ತುಮಕೂರು: ಮೋದಿ (Narendra Modi) ಅವರು ನೂರು ವರ್ಷ ಬಾಳಬೇಕು, ಅವರ ಸೇವೆ ಭಾರತಕ್ಕೆ ಇನ್ನೂ ಬೇಕಾಗಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ (V Somanna) ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಅವರ 75ನೇ ಹುಟ್ಟುಹಬ್ಬವನ್ನು ತುಮಕೂರಿನಲ್ಲಿ (Tumakuru) ಇಂದು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಮೋದಿ ಹುಟ್ಟುಹಬ್ಬ ಹಿನ್ನೆಲೆ ಸೋಮಣ್ಣರ ನೇತೃತ್ವದಲ್ಲಿ ಪ್ರವಾಸಿ ಮಂದಿರದ ಅವರ ಕಚೇರಿ ಆವರಣದಲ್ಲಿ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇದನ್ನೂ ಓದಿ: ತ್ರಿವಳಿ ತಲಾಖ್ ನಿಷೇಧದ ಬಳಿಕವೂ ಹೆಂಡತಿಗೆ ತಲಾಖ್ ನೀಡಿದ ಗಂಡ
ಆರೋಗ್ಯ ತಪಾಸಣೆ ಶಿಬಿರ, ರಕ್ತದಾನ ಶಿಬಿರ ಆಯೋಜನೆ ಮಾಡಲಾಗಿತ್ತು. ಸ್ವತಃ ಸಚಿವ ಸೋಮಣ್ಣ ಬಿ.ಪಿ. ಹಾಗೂ ಶುಗರ್ ಚೆಕ್ ಮಾಡಿಸಿಕೊಂಡರು. ಅದಕ್ಕೂ ಮುನ್ನ ಕ್ಯಾತಸಂದ್ರದ ಸರ್ಕಾರಿ ಮಾದರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣೆ ಮಾಡಿದರು. ತುಮಕೂರು ಲೋಕಸಭಾ ವ್ಯಾಪ್ತಿಯ 40 ಸಾವಿರ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣೆ ಮಾಡಲಾಯಿತು. ಇದನ್ನೂ ಓದಿ: ಕೆಟ್ಟ ರಸ್ತೆಯಿಂದ ಬೆಂಗಳೂರು ತೊರೆಯಲು ಮುಂದಾದ 10,900 ಕೋಟಿ ಮೌಲ್ಯದ BlackBuck ಕಂಪನಿ
ಈ ವೇಳೆ ಮಾಧ್ಯಮದವರ ಜೊತೆ ಮಾತನಾಡಿದ ವಿ ಸೋಮಣ್ಣ, ಪ್ರಧಾನಿ ಮೋದಿ ಭಾರತವನ್ನು ವಿಶ್ವಗುರುವನ್ನಾಗಿ ಮಾಡಿಸಿದ್ದಾರೆ. ಮೋದಿ ಅವರ ನಾಯಕತ್ವ ಇಡೀ ವಿಶ್ವ ಒಪ್ಪಿಕೊಳ್ಳುತ್ತಿದೆ. ಕಳೆದ 11 ವರ್ಷದಲ್ಲಿ ಭಾರತ ಹಿಂದೆಂದೂ ಕಂಡಿರದಂತಹ ಅಭಿವೃದ್ಧಿ ಕಂಡಿದೆ ಎಂದರು. ಇದೇ ವೇಳೆ ಮೋದಿ ಅವರ ನಿವೃತ್ತಿ ಬಗ್ಗೆ ಮಾತನಾಡಿ, ಈಗಾಗಲೇ ಆರ್‌ಎಸ್‌ಎಸ್ ಮುಖ್ಯಸ್ಥರು ಅದರ ಬಗ್ಗೆ ಸ್ಪಷ್ಟಪಡಿಸಿದ್ದಾರೆ. ಮೋದಿ ಅವರ ಸೇವೆ ಇನ್ನೂ ದೇಶಕ್ಕೆ ಬೇಕು ಎಂದು ತಿಳಿಸಿದರು. ಇದನ್ನೂ ಓದಿ: 1 ಕೋಟಿ ನಗದು, 20 ಕೆಜಿ ಚಿನ್ನ ಸೇರಿ 21 ಕೋಟಿ ದರೋಡೆಯಾಗಿದೆ – ಎಸ್ಪಿ ಲಕ್ಷ್ಮಣ ನಿಂಬರಗಿ