ಗುವಾಹಟಿಯಲ್ಲಿ ಶುಕ್ರವಾರ (ಏ.10) ನಡೆದಿದ್ದ ಐಪಿಎಲ್ ಪಂದ್ಯದಲ್ಲಿ 15ರ ಬಾಲಕ ವೈಭವ್ ಸೂರ್ಯವಂಶಿ, ಧ್ರುವ್ ಜುರೆಲ್ ಬೆಂಕಿ ಬ್ಯಾಟಿಂಗ್ ನೆರವಿನಿಂದ ರಾಜಸ್ಥಾನ್ ರಾಯಲ್ಸ್, ಹಾಲಿ ಚಾಂಪಿಯನ್ಸ್ ಆರ್‌ಸಿಬಿ (RCB) ವಿರುದ್ಧ 6 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿತ್ತು. ಈ ಗೆಲುವಿನ ಸಂಭ್ರಮದಲ್ಲಿದ್ದ ರಾಜಸ್ತಾನ ರಾಯಲ್ಸ್ (RR) ತಂಡಕ್ಕೆ ದೊಡ್ಡ ಆಘಾತ ಎದುರಾಗಿದೆ.
ಪಂದ್ಯದಲ್ಲಿ ಆರ್‌ಸಿಬಿ ನೀಡಿದ್ದ 202 ರನ್ ಗಳ ಗುರಿಯನ್ನು ಬೆನ್ನಟ್ಟಿದ್ದ ರಾಜಸ್ತಾನ ರಾಯಲ್ಸ್ ತಂಡ 18 ಓವರ್‌ನಲ್ಲೇ ಕೇವಲ 4 ವಿಕೆಟ್ ಕಳೆದುಕೊಂಡು ಗುರಿ ಮುಟ್ಟಿ 6 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿತ್ತು. ರಾಜಸ್ತಾನ ಪರ ವೈಭವ್ ಸೂರ್ಯವಂಶಿ (78) ಮತ್ತು ಧ್ರುವ್ ಜುರೆಲ್ (ಅಜೇಯ 81) ರನ್ ಗಳಿಸಿದ್ದರು. ಇದನ್ನೂ ಓದಿ: ಗುವಾಹಟಿಯಲ್ಲಿ ಸರಿಸಾಟಿಯಿಲ್ಲದ ವೈಭವ್ ಪ್ರದರ್ಶನ – ಆರ್‌ಸಿಬಿ ʻಜೋಶ್ʼಗೆ ಸೋಲಿನ ಪೆಟ್ಟು, ರಾಜಸ್ಥಾನ್‌ಗೆ 6 ವಿಕೆಟ್ ಜಯ
ಇದೇ ಪಂದ್ಯದಲ್ಲಿ ರಾಜಸ್ತಾನ ರಾಯಲ್ಸ್ ತಂಡ ಮಾಡಿದ ಒಂದು ಎಡವಟ್ಟು ಇದೀಗ ಇಡೀ ತಂಡವನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಪಂದ್ಯದ ವೇಳೆ ರಾಜಸ್ತಾನ ರಾಯಲ್ಸ್ ತಂಡದ ಸಹಾಯಕ ಸಿಬ್ಬಂದಿಯೊಬ್ಬರು ಮೊಬೈಲ್ ಫೋನ್ ಬಳಸಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಈ ಕುರಿತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.
🚨 MOBILE PHONE IN RR DUGOUT !🤯
– Even though mobile phones are not allowed during matches in the Indian Premier League, Rajasthan Royals were seen breaking the rule and using a mobile phone during the match.
— lndian Sports Netwrk (@IS_Netwrk29) April 11, 2026
ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ, ವೈಭವ್ ಸೂರ್ಯವಂಶಿ ಪಕ್ಕದಲ್ಲಿ ಕುಳಿತಿರುವ ಸಿಬ್ಬಂದಿಯೊಬ್ಬರು ಮೊಬೈಲ್ ಬಳಸುತ್ತಿರುವುದು ಸಾಮಾಜಿಕ ಮಾಧ್ಯಮದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
ಐಪಿಎಲ್ ಮಾರ್ಗಸೂಚಿಗಳ ಪ್ರಕಾರ, ಭ್ರಷ್ಟಾಚಾರ ತಡೆಗಟ್ಟಲು ಡಗೌಟ್ ಮತ್ತು ಡ್ರೆಸ್ಸಿಂಗ್ ರೂಮ್‌ನಲ್ಲಿ ಆಟಗಾರರು ಮತ್ತು ತಂಡದ ಸಿಬ್ಬಂದಿಗೆ ಮೊಬೈಲ್ ಫೋನ್ ಮತ್ತು ಎಲೆಕ್ಟ್ರಾನಿಕ್ ಸಾಧನಗಳ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಈ ನಿಯಮಗಳನ್ನು ಉಲ್ಲಂಘಿಸಿರುವುದು ವಿಡಿಯೋದಲ್ಲಿ ಸ್ಪಷ್ಟವಾಗಿ ಕಂಡುಬಂದಿದೆ.
ಇನ್ನು ಐಪಿಎಲ್ ನಿಯಮಾವಳಿಗಳನ್ನು ಗಾಳಿಗೆ ತೂರಿ ಕ್ರೀಡಾಂಗಣದಲ್ಲಿ ಮೊಬೈಲ್ ಬಳಕೆ ಮಾಡಿದ ಆರೋಪಕ್ಕಾಗಿ ರಾಜಸ್ತಾನ ರಾಯಲ್ಸ್ ತಂಡದ ಮೇಲೆ ಬಿಸಿಸಿಐ ಶಿಸ್ತುಕ್ರಮ ಜರುಗಿಸುವ ಸಾಧ್ಯತೆ ಇದೆ. ಇದನ್ನೂ ಓದಿ: ನಿಮ್ಮ ನಿರ್ಧಾರ ತಂಡದ ಆತ್ಮವಿಶ್ವಾಸ ಕುಗ್ಗಿಸಿದೆ: ಮಿಲ್ಲರ್ ವಿರುದ್ಧ ಆರ್.ಅಶ್ವಿನ್ ಬೇಸರ

