ಅಸಹಜ ಲೈಂಗಿಕ ದೌರ್ಜನ್ಯ ಕೇಸ್‌; ಸೂರಜ್‌ ರೇವಣ್ಣಗೆ ಜು.18ರ ವರೆಗೆ ನ್ಯಾಯಾಂಗ ಬಂಧನ

Public TV
1 Min Read

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಂಎಲ್‌ಸಿ ಸೂರಜ್‌ ರೇವಣ್ಣಗೆ (Suraj Revanna) ಜು.18 ರ ವರೆಗೆ ಮತ್ತೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಪ್ರಕರಣದ ವಿಚಾರಣೆ ನಡೆಸಿದ 42ನೇ ಎಸಿಎಂಎಂ ನ್ಯಾಯಾಲಯವು ಸೂರಜ್‌ ರೇವಣ್ಣಗೆ ಮತ್ತೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ಇದನ್ನೂ ಓದಿ: ಇದೇ ಮೊದಲ ಬಾರಿಗೆ ಪ್ರಜ್ವಲ್‌ ನೋಡಲು ಪರಪ್ಪನ ಅಗ್ರಹಾರಕ್ಕೆ ಬಂದ ರೇವಣ್ಣ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಸೂರಜ್‌ ಅವರು ಸಿಐಡಿ ಕಸ್ಟಡಿಯಲ್ಲಿದ್ದರು. ಈಗ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಸೂರಜ್‌ ರೇವಣ್ಣರನ್ನು ಹೊಳೆನರಸೀಪುರ ಗ್ರಾಮಾಂತರ ಠಾಣೆ ಪೊಲೀಸರು ಜೂ.22 ರಂದು ಬಂಧಿಸಿದ್ದರು. ನಂತರ ಪ್ರಕರಣವನ್ನು ಸರ್ಕಾರ ಸಿಐಡಿಗೆ ವಹಿಸಿತ್ತು.

ಹೆಚ್ಚಿನ ವಿಚಾರಣೆಗೆ ಸಿಐಡಿ ಕಸ್ಟಡಿಗೆ ಪಡೆದುಕೊಂಡಿತ್ತು. ಮತ್ತೆ ಜು.1 ರಂದು ಕೋರ್ಟ್‌ಗೆ ಹಾಜರುಪಡಿಸಿತ್ತು. ನ್ಯಾಯಾಲಯವು ಸಿಐಡಿ ಕಸ್ಟಡಿ ಅವಧಿಯನ್ನು ಇನ್ನೆರಡು ದಿನಗಳಿಗೆ ವಿಸ್ತರಿಸಿ ಆದೇಶ ಹೊರಡಿಸಿತ್ತು. ಇದನ್ನೂ ಓದಿ: ನಿವೇಶನ ಹಂಚಿಕೆ ವಿವಾದ- ಮುಡಾ ಆಯುಕ್ತರಿಗೆ 15 ಪತ್ರ ಬರೆದಿದ್ದ ಮೈಸೂರು ಡಿಸಿ

Share This Article