದ್ದೂರಿಯಾಗಿ ತಮ್ಮ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಂಡಿದ್ದು, ಯಾವುದೇ ಕ್ರಮವನ್ನು ತೆಗೆದುಕೊಂಡಿಲ್ಲ. ಇದನ್ನೂ ಓದಿ:  ಚಾಲಕನ ಮೇಲೆ ದಾಳಿಯಾದಾಗ ನಿಯಂತ್ರಣ ತಪ್ಪಿ ಕಾರು ರೈತರ ಮೇಲೆ ಹರಿದಿದೆ: ಮಿಶ್ರಾ

ಬೆಂಗಳೂರು ಹಾಸನ ರಸ್ತೆಯ ಮಧ್ಯದಲ್ಲೇ ಸಾವಿರಾರು ಬೆಂಬಲಿಗರೊಂದಿಗೆ ಗೋಪಾಲಸ್ವಾಮಿ ಅವರನ್ನು ತೆರೆದ ಕಾರಿನಲ್ಲಿ ಮೆರವಣಿಗೆ ಮಾಡಲಾಯಿತು. ಜೆಸಿಬಿಗಳಲ್ಲಿ ಹೂವಿನ ಮಳೆಗರೆಯುತ್ತ, 200 ಕೆಜಿ ತೂಕದ ಸೇಬಿನ ಹಾರ ಹಾಕಿಸಿಕೊಂಡು ಗೋಪಾಲಸ್ವಾಮಿ ಅವರು ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದಾರೆ. ಈ ವೇಳೆ ಗೋಪಾಲಸ್ವಾಮಿ ಅವರನ್ನು ಸೇರಿದಂತೆ ಯಾರೊಬ್ಬರ ಮುಖದಲ್ಲೂ ಮಾಸ್ಕ್ ಇರಲಿಲ್ಲ. ಸಾಮಾಜಿಕ ಅಂತರ ಕೇಳೋರೆ ಇಲ್ಲ. ಡೋಲು ಬಡಿಯುತ್ತಾ, ಕುಣಿದು ಕುಪ್ಪಳಿಸುತ್ತಾ, ಒಬ್ಬರ ಮೇಲೊಬ್ಬರು ಬೀಳುತ್ತಾ ಹುಟ್ಟುಹಬ್ಬ ಆಚರಣೆ ಮಾಡಲಾಗಿದೆ. ಇದನ್ನೂ ಓದಿ:  ರೈತರ ಮೇಲೆ ಜೀಪ್ ಹತ್ತಿಸಿದ ಮತ್ತೊಂದು ವೀಡಿಯೋ ಲಭ್ಯ – ಇಂದು ಸುಪ್ರೀಂನಲ್ಲಿ ವಿಚಾರಣೆ

ಹುಟ್ಟುಹಬ್ಬ ಆಚರಣೆಯಿಂದ ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ಮಾಡಲಾಗಿದ್ದು, ಪರಿಣಾಮ ವಾಹನ ಸವಾರರು ಪರದಾಡುತ್ತಿದ್ದರು. ಗೋಪಾಲಸ್ವಾಮಿ ಅವರು ಹುಟ್ಟುಹಬ್ಬ ಆಚರಿಸಿಕೊಂಡ ಸ್ಥಳದ ಕೂಗಳತೆ ದೂರದಲ್ಲೇ ತಹಶಿಲ್ದಾರ್ ಕಚೇರಿ ಮತ್ತು ಪಟ್ಟಣ ಪೊಲೀಸ್ ಠಾಣೆ ಇದ್ದು, ಎಂಎಲ್‍ಸಿ ಎಂಬ ಕಾರಣಕ್ಕೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೆ ಕಣ್ಮುಚ್ಚಿ ಕುಳಿತಿದ್ದರು. ಹೀಗೆ ಆದರೆ ಹಾಸನದಲ್ಲಿ ಕೊರೊನಾ ಮೂರನೇ ಅಲೆ ತಡೆಯೋದು ಕಷ್ಟ. ನಿಯಮ ಮೀರಿ ಹುಟ್ಟುಹಬ್ಬ ಆಚರಿಸಿಕೊಂಡ ಎಂಎಲ್‍ಸಿ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಸಾರ್ವಜನಿಕರ ಆಗ್ರಹಿಸುತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *