ಮಂಡ್ಯದಲ್ಲಿ ಸ್ಕ್ಯಾನಿಂಗ್ ಸೆಂಟರ್‌ಗಳ ಮೇಲೆ ನಿಗಾ

Public TV
1 Min Read

ಮಂಡ್ಯ: ಸಕ್ಕರೆ ನಾಡಿನಲ್ಲಿ ಭ್ರೂಣ ಲಿಂಗ ಪತ್ತೆ, ಹತ್ಯೆ ಪ್ರಕರಣ ಬೆಳಕಿಗೆ ಬಂದ ಬಳಿಕ ಇದೀಗ ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ, ಜಿಲ್ಲಾಡಳಿತ ಅಲರ್ಟ್ ಆಗಿದೆ. ಸ್ಕ್ಯಾನಿಂಗ್ ಸೆಂಟರ್‌ಗಳಿಗೆ (Scanning Center) ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಬೆಟ್ಟಸ್ವಾಮಿ, ಡಿಹೆಚ್‌ಒ ಡಾ. ಮೋಹನ್ ತಂಡ ಭೇಟಿ ಕೊಟ್ಟು ಪರಿಶೀಲನೆ ನಡೆಸುತ್ತಿದ್ದಾರೆ.

ಸ್ಕ್ಯಾನಿಂಗ್ ಸೆಂಟರ್‌ನಲ್ಲಿ ಭ್ರೂಣ ಲಿಂಗ ಪತ್ತೆಯಾಗುತ್ತಿದೆಯಾ? ಅನುಮತಿ ಪಡೆದು ಸ್ಕ್ಯಾನಿಂಗ್ ಸೆಂಟರ್ ನಡೆಸಲಾಗುತ್ತಿದೆಯಾ? ಅಲ್ಲದೇ ಸೆಂಟರ್‌ನಲ್ಲಿ ತಜ್ಞ ವೈದ್ಯರು, ರೇಡಿಯಾಲಿಜಿಸ್ಟ್ ಕರ್ತವ್ಯ ನಿರ್ವಹಿಸುತ್ತಿದ್ದಾರಾ? ಎಂದು ಪರಿಶೀಲನೆ ಮಾಡುತ್ತಿದ್ದು, ನಿಯಮ ಮೀರಿದ ಸ್ಕ್ಯಾನಿಂಗ್ ಸೆಂಟರ್‌ಗೆ ಬೀಗ ಹಾಕುತ್ತಿದ್ದಾರೆ. ಇದನ್ನೂ ಓದಿ: ಮೋರಿಯಲ್ಲಿ ಮಗುವಿನ ಮೃತದೇಹ ಪತ್ತೆ ಪ್ರಕರಣ – ಅಂತ್ಯಸಂಸ್ಕಾರಕ್ಕೆ ದಿಕ್ಕು ತೋಚದೇ ಬಿಟ್ಟುಹೋಗಿದ್ದ ಪೋಷಕರು

ಭ್ರೂಣ ಹತ್ಯೆಗೆ ಸಂಬಂಧಿಸಿದಂತೆ ನಿರಂತರವಾಗಿ ಪರಿಶೀಲನೆ ನಡೆಸುತ್ತಿದ್ದು, ವರ್ಷದಲ್ಲಿ 3 ಬಾರಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದೇವೆ. ಭ್ರೂಣ ಲಿಂಗ ಪತ್ತೆ ಪ್ರಕರಣ ಬೆಳಕಿಗೆ ಬಂದ ಬಳಿಕ ಮಂಡ್ಯ ಜಿಲ್ಲೆಯ 55 ಸ್ಕ್ಯಾನಿಂಗ್ ಸೆಂಟರ್‌ಗಳನ್ನು ಪರಿಶೀಲನೆ ಮಾಡುತ್ತಿದ್ದೇವೆ. ನಿಯಮ ಮೀರಿ ಭ್ರೂಣ ಲಿಂಗ ಪತ್ತೆ ಮಾಡಿದರೆ, ಅನುಮತಿ ಇಲ್ಲದೆ, ತಜ್ಞರಿಲ್ಲದೆ ಸ್ಕ್ಯಾನಿಂಗ್ ಮಾಡಿದರೆ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಬೆಟ್ಟಸ್ವಾಮಿ ಖಡಕ್ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಪ್ಯಾಕಿಂಗ್ ಆಹಾರ ಉತ್ಪನ್ನಗಳಿಂದ ಜೀರ್ಣಾಂಗಕ್ಕೆ ಹಾನಿ- ಏಮ್ಸ್ ವೈದ್ಯರಿಂದ ಹೊಸ ವರದಿ


Share This Article