ಒಡಿಶಾಗೆ ಅಪ್ಪಳಿಸಲಿದೆ ವರ್ಷದ ಮೊದಲ ಸೈಕ್ಲೋನ್ ಮೋಚಾ

Public TV
1 Min Read

ನವದೆಹಲಿ: ಈ ವರ್ಷದ ಮೊದಲ ಚಂಡಮಾರುತ (Cyclone) ‘ಮೋಚಾ’ (Mocha) ಒಡಿಶಾಗೆ (Odisha) ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಚುನಾವಣೆಯ ಕಾವಿನಲ್ಲಿರುವ ಕರ್ನಾಟಕಕ್ಕೂ ಮೋಚಾ ಚಂಡಮಾರುತದ ಎಫೆಕ್ಟ್ ಇರಲಿದೆ ಎನ್ನಲಾಗಿದೆ.

ಐಎಂಡಿ ಮುನ್ಸೂಚನೆ ಪ್ರಕಾರ ಮೇ 6ರ ವೇಳೆಗೆ ಆಗ್ನೇಯ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುವ ಸಾಧ್ಯತೆಯಿದೆ. ವಾಯುಭಾರ ಕುಸಿತದ ಹಿನ್ನೆಲೆ ಚಂಡಮಾರುತ ಉಂಟಾಗಲಿದ್ದು, ಬಳಿಕ ಇದು ತೀವ್ರಗೊಂಡು ಮಧ್ಯ ಬಂಗಾಳಕೊಲ್ಲಿಯ ಕಡೆಗೆ ಸುಮಾರು ಉತ್ತರಕ್ಕೆ ಚಲಿಸುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಇದನ್ನೂ ಓದಿ: ಮೋದಿ ಸಾಕ್ಷ್ಯಾಚಿತ್ರ ಪ್ರಕರಣ – ಬಿಬಿಸಿಗೆ ಸಮನ್ಸ್ ನೀಡಿದ ದೆಹಲಿ ಕೋರ್ಟ್

ಇದೀಗ ಸಂಭವನೀಯ ಮೋಚಾ ಚಂಡಮಾರುತದ ಹಿನ್ನೆಲೆ ಐಎಂಡಿಯಿಂದ ರಾಜ್ಯಗಳಿಗೆ ಹೈ ಅಲರ್ಟ್ ನೀಡಲಾಗಿದೆ. ಕರಾವಳಿ ತೀರಗಳಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಇಲಾಖೆ ಸೂಚನೆ ನೀಡಿದೆ. ಚಂಡಮಾರುತದ ಬಗ್ಗೆ ಭಯ ಬೇಡ, ಆದರೆ ಯಾವುದೇ ಘಟನೆಗಳನ್ನು ಎದುರಿಸಲು ಸಿದ್ಧರಾಗಿರಿ ಎಂದು ಐಎಂಡಿ ಮಹಾನಿರ್ದೇಶಕ ಮೃತ್ಯುಂಜಯ್ ಮೋಹಾಪಾತ್ರಾ ತಿಳಿಸಿದ್ದಾರೆ. ಇದನ್ನೂ ಓದಿ: ಛತ್ತಿಸ್‌ಗಢದಲ್ಲಿ ಎಸ್‌ಯುವಿ, ಟ್ರಕ್ ಮುಖಾಮುಖಿ ಡಿಕ್ಕಿ – 11 ಮಂದಿ ಸಾವು

Share This Article