ಚಿಕ್ಕೋಡಿ: ಹಿರೆಕೋಡಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಬೆಳಗ್ಗೆ ಉಪ್ಪಿಟ್ಟು ತಿಂದು 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿದ್ದಾರೆ. ಇಬ್ಬರು ಮಕ್ಕಳ ಸ್ಥಿತಿ ಗಂಭೀರವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಳಿಗ್ಗೆ ಮಕ್ಕಳು ಉಪ್ಪಿಟ್ಟು ಸೇವಿಸಿದ್ದರು. ಬಳಿಕ ಅವರಿಗೆ ವಾಂತಿ ಹಾಗೂ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಅಸ್ವಸ್ಥಗೊಂಡ ಮಕ್ಕಳನ್ನು ಚಿಕ್ಕೋಡಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಸಿಎಂ ನಿವಾಸದ ಮುಂದೆ ಹೊತ್ತಿ ಉರಿದ ಕಾರು – ಕೂದಲೆಳೆ ಅಂತರದಲ್ಲಿ ಚಾಲಕ ಪಾರು
ಈ ವಸತಿ ಶಾಲೆಯಲ್ಲಿ 400ಕ್ಕೂ ಹೆಚ್ಚು ಮಕ್ಕಳಿದ್ದಾರೆ. 6ನೇ ತರಗತಿಯಿಂದ ಪಿಯುಸಿವರೆಗೂ ವ್ಯಾಸಂಗ ಮಾಡುತ್ತಿದ್ದಾರೆ. ಇದನ್ನೂ ಓದಿ: ಸೊಸೆಗೆ ವರದಕ್ಷಿಣೆ ಕಿರುಕುಳ ಆರೋಪ – ಎಸ್.ನಾರಾಯಣ್, ಪತ್ನಿ, ಪುತ್ರನಿಗೆ ನೋಟಿಸ್