ಮೇ 31ರಂದು ರಾಜ್ಯಕ್ಕೆ ಮುಂಗಾರು ಪ್ರವೇಶ – ಹವಾಮಾನ ಇಲಾಖೆ ಮುನ್ಸೂಚನೆ

Public TV
1 Min Read

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸುತ್ತಿದ್ದು, ಮೇ 31ಕ್ಕೆ ರಾಜ್ಯಕ್ಕೆ ಮುಂಗಾರು (Mansoon Rain) ಪ್ರವೇಶ ಮಾಡಲಿದೆ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಇದೇ ಮೇ 31ರಂದು ನೈರುತ್ಯ ಮುಂಗಾರು ಮಳೆ ಕೇರಳದ ಮೂಲಕ ರಾಜ್ಯ ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಈ ಬಾರಿ ಉತ್ತಮವಾದ ಮುಂಗಾರು ಮಳೆಯಾಗುವ ನಿರೀಕ್ಷೆಯಿದ್ದು, ರಾಜ್ಯದ ಜನತೆಗೆ ನಿಟ್ಟುಸಿರು ಬಿಟ್ಟಂತಾಗಿದೆ. ರಾಜ್ಯದಲ್ಲಿ ಇನ್ನೂ 4 ದಿನ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದನ್ನೂ ಓದಿ: 27 ಮಂದಿ ಬಲಿಯಾದ ರಾಜ್‌ಕೋಟ್‌ ಗೇಮಿಂಗ್‌ ಸೆಂಟರ್‌ಗೆ ಇರಲಿಲ್ಲ Fire NOC

ಕರಾವಳಿಯ ದಕ್ಷಿಣ ಕನ್ನಡ, ಉಡುಪಿಯಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಮಳೆಯಾಗುವ ಸಂಭವವಿದೆ. ಮಲೆನಾಡು, ದಕ್ಷಿಣ ಕರ್ನಾಟಕ ಭಾಗದಲ್ಲಿ ಮಳೆ ಪ್ರಮಾಣ ಕಡಿಮೆ ಇದೆ. ಇದನ್ನೂ ಓದಿ: ಹಾಸನದಲ್ಲಿ ಕಾರು, ಟ್ರಕ್ ನಡುವೆ ಭೀಕರ ಅಪಘಾತ – ಚಿಕ್ಕಬಳ್ಳಾಪುರ ಮೂಲದ 6 ಮಂದಿ ದಾರುಣ ಸಾವು

ಕೊಡಗು, ಚಿಕ್ಕಮಗಳೂರು, ಹಾಸನ, ಬೆಂಗಳೂರು, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ, ಬಾಗಲಕೋಟೆ, ಬೆಳಗಾವಿ, ಹಾವೇರಿ, ಕಲಬುರಗಿಯಲ್ಲಿ ಗುಡುಗು ಮಿಂಚು ಸಹಿತ ಮುಂದಿನ ಎರಡು ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದನ್ನೂ ಓದಿ: ದೆಹಲಿ ಮಕ್ಕಳ ಆಸ್ಪತ್ರೆಯಲ್ಲಿ ಭಾರೀ ಅಗ್ನಿ ದುರಂತ -6 ನವಜಾತ ಶಿಶುಗಳು ಬಲಿ

Share This Article