ಶವಾಗಾರದಲ್ಲೇ ಯುವತಿಯರ ಜತೆ ಕಾಮದಾಟ – ಸತ್ತ ಮಹಿಳೆಯರ ನಗ್ನ ಫೋಟೋ ತೆಗೆದು ವಿಕೃತಿ ಮೆರೆದ

Public TV
2 Min Read

ಮಡಿಕೇರಿ: ಪೋಸ್ಟ್ ಮಾರ್ಟಂ ಮಾಡುವ ಕೊಠಡಿಯಲ್ಲಿ ಆಸ್ಪತ್ರೆಯ (Hospital) ಯುವತಿ ಹಾಗೂ ಮಹಿಳೆಯರನ್ನು (Woman) ಕರೆಸಿ ಕಾಮದಾಟ ಹಾಗೂ ಮೃತಪಟ್ಟ ಮಹಿಳೆಯರ ನಗ್ನ ಫೋಟೋಗಳನ್ನು (Photo) ತನ್ನ ಮೊಬೈಲ್‍ನಲ್ಲಿ ತೆಗೆದುಕೊಂಡು ಶವಗಾರದಲ್ಲಿ (Mortuary) ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ ವಿಕೃತಿ ಮೆರೆದಿದ್ದಾನೆ.

ಕೊಡಗು (Kodagu) ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಈ ಘಟನೆ ನಡೆದಿದೆ. ಸೈಯ್ಯದ್ ಎಂಬಾತ ಈ ಹೇಯ ಕೃತ್ಯವನ್ನು ಎಸಗಿದ ವ್ಯಕ್ತಿಯಾಗಿದ್ದಾನೆ. ಸಯ್ಯದ್ 2021ರ ಏಪ್ರಿಲ್ ತಿಂಗಳಿನಲ್ಲಿ ಗುತ್ತಿಗೆ ಆಧಾರದಲ್ಲಿ ಶವಾಗಾರದ ಅಟೆಂಡರ್ ಆಗಿ ಕೆಲಸಕ್ಕೆ ಸೇರಿದ್ದ. ಈತನಿಗೆ ಕೋವಿಡ್ ಸಂದರ್ಭದಲ್ಲಿ ತುಂಬಾ ಶ್ರಮಿಸಿದ್ದಾನೆ ಎಂದು ಅಧಿಕಾರಿಗಳು, ಜನಪ್ರತಿನಿಧಿಗಳು ಪ್ರಶಂಸಿಸಿ ಸನ್ಮಾನಿಸಿದ್ದರು.

ಆದರೆ ಸೈಯ್ಯದ್ ಶವಾಗಾರದಲ್ಲಿ ಕೆಲಸ ಮಾಡಿಕೊಂಡೇ ಹೊರಪ್ರಪಂಚಕ್ಕೆ ಗೊತ್ತಾಗದಂತೆ ಮಡಿಕೇರಿ ತಾಲೂಕಿನ ಕಡಗದಾಳು ಗ್ರಾಮದ ಸೈಯದ್ ಆಸ್ಪತ್ರೆಯಲ್ಲಿ ಕೆಲಸ ಮಾಡುವ ಕೆಲವು ಮಹಿಳೆಯರನ್ನು ಫೋನ್ ಕರೆಮಾಡಿ ಶವಾಗಾರಕ್ಕೆ ಕರೆಸಿಕೊಳ್ಳುತ್ತಿದ್ದ. ಶವಗಾರದಲ್ಲೇ ತನ್ನ ಹಲವು ಮಹಿಳೆಯರ ಜೊತೆ ಸೆಕ್ಸ್ ಮಾಡುತ್ತಿದ್ದ. ಅಷ್ಟೇ ಅಲ್ಲದೇ ಅಪಘಾತ ಸೇರಿದಂತೆ ನಾನಾ ರೀತಿಯಲ್ಲಿ ಸತ್ತು ಶವಾಗಾರಕ್ಕೆ ಸೇರುತ್ತಿದ್ದ ಮಹಿಳೆಯರ ನಗ್ನ ಫೋಟೋಗಳನ್ನು ತೆಗೆದು ತನ್ನ ಮೊಬೈಲ್‍ನಲ್ಲೂ ಇಟ್ಟುಕೊಂಡಿದ್ದ.

ಅಷ್ಟಕ್ಕೂ ಈ ಆಡಿಯೋಗಳು ದೊರೆತ್ತಿರುವ ವಿಷಯವೇ ಇಂಟ್ರೆಸ್ಟಿಂಗ್ ಆಗಿದೆ. ಪಾಪಿ ಸೈಯದ್ ತಿಂಗಳ ಹಿಂದೆ ಮಡಿಕೇರಿ ನಗರದ ಮನೆಯೊಂದಕ್ಕೆ ನುಗ್ಗಲು ಯತ್ನಿಸಿದ್ದನಂತೆ. ಈ ವೇಳೆ ಜನರಿಗೆ ಸಿಕ್ಕಿಬಿದ್ದಿದ್ದ. ಆಗ ಆತನಿಗೆ ಗೂಸಾ ಕೊಟ್ಟಿದ್ದ ಜನರು ಆತನ ಫೋನ್ ಅನ್ನು ಪೊಲೀಸ್ ವಶಕ್ಕೆ ನೀಡಿದ್ದರು. ಆತನ ಫೋನ್ ಕರೆಗಳನ್ನು ಪರಿಶೀಲಿಸಿದಾಗ ಆತನ ಯಾರೊಂದಿಗೆಲ್ಲಾ, ಏನೆಲ್ಲಾ ಮಾತನಾಡಿದ್ದಾನೆ ಎನ್ನುವುದು ಬಟಾಬಯಲಾಗಿದೆ. ಇದನ್ನೂ ಓದಿ: ಸಾಮೂಹಿಕ ಅತ್ಯಾಚಾರದ ಆರೋಪ – ಅಂಡಮಾನ್ ಮಾಜಿ ಮುಖ್ಯ ಕಾರ್ಯದರ್ಶಿ ಅರೆಸ್ಟ್

ಅಷ್ಟೇ ಅಲ್ಲದೇ ಸಾಕಷ್ಟು ಹೆಣ್ಣು ಮಕ್ಕಳು, ಮಹಿಳೆಯರನ್ನು ಸಯ್ಯದ್ ದುರ್ಬಳಕೆ ಮಾಡಿಕೊಳ್ಳುತ್ತಿದ್ದ ಎನ್ನುವುದು ಗೊತ್ತಾಗಿದೆ. ಯಾರಾದರೂ ಮಹಿಳೆಯರು, ಹೆಣ್ಣುಮಕ್ಕಳು ಸತ್ತು ಅವರ ಮೃತದೇಹಗಳನ್ನು ಶವಾಗಾರಕ್ಕೆ ಹಾಕಿದರೆ, ಪೋಸ್ಟ್ ಮಾರ್ಟಂಗೂ ಮೊದಲೇ ಈ ಕಿರಾತಕ ಆ ಸತ್ತ ಮಹಿಳೆಯರ, ಹೆಣ್ಣುಮಕ್ಕಳ ಬೆತ್ತಲೇ ಮೃತದೇಹಗಳ ಫೋಟೋಗಳನ್ನು ತನ್ನ ಮೊಬೈಲ್‍ನಲ್ಲಿ ತೆಗೆದುದಿಟ್ಟುಕೊಳ್ಳುತ್ತಿದ್ದ ಎನ್ನುವ ಘೋರ ವಿಷಯವೂ ಗೊತ್ತಾಗಿದೆ. ಇದನ್ನೂ ಓದಿ: ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ – 5 ಸಾವು, 13 ಮಂದಿಗೆ ಗಂಭೀರ ಗಾಯ

ಸಯ್ಯದ್‍ನ ದುಷ್ಕೃತ್ಯ ಗೊತ್ತಾಗುತ್ತಿದ್ದಂತೆ ಸಯ್ಯದ್ ವಿರುದ್ಧ ಹಿಂದೂ ಜಾಗರಣಾ ವೇದಿಕೆಯು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಗಳ ನಿರ್ದೇಶಕ ಹಾಗೂ ಡೀನ್‍ಗೆ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮೆಡಿಕಲ್ ಕಾಲೇಜು ಡೀನ್ ಕಾರಿಯಪ್ಪ ಅವರು ಸಯ್ಯದ್ ವಿರುದ್ಧ ಮಡಿಕೇರಿ ನಗರ ಪೊಲೀಸ್ ಠಾಣೆಗೆ ನೀಡಿದ್ದಾರೆ. ಇದೀಗ ಘಟನೆ ಸಂಬಂಧಿಸಿ ಮಡಿಕೇರಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *