ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಪುಡಿ ರೌಡಿಗಳು ಪಾನ್ ಶಾಪ್ (Pan Shop) ಮೇಲೆ ದಾಳಿ ನಡೆಸಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ (Bengaluru) ಕತ್ರಿಗುಪ್ಪೆಯಲ್ಲಿ (Kathriguppe) ನಡೆದಿದೆ.
ಕ್ಷುಲ್ಲಕ ಕಾರಣಕ್ಕೆ ಬಷಿರ್ ಎಂಬುವರ ಮನೆಗೆ ನುಗ್ಗಿ 10ಕ್ಕೂ ಹೆಚ್ಚು ಪುಡಿ ರೌಡಿಗಳು ಹಲ್ಲೆ ನಡೆಸಿ ದಾಂಧಲೆ ಮಾಡಿದ್ದಾರೆ. ಪಾನ್ ಶಾಪ್‌ನಲ್ಲಿದ್ದ ಬಾಟಲ್‌ಗಳನ್ನ ಒಡೆದು ಹಾಕಿ ಎಸ್ಕೇಪ್ ಆಗಿದ್ದಾರೆ. ಇದನ್ನೂ ಓದಿ: ಕನ್ನಡ ಹೋರಾಟಗಾರರ ಮೇಲಿನ ಎಲ್ಲ ಕೇಸ್ ವಾಪಸ್‌ಗೆ ತೀರ್ಮಾನ – ಸಿದ್ದರಾಮಯ್ಯ
ಬನಶಂಕರಿ ಮೂರನೇ ಹಂತ ಕತ್ರಿಗುಪ್ಪೆ ಮುಖ್ಯ ರಸ್ತೆಯಲ್ಲಿ ಘಟನೆ ನಡೆದಿದ್ದು, ಮಚ್ಚು, ಲಾಂಗು ಹಿಡಿದು ಹಲ್ಲೆ ನಡೆಸಿದ್ದಾರೆ. ಸಿಕೆ ಅಚ್ಚುಕಟ್ಟು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ನಮ್ಮ ಪೊಲೀಸ್ರಿಗೆ ಕೆಲಸ ಮಾಡಲು ಸ್ವಾತಂತ್ರ್ಯ ಕೊಡ್ಬೇಕು: ಯದುವೀರ್


