ಡ್ರಗ್ಸ್ ದಂಧೆಯಿಂದ ಮಗಳನ್ನು ರಕ್ಷಿಸುವಂತೆ ವಿಎಚ್‌ಪಿಗೆ ತಾಯಿ ಪತ್ರ – ಆರೋಪಿ ಅರೆಸ್ಟ್

Public TV
2 Min Read

ಮಂಗಳೂರು: ಡ್ರಗ್ಸ್ ದಂಧೆಗೆ ಯುವತಿಯನ್ನು ದೂಡಿದ ಆರೋಪದ ಅಡಿ ಮಂಗಳೂರಿನ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕೃಷ್ಣಾಪುರದ ನಿವಾಸಿ ಮಹಮ್ಮದ್ ಶರೀಫ್ ಸಿದ್ದಿಕ್ ಬಂಧಿತ ಆರೋಪಿ. ಬಿಜೈ ಬಳಿಯ ಗ್ರೇಸಿ ಪಿಂಟೋ ಎಂಬವರು ಮಗಳಿಗೆ ಆಗುತ್ತಿರುವ ಸಮಸ್ಯೆಯನ್ನು ವಿಶ್ವ ಹಿಂದೂ ಪರಿಷತ್‌ಗೆ ಪತ್ರದ ಮೂಲಕ ತಿಳಿಸಿದ್ದರು. ಈ ಸಂಬಂಧ ವಿಎಚ್‌ಪಿ ಮುಖಂಡರು ಮಂಗಳೂರು ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ಆರೋಪಿಯನ್ನು ಬಂಧಿಸಿಲಾಗಿದೆ.

ಈಕೆಗೆ ನಾಲ್ಕು ವರ್ಷದ ಹಿಂದೆ ಫೇಸ್‌ಬುಕ್ ಮೂಲಕ ಸಿದ್ದಿಕ್‌ನ ಪರಿಚಯವಾಗಿದೆ. ಬಳಿಕ ಆತನ ಜೊತೆ ಯುವತಿ ಸಲುಗೆಯಿಂದ ಇದ್ದಳು.

ಪತ್ರದಲ್ಲಿ ಏನಿದೆ?
ಕಳೆದ ಮೂರು ವರ್ಷದಿಂದ ಕೃಷ್ಣಾಪುರದ ನಿವಾಸಿ ಮಹಮ್ಮದ್ ಶರೀಫ್ ಸಿದ್ದಿಕ್ ಎಂಬವನು ನಿರಂತರವಾಗಿ ಅವಳಿಗೆ ದೌರ್ಜನ್ಯ, ಲೈಂಗಿಕ ಕಿರುಕುಳ, ಮಾದಕ ವಸ್ತುಗಳನ್ನು ನಿರಂತರವಾಗಿ ಕೊಡುತ್ತಿದ್ದಾನೆ. ಇದರಿಂದಾಗಿ ಅವಳು ಡ್ರಗ್ಸ್ ಚಟಕ್ಕೆ ಬಿದ್ದು ಅವಳ ಆರೋಗ್ಯ ಹದಗೆಟ್ಟಿದೆ ಮತ್ತು ಮಾನಸಿಕವಾಗಿ ಅಸ್ವಸ್ಥಳಾಗಿದ್ದಾಳೆ.

ನಿರಂತರ ಅವಳನ್ನು ಮನೆಯಿಂದ ಕರೆದುಕೊಂಡು ಹೋಗಿ ಅವನು ಮತ್ತೆ ಅವನ ಸ್ನೇಹಿತರು ಬಹಳ ದಿನಗಳವರೆಗೆ ಇರಿಸಿಕೊಳ್ಳುತ್ತಿದ್ದ. ಇದರಿಂದಾಗಿ ನನ್ನ ಭವಿಷ್ಯ ಹಾಳಾಗಿದೆ. ಈಗಾಗಲೇ ನಾನು ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದೇನೆ ಮತ್ತು ನಮ್ಮ ಸಮುದಾಯದ ಗುರುಗಳಿಗೂ ದೂರು ಕೊಟ್ಟಿದ್ದೇನೆ. ಆದರೂ ನನ್ನ ಮಗಳಿಗೆ ನ್ಯಾಯ ಸಿಗಲಿಲ್ಲ. ಈಗಾಗಲೇ ಸಿದ್ದಿಕ್‌ಗೆ ಮೂರು, ನಾಲ್ಕು ಮದುವೆ ಆಗಿದೆ ಎಂದು ಮಾಹಿತಿ ಸಿಕ್ಕಿದೆ. ಇದೀಗ ನನ್ನ ಮಗಳ ಜೀವನ ಕೂಡ ಹಾಳು ಮಾಡಿದ್ದಾನೆ. ಆದುದರಿಂದ ನನ್ನ ಮಗಳನ್ನು ರಕ್ಷಿಸಿ ನನಗೆ ಮತ್ತು ನನ್ನ ಮಗಳಿಗೆ ನ್ಯಾಯ ದೊರಕಿಸಿ ಕೊಡಬೇಕೆಂದು ನಿಮ್ಮಲ್ಲಿ ವಿನಮ್ರತೆಯಿಂದ ವಿನಂತಿಸಿಕೊಳ್ಳುತ್ತೇನೆ. ಇದನ್ನೂ ಓದಿ: ಪ್ರಾಂಶುಪಾಲೆಯ ಕಿರುಕುಳಕ್ಕೆ 5ನೇ ಮಹಡಿಯಿಂದ ಬಿದ್ದು ಪ್ರಾಣ ಬಿಟ್ಟ 13 ವರ್ಷದ ಬಾಲಕಿ

ಪೊಲೀಸರು ಹೇಳಿದ್ದೇನು?
ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಪ್ರತಿಕ್ರಿಯಿಸಿ, ಮಹಿಳೆ ಕೊಟ್ಟಿರುವಂತಹ ದೂರಿನ ಮೇರೆಗೆ ಆರೋಪಿಯ ಮೇಲೆ ಸೆಕ್ಷನ್ 354   ಮತ್ತು 506 ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ಮಹಮ್ಮದ್ ಶರೀಫ್ ಸಿದ್ದಿಕಿಯನ್ನು ಬಂಧಿಸಲಾಗಿದೆ. ಆರೋಪಿಯು ಈಗಾಗಲೇ ಮೂರು ಮದುವೆಯಾಗಿದ್ದಾನೆ. ಇದರ ಜೊತೆ ಜೊತೆಗೆ ಗ್ರೇಸಿ ಪಿಂಟೋ ಮಗಳ ಜೊತೆಯೂ ಸುಮಾರು ವರ್ಷಗಳ ಹಿಂದೆಯಿಂದಲೇ  ಸಂಬಂಧವಿರುವುದು ತಿಳಿದು ಬಂದಿದೆ.

ಆರೋಪಿ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಈ ಹಿಂದೆಯೇ ಎಂಡಿಎಂಎ ಡ್ರಗ್ಸ್ ಪೆಡ್ಲಿಂಗ್ ಮಾಡಿರುವ ಎರಡು ಪ್ರಕರಣಗಳು ಇದೆ. ಸದ್ಯ ಯುವತಿಗೆ ಕೌನ್ಸಿಲಿಂಗ್ ಸೆಂಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಚಿಕಿತ್ಸೆ ಬಳಿಕ ಈ ವಿಚಾರವಾಗಿ ಯುವತಿಯ ಹೇಳಿಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸುತ್ತೇವೆ. ತಾಯಿಯ ಮೇಲೆ ಬೆದರಿಕೆ ಹಾಕಿದ ಹಿನ್ನೆಲೆಯ ಒಳಗೆ ಈ ಕೇಸನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಪೊಲೀಸ್ ಕಮೀಷನರ್ ಹೇಳಿದ್ದಾರೆ. ಇದನ್ನೂ ಓದಿ: ಧಾರವಾಡದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ – 6 ಅಪ್ರಾಪ್ತರು ಪೊಲೀಸರ ವಶಕ್ಕೆ

Share This Article
Leave a Comment

Leave a Reply

Your email address will not be published. Required fields are marked *