ಸೊಳ್ಳೆ ಉತ್ಪಾದನೆಗೆ ಕಾರಣವಾಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ – 50 ಸಾವಿರ ರೂ. ದಂಡ ವಿಧಿಸಿ: ಡೆಲ್ಲಿ ಹೈಕೋರ್ಟ್

Public TV
1 Min Read

ನವದೆಹಲಿ: ಸೊಳ್ಳೆಗಳ ಸಂತಾನಾಭಿವೃದ್ಧಿಗೆ ಕಾರಣವಾಗುವ ಜನರ ವಿರುದ್ಧ ದಂಡ ವಿಧಿಸುವ ಪ್ರಸ್ತಾವನೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ದೆಹಲಿ ಸರ್ಕಾರಕ್ಕೆ ದೆಹಲಿ ಹೈಕೋರ್ಟ್ ಸೂಚನೆ ನೀಡಿದ್ದು, 5,000ಕ್ಕೆ ದಂಡವನ್ನು ಸೀಮಿತಗೊಳಿಸದೇ 50,000 ರೂ. ನಿಗದಿಪಡಿಸಬೇಕು ಎಂದು ಹೇಳಿದೆ.

ದೆಹಲಿಯಲ್ಲಿ ಡೆಂಗ್ಯೂ, ಮಲೇರಿಯಾ ಪ್ರಕರಣಗಳ ಸಂಖ್ಯೆ ಹೆಚ್ಚಳ ಹಿನ್ನಲೆ ಹೈಕೋರ್ಟ್ ಸ್ವಯಂಪ್ರೇರಿತ ಕೇಸ್ ದಾಖಲಿಸಿಕೊಂಡಿದ್ದು ಅದರ ವಿಚಾರಣೆ ನಡೆಸುತ್ತಿದೆ. ಇಂದು ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಾಧೀಶ ವಿಪಿನ್ ಸಂಘಿ ದಂಡದ ಪ್ರಮಾಣ ಹೆಚ್ಚಿಸಲು ಸೂಚಿಸಿದರು. ಇದನ್ನೂ ಓದಿ: ಹರಿಯಾಣದ ಮಾಜಿ ಸಿಎಂ ಓಂ ಪ್ರಕಾಶ್ ಚೌಟಾಲಗೆ 4 ವರ್ಷ ಜೈಲು

ದೆಹಲಿಯಲ್ಲಿ ನಿಯಂತ್ರಣದಲ್ಲಿದ್ದ ಡೆಂಗ್ಯೂ, ಮಲೇರಿಯಾ ಪ್ರಕಣಗಳು ಮತ್ತೆ ಹೆಚ್ಚುತ್ತಿದೆ. ಈ ಹಿನ್ನೆಲೆ ತಮ್ಮ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಸೊಳ್ಳೆಗಳು ಸಂತಾನೋತ್ಪತ್ತಿ ಆಗದಂತೆ ಜನರು ಕಟ್ಟೆಚ್ಚರ ವಹಿಸಲು ಜಾಗೃತಿ ಮೂಡಿಸಬೇಕು. ಈ ಹಂತದಲ್ಲಿ ದಂಡದ ಪ್ರಮಾಣವನ್ನು ಪರಿಶೀಲಿಸುವ ಅಗತ್ಯ ಇದೆ ಎಂದು ಕೋರ್ಟ್ ಹೇಳಿದೆ.

ಪ್ರತಿ ವರ್ಷ ನಗರದಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವುದನ್ನು ಪೀಠವು ವಿಚಾರಣೆಯ ವೇಳೆ ಗಮನಿಸಿತು. 2018 ರಲ್ಲಿ ನಗರದಲ್ಲಿ 91 ಪ್ರಕರಣಗಳು ವರದಿಯಾಗಿವೆ. 2019 ರಲ್ಲಿ 313ಕ್ಕೆ ಏರಿದೆ. 2020 ರಲ್ಲಿ 343 ತಲುಪಿದ್ದು, 2021ರಲ್ಲಿ 2663ಕ್ಕೆ ಏರಿದೆ. ಅಂಕಿ ಸಂಖ್ಯೆಗಳ ಏರಿಕೆ ಕಂಡು ಗರಂ ಆದ ಕೋರ್ಟ್, ನಾವು ಆಲಸ್ಯವನ್ನು ಸಹಿಸಲು ಸಾಧ್ಯವಿಲ್ಲ, ಅಂಕಿಸಂಖ್ಯೆಗಳನ್ನು ನೋಡಿ ಆಘಾತಕಾರಿಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿತು. ಇದನ್ನೂ ಓದಿ: ಸಾಕ್ಷ್ಯಾಧಾರಗಳ ಕೊರತೆ- ಆರ್ಯನ್ ಖಾನ್ ಸೇರಿ 6 ಮಂದಿಗೆ ಎನ್‍ಸಿಬಿ ಕ್ಲೀನ್‌ಚಿಟ್

ದೆಹಲಿಯಲ್ಲಿ ಡೆಂಗ್ಯೂ, ಮಲೇರಿಯಾ ಪ್ರಕರಣಗಳ ಹೆಚ್ಚಳ ಹಿನ್ನೆಲೆ NDMC, SDMC, EDMC ಗಳ ಮೂಲಕ ಸಾಮಾನ್ಯ ಪ್ರೋಟೋಕಾಲ್‌ಗಳನ್ನು ಪಾಲನೆ ಮಾಡಲಾಗುತ್ತಿದೆ. ನಿಯಮ ಉಲ್ಲಂಘಿಸುವ ಜನರ ವಿರುದ್ಧ ಸ್ಥಳದಲ್ಲೇ 500 ರಿಂದ 50,000 ರೂ.ವರೆಗೂ ದಂಡ ವಿಧಿಸಲಾಗುತ್ತಿದೆ. ಅದಾಗ್ಯೂ ದೆಹಲಿ ಸರ್ಕಾರ 5,000ಕ್ಕೆ ದಂಡ ಸೀಮಿತಗೊಳಿಸಲು ಇಚ್ಛಿಸಿತ್ತು.

 

Share This Article
Leave a Comment

Leave a Reply

Your email address will not be published. Required fields are marked *