ಕಾಂಗ್ರೆಸ್ ಕಾರ್ಯಕ್ರಮದ ಫ್ಲೆಕ್ಸ್ ನಲ್ಲಿ ಆರೋಪಿ ನಲಪಾಡ್ ಮಿಂಚಿಂಗ್!

Public TV
1 Min Read

ಬೆಂಗಳೂರು: ಯೂತ್ ಕಾಂಗ್ರೆಸ್ ಕಾರ್ಯಕ್ರಮವೊಂದರ ಬ್ಯಾನರ್ ಗಳಲ್ಲಿ ವಿದ್ವತ್ ಮೇಲಿನ ಹಲ್ಲೆ ಪ್ರಕರಣದ ಆರೋಪಿಯಾಗಿರುವ ಶಾಂತಿನಗರದ ಶಾಸಕ ಹ್ಯಾರಿಸ್ ಪುತ್ರ ನಲಪಾಡ್ ಭಾವಚಿತ್ರ ಬಳಸಲಾಗಿದೆ.

ರಾಷ್ಟ್ರೀಯ ಯೂತ್ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಶ್ರೀನಿವಾಸ್ ಅವರು ಆಯ್ಕೆಯಾಗಿದ್ದಾರೆ. ಹೀಗಾಗಿ ಅವರಿಗೆ ಬೆಂಗಳೂರಿನ ಅರಮನೆ ಮೈದಾನದ ನಲಪಾಡ್ ಪೆವಿಲಿನ್ ನಲ್ಲಿ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಶ್ರೀನಿವಾಸ್ ಅವರಿಗೆ ಶುಭಾಶಯ ಕೋರಲು ಅರಮನೆ ಮುಂಭಾಗದಲ್ಲಿ ಹಾಕಲಾಗಿದ್ದ ಬ್ಯಾನರ್ ಹಾಗೂ ಫ್ಲೆಕ್ಸ್ ಗಳಲ್ಲಿ ನಲಪಾಡ್ ಭಾವಚಿತ್ರ ಬಳಕೆ ಮಾಡಲಾಗಿದೆ.

ವಿದ್ವತ್ ಪ್ರಕರಣದಿಂದಾಗಿ ನಲಪಾಡ್‍ನನ್ನು ಕಾಂಗ್ರೆಸ್ಸಿನಿಂದ ಉಚ್ಛಾಟನೆ ಮಾಡಲಾಗಿತ್ತು. ಆದರೂ ನಲಪಾಡ್ ಫೋಟೋ ಬಳಕೆ ಮಾಡಲಾಗಿದ್ದು, ವಿವಾದಕ್ಕೆ ಕಾರಣವಾಗಿದೆ. ಅಲ್ಲದೇ ಈ ಕಾರ್ಯಕ್ರಮದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ರಾಜ್ಯಸಭಾ ಸದಸ್ಯ ಚಂದ್ರಶೇಖರ್ ಸೇರಿ ಹಲವು ಮುಖಂಡರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಯೂತ್ ಕಾಂಗ್ರೆಸ್ಸಿನ ಉಪಾಧ್ಯಕ್ಷ ಶ್ರೀನಿವಾಸ್ ಅವರಿಗೆ ಬೆಳ್ಳಿ ಗದೆ ನೀಡಿ ಸನ್ಮಾನಿಸಲಾಯಿತು.

ವಿದ್ವತ್ ಮೇಲಿನ ಹಲ್ಲೆ ಪ್ರಕರಣದ ಬಳಿಕ ನಲಪಾಡ್ ನನ್ನು ಬೆಂಗಳೂರು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ಮತ್ತು ಪಕ್ಷದ ಸದಸ್ಯತ್ವದಿಂದ 6 ವರ್ಷಗಳ ಕಾಲ ಉಚ್ಛಾಟಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷರಾಗಿದ್ದ ಡಾ. ಕೆ. ಪರಮೇಶ್ವರ್ ಈ ಕುರಿತು ನಿರ್ಣಯ ತೆಗೆದುಕೊಂಡಿದ್ದು, ಪಕ್ಷದ ನಿರ್ಧಾರವನ್ನು ಕರ್ನಾಟಕ ಕಾಂಗ್ರೆಸ್ ಫೆ.18ರಂದು ಟ್ವೀಟ್ ಮಾಡಿ ತಿಳಿಸಿತ್ತು.

Share This Article
Leave a Comment

Leave a Reply

Your email address will not be published. Required fields are marked *