ಮೋದಿ, ಯೋಗಿ ನಿಂದಿಸಿ, ಕೊಲೆ ಬೆದರಿಕೆ ಪ್ರಕರಣ- ಅಣ್ಣ ಮಾಡಿದ ತಪ್ಪಿಗೆ ತಮ್ಮ ಕ್ಷಮೆ

Public TV
1 Min Read

ಯಾದಗಿರಿ: ಪ್ರಧಾನಿ ಹಾಗೂ ಉತ್ತರಪ್ರದೇಶದ ಮುಖ್ಯಮಂತ್ರಿಯನ್ನು ನಿಂದಿಸಿ ಜೀವ ಬೆದರಿಕೆ‌ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಣ್ಣ ಮಾಡಿರುವ ತಪ್ಪಿಗೆ ತಮ್ಮ ಕ್ಷಮೆ ಕೋರಿದ್ದಾನೆ.

ಈ ಸಂಬಂಧ ಆಡಿಯೋ ಬಿಡುಗಡೆ ಮಾಡಿರುವ ಆರೋಪಿ ಮಹಮದ್ ರಸೂಲ್ ನ ತಮ್ಮ ಖಾಜಾ, ನಾನು ನಮ್ಮ ಅಣ್ಣ ತಪ್ಪು ಮಾಡಿರುವ ಹಿನ್ನೆಲೆ ನಾನು ಆತನನ್ನು ಕರೆಸಿ ಪೊಲೀಸರಿಗೆ ಒಪ್ಪಿಸಿದ್ದೇನೆ. ನಾನು ಪಿಎಂ ಮೋದಿ, ಸಿಎಂ ಯೋಗಿ, ರಾಜಾಸಿಂಗ್ ಅವರಿಗೆ ಕ್ಷಮೆ ಕೋರುತ್ತೇನೆ. ನಮ್ಮ ಅಣ್ಣ ಕುಡಿದ ಮತ್ತಿನಲ್ಲಿ ಈ ರೀತಿ ಮಾತನಾಡಿದ್ದಾನೆ. ಎಲ್ಲಾ ಬಿಜೆಪಿ ಕಾರ್ಯಕರ್ತರಲ್ಲಿಯೂ ಕ್ಷಮೆಯಾಚಿಸುತ್ತೇನೆ ಎಂದು ಹೇಳಿದ್ದಾನೆ.

ಏನಿದು ಪ್ರಕರಣ..?: ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಹಾಗೂ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ (Yogi Adityanath) ವಿರುದ್ದ ಯಾದಗಿರಿಯ ಸುರಪುರದ ಮಹಮದ್ ರಸೂಲ್ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ್ದ. ಈ ಘಟನೆಗೆ ಸಂಬಂಧಿಸಿದಂತೆ ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ‌.

ಆರೋಪಿ ಮಹಮದ್ ರಸೂಲ್ ನ ತಮ್ಮ ಖಾಜಾ ಸುರಪುರದ ಬಿಜೆಪಿ ಕಾರ್ಯಕರ್ತನಾಗಿದ್ದು ಪಿಎಂ ಮೋದಿ ಹಾಗೂ ಸಿಎಂ ಯೋಗಿ ಆದಿತ್ಯನಾಥ ಅಭಿಮಾನಿಯಾಗಿದ್ದಾನೆ. ಇದನ್ನೂ ಓದಿ: ಮೋದಿ ರ‍್ಯಾಲಿಯಲ್ಲಿ ಪಾಲ್ಗೊಳ್ಳಲು ಹೊರಟಿದ್ದ ಸಂದೇಶ್‌ಖಾಲಿ ಮಹಿಳೆಯರಿದ್ದ ಬಸ್‌ಗಳಿಗೆ ತಡೆ

Share This Article