ಮೋದಿ ಬಂಡೀಪುರ ಭೇಟಿ – ಏ.8ರಿಂದ ವಾಹನ ಸಂಚಾರ ಬಂದ್‌

Public TV
1 Min Read

ಚಾಮರಾಜನಗರ: ಬಂಡೀಪುರ ಹುಲಿ ಯೋಜನೆಗೆ (Bandipur Tiger Project) 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಏಪ್ರಿಲ್ 9 ರಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಬಂಡೀಪುರಕ್ಕೆ ಭೇಟಿ ಕೊಡಲಿದ್ದಾರೆ. ಬಂಡೀಪುರ (Bandipur Tiger Reserve) ಹೊರ ವಲಯದ ಮೇಲುಕಾಮನಹಳ್ಳಿ ಬಳಿ 3 ಹೆಲಿಪ್ಯಾಡ್‌ ನಿರ್ಮಾಣ ಮಾಡಲಾಗಿದ್ದು, ಮೋದಿ ಭೇಟಿಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಭದ್ರತಾ ಕ್ರಮವಾಗಿ ಶುಕ್ರವಾರ ಸಂಜೆ 4 ಗಂಟೆಯಿಂದಲೇ ಬಂಡೀಪುರ ಮಾರ್ಗವಾಗಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಗಳಲ್ಲಿ (National Highway) ಭಾರೀ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಶನಿವಾರ ಸಂಜೆ 4 ಗಂಟೆಯಿಂದ ಎಲ್ಲಾ ರೀತಿ ವಾಹನಗಳ ಸಂಚಾರಕ್ಕೂ ನಿರ್ಬಂಧ ಇರಲಿದೆ. ಇದನ್ನೂ ಓದಿ: ಏ. 9ಕ್ಕೆ ಮೋದಿ ಬಂಡೀಪುರ ಭೇಟಿ – ಪ್ರವಾಸಿಗರಿಗೆ ಇಂದಿನಿಂದ 4 ದಿನ ಸಫಾರಿ, ರೆಸಾರ್ಟ್ ವಾಸ್ತವ್ಯ ಬಂದ್

ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 181 ಹಾಗೂ ಕೇರಳಕ್ಕೆ ಸಂಪರ್ಕ ಕಲ್ಪಿಸುವ NH 766 ರಲ್ಲಿ ಕಟ್ಟುನಿಟ್ಟಿನ ಕ್ರಮ ವಹಿಸಲಾಗಿದೆ. ಏಪ್ರಿಲ್ 8ರ ಸಂಜೆ 4 ಗಂಟೆಯಿಂದ ಏಪ್ರಿಲ್‌ 9ರ ಮಧ್ಯಾಹ್ನ 12 ಗಂಟೆವರೆಗೆ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಇದನ್ನೂ ಓದಿ: ರಾಷ್ಟ್ರ ರಾಜಕಾರಣಕ್ಕೆ ಹೋಗಲು ಯತ್ನಿಸಿ ಸೋತರು; ರಾಜ್ಯ ರಾಜಕಾರಣದಲ್ಲೇ ಗೆಲುವು ಕಂಡರು!

ಈಗಾಗಲೇ ಏಪ್ರಿಲ್‌ 6ರಿಂದಲೇ ಸಫಾರಿ, ರೆಸಾರ್ಟ್, ಹೋಂ ಸ್ಟೇ, ರೆಸಾರ್ಟ್ ‌ಗಳಲ್ಲಿ ಪ್ರವಾಸಿಗರ ವಾಸ್ತವ್ಯಕ್ಕೆ ನಿಷೇಧ ಹೇರಲಾಗಿದೆ. ಎಲ್ಲಾ ರೀತಿಯ ಡ್ರೋನ್ ಹಾರಾಟಕ್ಕೂ ಕಡಿವಾಣ ಹಾಕುವಂತೆ ಜಿಲ್ಲಾಧಿಕಾರಿ ರಮೇಶ್ ಆದೇಶ ಹೊರಡಿಸಿದ್ದಾರೆ.

Share This Article