ಉಕ್ರೇನ್‌ಗೆ ಮೋದಿ ಭೇಟಿ – ಝೆಲೆನ್ಸ್ಕಿ ಜೊತೆ ಮಾತುಕತೆ; ಯುದ್ಧದಲ್ಲಿ ಮಡಿದ ಮಕ್ಕಳ ಸ್ಮಾರಕ ವೀಕ್ಷಿಸಿದ ಪ್ರಧಾನಿ!

Public TV
2 Min Read

ಕೈವ್‌: ಕಳೆದ ಎರಡೂವರೆ ವರ್ಷಗಳಿಂದ ಯುದ್ಧದ ಕುಲುಮೆಯಲ್ಲಿ ಬೇಯುತ್ತಿರುವ ಉಕ್ರೇನ್‌ಗೆ ಇದೀಗ ಪ್ರಧಾನಿ ಮೋದಿ ಭೇಟಿ ನೀಡಿದ್ದಾರೆ. ಉಕ್ರೇನ್‌ನ ಕೈವ್‌ಗೆ ಬಂದಿಳಿದಿರುವ ನಮೋ (Narendra Modi) ಶುಕ್ರವಾರ (ಆ.23) ಅಧ್ಯಕ್ಷ ವ್ಲಾಡಮಿರ್‌ ಝೆಲೆನ್ಸ್ಕಿ (Volodymyr Zelensky) ಅವರನ್ನು ಭೇಟಿಯಾಗಿದ್ದಾರೆ. ಇದಕ್ಕೂ ಮುನ್ನ ಪ್ರಧಾನಿ ಮೋದಿ ಕೈವ್‌ನ ರೈಲ್ವೆ ನಿಲ್ದಾಕ್ಕೆ ಬಂದಿಳಿಯುತ್ತಿದ್ದಂತೆ ಅಲ್ಲಿನ ಭಾರತೀಯರು ಆತ್ಮೀಯವಾಗಿ ಸ್ವಾಗತ ಕೋರಿದ್ದಾರೆ.

ನಂತರ ಕೈವ್‌ನಲ್ಲಿ (Kyiv) ಭೇಟಿಯಾದ ಉಭಯ ನಾಯಕರು ಪರಸ್ಪರ ಕೈಕುಲುಕಿ ಅಪ್ಪಿಕೊಂಡಿದ್ದಾರೆ. ಪ್ರಧಾನಿ ಉಕ್ರೇನ್‌ಗೆ ಭೇಟಿ (PM Modi In UKraine) ನೀಡಿದ ಫೋಟೋ ವೀಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ಸದ್ದು ಮಾಡುತ್ತಿವೆ. ಇದನ್ನೂ ಓದಿ: ನೇಪಾಳದಲ್ಲಿ ನದಿಗೆ ಉರುಳಿತು 40 ಭಾರತೀಯರಿದ್ದ ಬಸ್ಸು – 14 ಮಂದಿ ಸಾವು

ಶುಕ್ರವಾರ ಕೈವ್‌ನಲ್ಲಿ ಭೇಟಿಯಾದ ಉಭಯ ನಾಯಕರು ದ್ವಿಪಕ್ಷೀಯ ಸಭೆ ನಡೆಸಿದ್ದಾರೆ. 30 ವರ್ಷಗಳ ಹಿಂದೆ ಭಾರತ ಮತ್ತು ಉಕ್ರೇನ್ ನಡುವೆ ರಾಜತಾಂತ್ರಿಕ ಸಂಬಂಧಗಳನ್ನು ಸ್ಥಾಪಿಸಿದ ನಂತರ ದೇಶಕ್ಕೆ ಕಾಲಿಟ್ಟ ಮೊದಲ ಭಾರತೀಯ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಪ್ರಧಾನಿ ಮೋದಿ ಅವರ ಉಕ್ರೇನ್ ಭೇಟಿ ಐತಿಹಾಸಿಕವಾಗಿದೆ. ಉಕ್ರೇನ್ ಮತ್ತು ರಷ್ಯಾ ನಡುವಿನ ನಡೆಯುತ್ತಿರುವ ಸಂಘರ್ಷದ ನಡುವೆ ಪ್ರಧಾನಿ ಮೋದಿ ಮತ್ತು ಝೆಲೆನ್ಸ್ಕಿ ಭೇಟಿ ಬಹಳ ಮಹತ್ವವನ್ನು ಪಡೆದುಕೊಂಡಿದೆ.

ನಂತರ ಮುನ್ನ ರಷ್ಯಾ ದಾಳಿಯಲ್ಲಿ ಹುತಾತ್ಮರಾದವರಿಗೆ ಮೋದಿ ನಮನ ಸಲ್ಲಿಸಿದ್ರು. ಉಕ್ರೇನ್‌ನ ಇತಿಹಾಸದ ಮ್ಯೂಸಿಯಂ ವೀಕ್ಷಿಸಿದ್ರು. ಹುತಾತ್ಮರ ಸ್ಮಾರಕದ ಬಳಿ ಮೋದಿ ಅವರನ್ನು ಉಕ್ರೇನ್ ಅಧ್ಯಕ್ಷ ಝೆಲೆನ್‌ಸ್ಕಿ ತಬ್ಬಿಕೊಂಡ್ರು. ನಂತರ ರಷ್ಯಾ-ಉಕ್ರೇನ್ ಯುದ್ಧವನ್ನು ಕೊನೆಗಾಣಿಸುವ ಸಂಬಂಧ ಉಭಯ ನಾಯಕರು ಮಹತ್ವದ ಚರ್ಚೆ ನಡೆಸಿದ್ರು. ರಷ್ಯಾ ಹಾಗೂ ಉಕ್ರೇನ್ ಸಂಘರ್ಷ ಮಕ್ಕಳಿಗೆ ವಿನಾಶಕಾರಿ ಎಂದ ಮೋದಿ, ಶಾಂತಿ ಮರುಸ್ಥಾಪನೆ ಅಗತ್ಯವನ್ನು ಒತ್ತಿ ಹೇಳಿದ್ರು. ಇದನ್ನೂ ಓದಿ: ಮಾಜಿ ಪ್ರಧಾನಿ ಶೇಖ್‌ ಹಸೀನಾ, ಬಾಂಗ್ಲಾದ ಆಲ್‌ರೌಂಡರ್‌ ಶಕೀಬ್‌ ವಿರುದ್ಧ ಕೊಲೆ ಪ್ರಕರಣ ದಾಖಲು

ಇದೇ ವೇಳೆ, ಉಭಯ ದೇಶಗಳ ಮಧ್ಯೆ 4 ಒಪ್ಪಂದಗಳಾದವು. ಇದಕ್ಕೂ ಮುನ್ನ, ಮಹಾತ್ಮ ಗಾಂಧಿ ವಿಗ್ರಹಕ್ಕೆ ಪುಷ್ಪ ನಮನ ಸಲ್ಲಿಸಿದ ಮೋದಿ, ಬಾಪೂಜಿ ಆಶಯಗಳು ವಿಶ್ವವ್ಯಾಪಿಯಾಗಿವೆ. ಕೋಟ್ಯಂತರ ಮಂದಿಗೆ ಸ್ಪೂರ್ತಿಯಾಗಿದೆ ಎಂದು ಬಣ್ಣಿಸಿದ್ರು. ಗಾಂಧಿ ತೋರಿಸಿದ ಹಾದಿಯಲ್ಲಿ ನಡೆಯಬೇಕೆಂದು ಮೋದಿ ಕರೆ ಕೊಟ್ಟರು. ಇದೇ ವೇಳೆ ಅವರು 2022ರಲ್ಲಿ ಉಕ್ರೇನ್‌-ರಷ್ಯಾ ಯುದ್ಧದ ಸಂದರ್ಭದಲ್ಲಿ ಅಲ್ಲಿ ಸಿಲುಕಿದ್ದ ಭಾರತೀಯ ವಿದ್ಯಾರ್ಥಿಗಳ ರಕ್ಷಣೆಗೆ ಸಹಾಯ ಮಾಡಿದ ಪೋಲೆಂಡ್‌ಗೆ ಕೃತಜ್ಞತೆ ಸಲ್ಲಿಸಿದರು.

ಉಕ್ರೇನ್ ಸಂಘರ್ಷದ ಸಂದರ್ಭದಲ್ಲಿ ಭಾರತೀಯ ವಿದ್ಯಾರ್ಥಿಗಳನ್ನ ರಕ್ಷಿಸಲು ನೀವು ನೀಡಿದ ಸಹಾಯವನ್ನು ಭಾರತದ ಜನರು ಎಂದಿಗೂ ಮರೆಯಲು ಸಾಧ್ಯವಿಲ್ಲ. ಇದಕ್ಕಾಗಿ ನಾನು ಸರ್ಕಾರ ಮತ್ತು ಪೋಲೆಂಡ್ ಜನರಿಗೆ ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಹೇಳಿ ಪೋಲೆಂಡ್‌ ಪ್ರಧಾನಿ ಡೊನಾಲ್ಡ್ ಟಸ್ಕ್ ಅವರಿಗೆ ಆತ್ಮೀಯ ಧನ್ಯವಾದ ಅರ್ಪಿಸಿದರು. ಇದನ್ನೂ ಓದಿ: ನಮ್ಮ ಸಂಸ್ಕೃತಿಯಲ್ಲಿ ಮಾನವೀಯತೆಯೇ ಮೊದಲು, ಯುದ್ಧದ ಸಮಯವಲ್ಲ: ಪೋಲೆಂಡ್‍ನಲ್ಲಿ ಮೋದಿ ಶಾಂತಿ ಮಂತ್ರ

Share This Article