ಮಂಡ್ಯ: ಕೌಟುಂಬಿಕ ಕಲಹದಿಂದ ಬೇಸತ್ತ ಮಹಿಳೆಯೊಬ್ಬರು ಐದು ವರ್ಷದ ಮಗಳಿಗೆ ಬೆಂಕಿ ಹಚ್ಚಿ ಬಳಿಕ ತಾನು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಪಾಲಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಗ್ರಾಮದ ನಿವಾಸಿಯಾದ ಸುಮಾ (25), ಅಂಜಲಿ (5) ಮೃತಪಟ್ಟಿದ್ದಾರೆ. ಕುಟುಂಬದಲ್ಲಿ ನಿರಂತರ ಕಲಹ ಉಂಟಾದ ಕಾರಣ ನೊಂದ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಮನೆಯಲ್ಲಿಯೇ ಮಗುವಿಗೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿರುವ ತಾಯಿ ಸುಮಾ ಬಳಿಕ ತನಗೂ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಆದರೆ ಈ ವೇಳೆ ಮನೆಯಲ್ಲಿ ಮಗುವಿನ ಚೀರಾಟ ಕೇಳಿದ ಮನೆಯವರು ಬೆಂಕಿಯನ್ನು ನಂದಿಸಿ ಆಸ್ಪತ್ರೆಗೆ ಕರೆತರುವ ಪ್ರಯತ್ನ ನಡೆಸಿದ್ದಾರೆ. ಆದರೆ ತೀವ್ರ ಸುಟ್ಟಗಾಯಗಳಿಂದ ಅಂಜಲಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ತಾಯಿ ಸುಮಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.
ಘಟನೆ ಬಗ್ಗೆ ಮಾಹಿತಿ ಪಡೆದ ಶ್ರೀರಂಗಪಟ್ಟಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಕೈಗೊಂಡಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews