ಚಿಕ್ಕಮಗಳೂರು: ರಾಗಿ ಮುದ್ದೆಯಲ್ಲಿ ನಿದ್ರೆ ಮಾತ್ರೆ ಹಾಕಿ ಅತ್ತೆಯನ್ನು ಕೊಲೆ ಮಾಡಿದ್ದ ಸೊಸೆ ಹಾಗೂ ಆಕೆಯ ಪ್ರಿಯಕರನನ್ನು (Lover) ಅಜ್ಜಂಪುರ (Ajjampur) ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಆಶ್ವಿನಿ ಹಾಗೂ ಆಂಜನೇಯ ಎಂದು ಗುರುತಿಸಲಾಗಿದೆ. ಆರೋಪಿಗಳು ಆ.10 ರಂದು ಮುದ್ದೆಯಲ್ಲಿ ನಿದ್ರೆ ಮಾತ್ರೆ ಹಾಕಿ ಅತ್ತೆ ದೇವಿರಮ್ಮಳನ್ನು ಕೊಂದಿದ್ದರು. ಬಳಿಕ ಮನೆಯಲ್ಲಿ ಹಣ ಕದ್ದಿದ್ದರು. ಇದನ್ನೂ ಓದಿ: ಚಿಕ್ಕಮಗಳೂರು | ಮಾಜಿ ಸಚಿವರ ಮನೆಯಲ್ಲಿ 7 ಲಕ್ಷ ನಗದು, ಚಿನ್ನಾಭರಣ ದೋಚಿದ ನೇಪಾಳಿ ದಂಪತಿ
ಆರಂಭದಲ್ಲಿ ಕುಟುಂಬಸ್ಥರು ಸಹಜ ಸಾವು ಎಂದು ಅಂತ್ಯಸಂಸ್ಕಾರ ಮಾಡಿ ಮುಗಿಸಿದ್ದರು. ಆದರೆ ಹಣ ಕಳ್ಳತನ ಆಗಿದ್ದು ಗಮನಿಸಿ, ಪೊಲೀಸರಿಗೆ ದೂರು ನೀಡಿದ್ದರು. ಇದರಿಂದ ಅನುಮಾನಗೊಂಡ ಪೊಲೀಸರು, ಸೊಸೆಯ ವಿಚಾರಣೆ ನಡೆಸಿದ್ದರು. ಈ ವೇಳೆ ನಿದ್ರೆ ಮಾತ್ರೆ ಹಾಕಿ ಕೊಲೆ ಮಾಡಿರುವುದು ಗೊತ್ತಾಗಿದೆ. ಆ.28ರಂದು ಹೂತ ಶವ ಹೊರತೆಗೆದು, ಮರಣೋತ್ತರ ಪರೀಕ್ಷೆ ನಡೆಸುವ ಸಾಧ್ಯತೆ ಇದೆ.
ಸದ್ಯ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 218 ಗ್ರಾಂ ಚಿನ್ನ (Gold), 16 ಲಕ್ಷ ರೂ. ಮೌಲ್ಯದ ಟಿಟಿ ವಾಹನ ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಎನ್.ಆರ್‌ಪುರ | ಸ್ಮಶಾನವಿಲ್ಲದೇ ಭದ್ರಾ ನದಿಯ ನಡುಗಡ್ಡೆಯಲ್ಲಿ ಶವಸಂಸ್ಕಾರ – 20 ವರ್ಷಗಳಿಂದ ಸಮಸ್ಯೆಗೆ ಸಿಗದ ಮುಕ್ತಿ