3,000ಕ್ಕೂ ಅಧಿಕ ಅಡಿಕೆ ಮರ, 200ಕ್ಕೂ ಅಧಿಕ ತೆಂಗಿನ ಮರಗಳು ನೆಲಸಮ

Public TV
1 Min Read

– ಬೆಳೆ ಹಾನಿ ಪ್ರದೇಶಕ್ಕೆ ರೇಣುಕಾಚಾರ್ಯ ಭೇಟಿ

ದಾವಣಗೆರೆ: ಜಿಲ್ಲೆಯ ಹೊನ್ನಾಳಿ (Honnali) ತಾಲೂಕಿನಲ್ಲಿ ಸುರಿದ ಭಾರೀ ಮಳೆಗೆ (Rain) 3000ಕ್ಕೂ ಅಧಿಕ ಅಡಿಕೆ ಮರಗಳು ಹಾಗೂ 200ಕ್ಕೂ ಅಧಿಕ ತೆಂಗಿನ ಮರಗಳು ಧರೆಗುರುಳಿವೆ. ಬೆಳೆ ಹಾನಿ ಪ್ರದೇಶಕ್ಕೆ ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ (MP Renukacharya) ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಶನಿವಾರ ಸುರಿದ ಧಾರಾಕಾರ ಮಳೆಗೆ ಹೊನ್ನಾಳಿ ತಾಲೂಕಿನ ಮಾಸಡಿ ಗ್ರಾಮವೊಂದರಲ್ಲೇ 3 ಸಾವಿರಕ್ಕೂ ಅಧಿಕ ಅಡಿಕೆ ಮರ ಹಾಗೂ 200ಕ್ಕೂ ಅಧಿಕ ತೆಂಗಿನ ಮರಗಳು ಧರೆಗುರುಳಿವೆ. ಪ್ರತೀ ಎಕರೆಗೆ 50 ರಿಂದ 100 ಮರಗಳು ಧರೆಗೆ ಉರುಳಿವೆ. ಹಾಗೆಯೇ ಪ್ರತಿ ಎಕರೆಗೆ 4 ರಿಂದ 5 ಲಕ್ಷ ರೂ. ಮೌಲ್ಯದ ಅಡಿಕೆ ಬೆಳೆ ಹಾನಿಯಾಗಿದೆ. ಇದನ್ನೂ ಓದಿ: TB Dam – ಸ್ಟಾಪ್ ಲಾಗ್ ಗೇಟ್ ಅಳವಡಿಕೆ ಯಶಸ್ವಿ – ತಾಂತ್ರಿಕ ತಂಡಕ್ಕೆ 2 ಲಕ್ಷ ಬಹುಮಾನ

ಫಲಕ್ಕೆ ಬಂದ ಅಡಿಕೆ ಮರ ಕಳೆದುಕೊಂಡ ರೈತರು ಕಂಗಾಲಾಗಿದ್ದಾರೆ. ಅಷ್ಟೇ ಅಲ್ಲ 16 ವರ್ಷಗಳ ಕಾಲ ಮಕ್ಕಳಂತೆ ಸಾಕಿದ್ದ ಅಡಿಕೆ ಮರ ಧರೆಗುರುಳಿದ್ದನ್ನು ಕಂಡು ರೈತರು ಕಣ್ಣೀರು ಹಾಕಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ನಾಳೆ ಬಿಜೆಪಿ-ಜೆಡಿಎಸ್ ಪ್ರತಿಭಟನೆ

ಬೆಳೆ ಹಾನಿಯಾದ ತೋಟಗಳಿಗೆ ರೈತರೊಂದಿಗೆ ರೇಣುಕಾಚಾರ್ಯ ಭೇಟಿ ನೀಡಿ, ರೈತರಿಗೆ ಧೈರ್ಯ ತುಂಬಿದ್ದಾರೆ. ಹಾನಿಯಾದ ಬೆಳೆಗೆ ಸೂಕ್ತ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಡೆಂಗ್ಯೂ ಬಳಿಕ ಬೆಂಗಳೂರಲ್ಲಿ ಝಿಕಾ ವೈರಸ್ ಕಾಟ – ಜಿಗಣಿಯಲ್ಲಿ 5 ಪ್ರಕರಣ ಪತ್ತೆ

Share This Article