ಮಂತ್ರಾಲಯ ಶ್ರೀಗಳಿಂದ ಪರಿಸರ ಜಾಗೃತಿ – 100ಕ್ಕೂ ಹೆಚ್ಚು ಮಣ್ಣಿನ ಗಣೇಶ ವಿತರಣೆ

Public TV
1 Min Read

ರಾಯಚೂರು: ಮಂತ್ರಾಲಯ ಗುರು ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿಯವರು ಮಣ್ಣಿನ ಗಣೇಶ ಮೂರ್ತಿಗಳನ್ನ ಭಕ್ತರಿಗೆ ವಿತರಿಸುವ ಮೂಲಕ ಪರಿಸರ ಜಾಗೃತಿ ಮೂಡಿಸಿದರು.ಇದನ್ನೂ ಓದಿ: ಗಡಿಜಿಲ್ಲೆ ಬೀದರ್‌ನಲ್ಲಿ ನಿರಂತರ ಮಳೆ – ನೂರಾರು ಎಕರೆ ಬೆಳೆ ನೀರುಪಾಲು

ಮಂತ್ರಾಲಯದ ಐತಿಹಾಸಿಕ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಪರಿಸರ ಹಾಗೂ ಸಂಸ್ಕೃತಿ ಉಳಿಸಲು ಮಣ್ಣಿನ ಗಣೇಶ ಮೂರ್ತಿಗಳನ್ನು ಬಳಸುವಂತೆ ಕರೆ ನೀಡಿದರು. ಗಣೇಶ ಉತ್ಸವದ ಮಹತ್ವವನ್ನ ತಿಳಿಸುವ ಮೂಲಕ ಆಚರಣೆಗಳು ಹಾಗೂ ಪರಿಸರ ಒಟ್ಟೊಟ್ಟಿಗೆ ಉಳಿಯಬೇಕು ಮತ್ತು ಬೆಳೆಯಬೇಕು ಎಂದು ತಿಳಿಸಿದರು.

ಮಣ್ಣಿನ ಗಣೇಶ ಮೂರ್ತಿಗಳಿಗೆ ಪೂಜೆ ಸಲ್ಲಿಸಿ, ಮಂಗಳಾರತಿ ಮಾಡಿ ಸಾಂಕೇತಿಕವಾಗಿ ನೂರಾರು ಭಕ್ತರಿಗೆ ಮಣ್ಣಿನ ಗಣೇಶ ಮೂರ್ತಿಗಳನ್ನ ವಿತರಿಸಿದರು. ಪ್ರತಿಯೊಬ್ಬರು ಮಣ್ಣಿನ ಗಣೇಶ ಮೂರ್ತಿಯನ್ನೇ ಪ್ರತಿಷ್ಠಾಪಿಸಿ ಪೂಜಿಸುವಂತೆ ಹೇಳಿದರು.ಇದನ್ನೂ ಓದಿ: ಬಿಹಾರ ಚುನಾವಣೆಗೂ ಮುನ್ನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆ

Share This Article