ಪತಿಯಿಂದ ದೂರವಿದ್ದ ತಾಯಿ, ಮಗಳು ಡೆತ್‌ನೋಟ್ ಬರೆದಿಟ್ಟು ನೇಣಿಗೆ ಶರಣು

Public TV
1 Min Read

ಮಂಡ್ಯ: ಡೆತ್‌ನೋಟ್ ಬರೆದಿಟ್ಟು ತಾಯಿ, ಮಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮಂಡ್ಯದ ನೆಹರೂ ನಗರ ಬಡಾವಣೆಯಲ್ಲಿ ನಡೆದಿದೆ.

ಚನ್ನಪಟ್ಟಣ ಮೂಲದವರಾದ ರಶ್ಮಿ (28), ದಿಶಾ (9) ನೇಣಿಗೆ ಶರಣಾಗಿರುವ ತಾಯಿ, ಮಗಳು. ಇದನ್ನೂ ಓದಿ: 11ನೇ ಕ್ಲಾಸ್‌ ವಿದ್ಯಾರ್ಥಿಯ ಜೊತೆ 5 ಸ್ಟಾರ್‌ ಹೋಟೆಲಿನಲ್ಲಿ ಸೆಕ್ಸ್‌- ಮುಂಬೈ ಶಿಕ್ಷಕಿ ಅರೆಸ್ಟ್‌

ಕಳೆದ 5 ವರ್ಷದಿಂದ ಗಂಡನಿಂದ ದೂರವಾಗಿದ್ದ ರಶ್ಮಿ ಮಂಡ್ಯದ ನೆಹರೂ ನಗರದ ಬಾಡಿಗೆ ಮನೆಯಲ್ಲಿ ಮಗಳ ಜೊತೆ ವಾಸವಿದ್ದರು. ಇದರಿಂದ ಮನನೊಂದಿದ್ದ ರಶ್ಮಿ, ಡೆತ್‌ನೋಟ್ ಬರೆದಿಟ್ಟು ಮಗಳೊಂದಿಗೆ ನೇಣಿಗೆ ಶರಣಾಗಿದ್ದಾರೆ. ಇದನ್ನೂ ಓದಿ: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ – ಟ್ರೋಲ್‌ಗಳಿಗೆ ಖುಷಿ ಮುಖರ್ಜಿ ಉತ್ತರ

ಡೆತ್‌ನೋಟ್‌ನಲ್ಲೇನಿದೆ:
ರಶ್ಮಿ ಮನೆಯಲ್ಲಿ ಡೆತ್‌ನೋಟ್ ಪತ್ತೆಯಾಗಿದ್ದು, ನನಗೆ ಈ ಜೀವನ ಇಷ್ಟ ಇಲ್ಲ. ಮದುವೆಯಾಗಿಯೂ ಏನು ಸುಖವಿಲ್ಲ. ಒಂಟಿಯಾಗಿ ಐದು ವರ್ಷದಿಂದ ಜೀವನ ಮಾಡುತ್ತಿದ್ದೇನೆ. ಗಂಡನೂ ಬೇರೆ ಮದುವೆ ಆಗುತ್ತೇನೆ. ನನಗೂ ನಿನಗೂ ಸಂಬಂಧ ಇಲ್ಲ ಎಂದು ಬರೆದುಕೊಡು ಎಂದು ಒತ್ತಾಯಿಸುತ್ತಿದ್ದಾರೆ. ನನಗೆ ಈ ಜೀವನ ಸಾಕಾಗಿದೆ. ಅಮ್ಮನನ್ನು ಚೆನ್ನಾಗಿ ನೋಡಿಕೋ ಅಣ್ಣ ಎಂದು ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದನ್ನೂ ಓದಿ: ಶೌಚಾಲಯದಲ್ಲಿ ಮಹಿಳಾ ಸಹೋದ್ಯೋಗಿ ವೀಡಿಯೋ ರೆಕಾರ್ಡ್ – ಟೆಕ್ಕಿ ಅರೆಸ್ಟ್

ಸ್ಥಳಕ್ಕೆ ಮಂಡ್ಯ ಪೂರ್ವ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ. ಮಂಡ್ಯ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article