ಚಾರ್ಮಾಡಿ ಘಾಟ್‌ನಲ್ಲಿ 2 ಪ್ರತ್ಯೇಕ ಕಡೆ ಬಸ್, ವಾಹನ ಪಲ್ಟಿ – 20ಕ್ಕೂ ಹೆಚ್ಚು ಮಂದಿಗೆ ಗಾಯ

1 Min Read

ಮಂಗಳೂರು: ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್‌ನಲ್ಲಿ (Charmadi Ghat) ಎರಡು ಪ್ರತ್ಯೇಕ ಕಡೆಗಳಲ್ಲಿ ಬಸ್ ಮತ್ತು ವಾಹನ ಪಲ್ಟಿಯಾಗಿವೆ. ಅಪಘಾತದಲ್ಲಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಘಾಟ್‌ನ ನಾಲ್ಕನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಗಂಭೀರ ಗಾಯಗೊಂಡವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆ ಆಸ್ಪತ್ರೆಗೆ ದಾಖಲಿಸಲಾಯಿತು. ಸಣ್ಣಪುಟ್ಟ ಗಾಯಾಳುಗಳಿಗೆ ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು. ಇದನ್ನೂ ಓದಿ: ಬಾಗಲಕೋಟೆಯಲ್ಲಿ ಸುಡುವ ಬಿಸಿಲು: ಬತ್ತಿ ಬರಿದಾದ ಐತಿಹಾಸಿಕ ಮುಚಖಂಡಿ ಕೆರೆ!

ಪ್ರಯಾಣಿಕರು ಆಂಧ್ರಪ್ರದೇಶ ಮೂಲದವರು. ಧರ್ಮಸ್ಥಳದಲ್ಲಿ ಮದುವೆ ಕಾರ್ಯಕ್ರಮ ಮುಗಿಸಿ ಹಿಂದಿರುಗುತ್ತಿದ್ದ ವೇಳೆ ಘಟನೆ ನಡೆದಿದೆ. ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಾರ್ಮಾಡಿ ಘಾಟ್‌ನಲ್ಲಿ ಮತ್ತೊಂದು ವಾಹನ ಪಲ್ಟಿಯಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ವಾಹನ ಪಲ್ಟಿಯಾಗಿದೆ. ಘಟನೆಯಲ್ಲಿ ಹಲವರಿಗೆ ಗಾಯಗವಾಗಿದೆ. ಗಾಯಾಳುಗಳನ್ನು ಸ್ಥಳೀಯ ಕಕ್ಕಿಂಜೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Share This Article