ನೇಪಾಳ ಹಂಗಾಮಿ ಪ್ರಧಾನಿ ಸುಶೀಲಾ ಕರ್ಕಿಗೆ ಶುಭ ಕೋರಿದ ಪ್ರಧಾನಿ ಮೋದಿ

Public TV
1 Min Read

ನವದೆಹಲಿ: ನೇಪಾಳದ (Nepal) ಹಂಗಾಮಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಿವೃತ್ತ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ (Sushila Karki) ಅವರಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಶುಭ ಕೋರಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ಅಭಿನಂದನೆ ಸಲ್ಲಿಸಿದ ಅವರು, ನೇಪಾಳದ ಮಧ್ಯಂತರ ಪ್ರಧಾನ ಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಗೌರವಾನ್ವಿತ ಸುಶೀಲಾ ಕರ್ಕಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ನೇಪಾಳದ ಸಹೋದರ, ಸಹೋದರಿಯರ ಶಾಂತಿ, ಪ್ರಗತಿ ಮತ್ತು ಸಮೃದ್ಧಿಗೆ ಭಾರತ ಸಂಪೂರ್ಣವಾಗಿ ಬದ್ಧವಾಗಿದೆ ಎಂದಿದ್ದಾರೆ. ಇದನ್ನೂ ಓದಿ: ನೇಪಾಳಕ್ಕೆ ಮೊದಲ ಮಹಿಳಾ ಪ್ರಧಾನಿ – ಪ್ರಮಾಣವಚನ ಸ್ವೀಕರಿಸಿದ ಸುಶೀಲಾ ಕರ್ಕಿ

ನೇಪಾಳದ ಮಾಜಿ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ ಅವರು ಮಧ್ಯಂತರ ಪ್ರಧಾನಿಯಾಗಿ ಶುಕ್ರವಾರ ರಾತ್ರಿ ಪ್ರಮಾಣ ವಚನ ಸ್ವೀಕರಿಸಿದರು. ಅಧ್ಯಕ್ಷ ರಾಮಚಂದ್ರ ಪೌಡೆಲ್ ಅವರು ಕರ್ಕಿ ಅವರಿಗೆ ಪ್ರಮಾಣ ವಚನ ಬೋಧಿಸಿದರು.

ಸಾಮಾಜಿಕ ಜಾಲತಾಣಗಳ ನಿಷೇಧ ಮತ್ತು ಭ್ರಷ್ಟಾಚಾರದ ವಿರುದ್ಧ ನೇಪಾಳ ಜನತೆ ಸಿಡಿದೆದ್ದು ಭಾರೀ ಪ್ರತಿಭಟನೆ ನಡೆಸಿದ್ದರು. ಸರ್ಕಾರಿ ಕಚೇರಿಗಳು, ಸಂಸತ್ ಭವನಕ್ಕೆ ನುಗ್ಗಿ ಧ್ವಂಸಗೊಳಿಸಿದರು. ಸಚಿವರನ್ನು ಹಿಡಿದು ಥಳಿಸಿದರು. ಪ್ರತಿಭಟನೆ ತೀವ್ರತೆ ಅರಿತು ಪ್ರಧಾನಿ ಸ್ಥಾನಕ್ಕೆ ಕೆ.ಪಿ.ಶರ್ಮಾ ಓಲಿ (KP Sharma Oli)  ರಾಜೀನಾಮೆ ನೀಡಿದರು.

Share This Article