ಅಭಿಮಾನಿಗಳಿಗೆ ಸಿಹಿಸುದ್ದಿ ಕೊಟ್ಟ ರಾಧಿಕಾ ಪಂಡಿತ್

Public TV
1 Min Read

ಸ್ಯಾಂಡಲ್‌ವುಡ್ ನಟಿ ರಾಧಿಕಾ ಪಂಡಿತ್ (Radhika Pandit) ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಬಹುದಿನಗಳ ನಂತರ ಅಭಿಮಾನಿಗಳ ಪ್ರಶ್ನೆಗೆ ಉತ್ತರಿಸಲು ರೆಡಿಯಾಗಿದ್ದಾರೆ. ಈ ಬಗ್ಗೆ ನಟಿ ಅಪ್‌ಡೇಟ್ ಕೊಡುತ್ತಿದ್ದಂತೆ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ಇದನ್ನೂ ಓದಿ:ಎಂಟು ನಟಿಯರ ಜೊತೆ ಕಾಣಿಸಿಕೊಂಡ ನಟ ಗಣೇಶ್: ಕೃಷ್ಣಂ ಪ್ರಣಯ ಸಖಿ ಗೀತ

ನಾವು ಮಾತಿಗೆ ಸಿಗದೇ ತುಂಬಾ ಸಮಯವಾಗಿದೆ. ಮೇ 28ರಂದು ‘ನನಗೆ ಏನಾದರೂ ಕೇಳಬಹುದು’ ಎಂದು ನಟಿ ರಾಧಿಕಾ ಪಂಡಿತ್ ಬರೆದಿದ್ದಾರೆ. ಅಭಿಮಾನಿಗಳ ಎಲ್ಲಾ ಪ್ರಶ್ನೆಗೆ ನಟಿ ಉತ್ತರ ನೀಡಲಿದ್ದಾರೆ. ಈ ದಿನಕ್ಕಾಗಿ ಫ್ಯಾನ್ಸ್ ಕೂಡ ಕಾಯ್ತಿದ್ದರು. ನಿಮ್ಮನ್ನು ಕೇಳೋದು ತುಂಬಾ ಇದೆ ಎಂದು ಅಭಿಮಾನಿಗಳಿಂದ ಕಾಮೆಂಟ್‌ಗಳು ಹರಿದು ಬರುತ್ತಿವೆ. ಇದನ್ನೂ ಓದಿ:ವಿಜಯ್ ಹೆಸರು ಹೇಳ್ತಿದ್ದಂತೆ ನಾಚಿ ನೀರಾದ ರಶ್ಮಿಕಾ ಮಂದಣ್ಣ

 

View this post on Instagram

 

A post shared by Radhika Pandit (@iamradhikapandit)

‘ನಂದಗೋಕುಲ’ ಸೀರಿಯಲ್ ಮೂಲಕ ಕಿರುತೆರೆಗೆ ಪಾದಾರ್ಪಣೆ ಮಾಡಿದ್ದ ನಟಿ ರಾಧಿಕಾ ಪಂಡಿತ್ ಬಳಿಕ ‘ಮೊಗ್ಗಿನ ಮನಸ್ಸು’ ಚಿತ್ರದ ಮೂಲಕ ಚಿತ್ರರಂಗಕ್ಕೆ ಪರಿಚಿತರಾದರು. ಬ್ಯಾಕ್ ಟು ಬ್ಯಾಕ್ ಹಿಟ್ ಸಿನಿಮಾಗಳನ್ನು ಕೊಟ್ಟು ಸಕ್ಸಸ್‌ಫುಲ್ ನಟಿ ಎನಿಸಿಕೊಂಡರು.

ಬೇಡಿಕೆ ಇರುವಾಗಲೇ ಯಶ್ (Yash) ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಇಬ್ಬರೂ ಮುದ್ದಾದ ಮಕ್ಕಳಿಗೆ ತಾಯಿಯಾದ ರಾಧಿಕಾ, ಬಣ್ಣದ ಲೋಕದಿಂದ ಅಂತರ ಕಾಯ್ದುಕೊಂಡರು. ಇದೀಗ ಮತ್ತೆ ರಾಧಿಕಾ ಸಿನಿಮಾ ಮಾಡಲಿ ಎಂದು ಅಭಿಮಾನಿಗಳು ಆಶಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಸಿನಿಮಾ ಕುರಿತು ನಟಿ ಗುಡ್ ನ್ಯೂಸ್ ಕೊಡುತ್ತಾರಾ? ಎಂದು ಕಾದುನೋಡಬೇಕಿದೆ.

Share This Article