ಬೆಂಗಳೂರು: ನಗರದ ರೈಲು ನಿಲ್ದಾಣದ (Railway Station) ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಪ್ಲಾಟ್ಫಾರ್ಮ್ನಲ್ಲಿಯೇ ಮಗುವಿಗೆ ಜನ್ಮ ನೀಡಿದ ಅಪರೂಪದ ಘಟನೆ ನಡೆದಿದೆ.
ಗುರುವಾರ (ಜು.31) ರೈಲಿಗಾಗಿ ಕಾಯುತ್ತಿದ್ದ ವೇಳೆ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ರೈಲ್ವೇ ಪೊಲೀಸರು, ಸಿಬ್ಬಂದಿಯ ಸಹಾಯದೊಂದಿಗೆ ಪ್ಲಾಟ್‌ಫಾರ್ಮ್‌ನಲ್ಲೇ (Railway Platform) ಹೆರಿಗೆ ಮಾಡಿಸಲಾಗಿದೆ. ಇದನ್ನೂ ಓದಿ: ಶಾರ್ಟ್ ಸರ್ಕ್ಯೂಟ್‌ನಿಂದ ತಹಶೀಲ್ದಾರ್ ಕಚೇರಿಯಲ್ಲಿ ಅಗ್ನಿ ಅವಘಡ; ಮಹತ್ವದ ದಾಖಲೆಗಳು ಭಸ್ಮ
ತಾಯಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ರೈಲ್ವೆ ಮಹಿಳಾ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಕೇಸ್ | ಪಾಯಿಂಟ್ ನಂ.1ರಲ್ಲಿ ಸಿಕ್ಕ ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು; ವಾರಸುದಾರರು ಪತ್ತೆ