ವಡೋದರಾದಲ್ಲಿ ಮೋದಿ ರೋಡ್‌ ಶೋ – ಪುಷ್ಪವೃಷ್ಟಿಗೈದು ಸ್ವಾಗತಿಸಿದ ಕರ್ನಲ್ ಸೋಫಿಯಾ ಕುಟುಂಬಸ್ಥರು

Public TV
2 Min Read

ಗಾಂಧಿನಗರ: ಗುಜರಾತ್‌ನ ವಡೋದರಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ರೋಡ್‌ ಶೋ ಕಾರ್ಯಕ್ರಮದಲ್ಲಿ ಕರ್ನಲ್ ಸೋಫಿಯಾ ಖುರೇಷಿ (Colonel Sofiya Qureshi) ಅವರ ಕುಟುಂಬಸ್ಥರು ಭಾಗಿಯಾಗಿದ್ದರು.

ಪ್ರಧಾನಿ ಮೋದಿ (PM Narendra Modi) ಅವರು ಹತ್ತಿರ ಬರುತ್ತಿದ್ದಾಗ ಸೋಫಿಯಾ ತಾಯಿ ಹಲೀಮಾ ಬೀಬಿ ಸೇರಿದಂತೆ ಕುಟುಂಬ ಸದಸ್ಯರು ಪುಷ್ಪವೃಷ್ಟಿ ಮಾಡಿ ಸ್ವಾಗತಿಸಿದರು. ಇದನ್ನೂ ಓದಿ: ಆಪರೇಷನ್ ಸಿಂಧೂರವನ್ನು ಜಗತ್ತಿಗೆ ವಿವರಿಸಿದ್ದ ಕರ್ನಲ್ ಸೋಫಿಯಾ ಬೆಳಗಾವಿಯ ಸೊಸೆ!

ಮಾಧ್ಯಮದ ಜೊತೆ ಮಾತನಾಡಿದ ಹಲೀಮಾ ಬೀಬಿ, ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿದನ್ನು ನೋಡಿ ಸಂತೋಷವಾಯಿತು. ಮಹಿಳೆಯರು ಮತ್ತು ಸಹೋದರಿಯರು ಆಪರೇಷನ್ ಸಿಂಧೂರ ಬಗ್ಗೆ ಸಂತೋಷಪಟ್ಟಿದ್ದಾರೆ ಎಂದು ತಿಳಿಸಿದರು.


ಕರ್ನಲ್ ಸೋಫಿಯಾ ಖುರೇಷಿ ಅವರ ಅವಳಿ ಸಹೋದರಿ ಶೈನಾ ಸುನ್ಸಾರಾ ಮಾತನಾಡಿ, ಮಹಿಳಾ ಸಬಲೀಕರಣಕ್ಕಾಗಿ ಪ್ರಧಾನಿ ಮೋದಿ ಬಹಳಷ್ಟು ಕೆಲಸ ಮಾಡಿದ್ದಾರೆ. ಸೋಫಿಯಾ ನನ್ನ ಅವಳಿ ಸಹೋದರಿ. ಸಹೋದರಿ ದೇಶಕ್ಕಾಗಿ ಏನಾದರೂ ಮಾಡಿದಾಗ, ಅದು ನನಗೆ ಮಾತ್ರವಲ್ಲದೆ ಇತರರಿಗೂ ಸ್ಫೂರ್ತಿ ನೀಡುತ್ತದೆ. ಆಕೆ ಇನ್ನು ಮುಂದೆ ನನ್ನ ಸಹೋದರಿ ಮಾತ್ರವಲ್ಲ, ದೇಶದ ಸಹೋದರಿ ಎಂದು ಹೇಳಿದರು. ಇದನ್ನೂ ಓದಿ: ಸಿಂಧೂರ ಅಳಿಸಿದವರಿಗೆ ನಾರಿ ಶಕ್ತಿಯಿಂದಲೇ ಭಾರತ ಉತ್ತರ – ಕರ್ನಲ್ ಸೋಫಿಯಾ, ವಿಂಗ್ ಕಮಾಂಡರ್ ವ್ಯೋಮಿಕಾ ಬಗ್ಗೆ ಗೊತ್ತಾ?

Share This Article