ಪೊಲೀಸ್ ಸಿಬ್ಬಂದಿ ಮೇಲೆ ಶಾಸಕ ಎಂ.ಪಿ. ಕುಮಾಸ್ವಾಮಿಯಿಂದ ದರ್ಪ

Public TV
1 Min Read

ಬೆಂಗಳೂರು: ಶಾಸಕರ ಭವನದಲ್ಲಿ ಕರ್ತವ್ಯ ನಿರತ ಹೊಯ್ಸಳ ಪೊಲೀಸ್ ಸಿಬ್ಬಂದಿ ಮೇಲೆ ಮೂಡಿಗೆರೆ ಶಾಸಕ ಕುಮಾರಸ್ವಾಮಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ.

ಗುರುವಾರ ರಾತ್ರಿ 11 ಗಂಟೆ ಸುಮಾರಿಗೆ ವಿಧಾನ ಸೌಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಎಂದಿನಂತೆ ಪ್ರತಿದಿನ ಶಾಸಕರ ಭವನದ ಪಾಯಿಂಟ್ ರೌಂಡ್ಸ್‌ಗೆ  ಮುಖ್ಯ ಪೇದೆ ನರಸಿಂಹ ಮೂರ್ತಿ, ಪೇದೆ ಚಂದ್ರಶೇಖರ್ ಬಂದಿದ್ದರು. ಇದನ್ನೂ ಓದಿ: ಸೂಪರ್ ಮಾರ್ಕೆಟ್‍ನಲ್ಲಿ ವೈನ್‍ಸ್ಟೋರ್ – ಮಹಾರಾಷ್ಟ್ರ ಸರ್ಕಾರದಿಂದ ಅನುಮತಿ

ಈ ವೇಳೆ ಶಾಸಕರ ಭವನದ ಆವರಣದಲ್ಲಿರುವ ಕಾರು ಪಾರ್ಕಿಂಗ್ ವಿಚಾರಕ್ಕೆ ಎಂ.ಪಿ.ಕುಮಾರಸ್ವಾಮಿ ಅವರು ಹೊಯ್ಸಳ ಸಿಬ್ಬಂದಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಇದನ್ನೂ ಓದಿ: ಟಾರ್ಗೆಟ್ 150 – 129 ಮಕ್ಕಳ ಜನನಕ್ಕೆ ಕಾರಣನಾದ 66ರ ವೀರ್ಯದಾನಿ

ಈ ಬಗ್ಗೆ ಕಂಟ್ರೋಲ್ ರೂಂ ಮಾಹಿತಿ ನೀಡಿದ ಹಿನ್ನಲೆ ಘಟನಾ ಸ್ಥಳಕ್ಕೆ ನೈಟ್ ರೌಂಡ್ಸ್‍ನಲ್ಲಿದ್ದ ಎಸಿಪಿ ಆಗಮಿಸಿ ಶಾಸಕರನ್ನು ಸಮಾಧಾನಪಡಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಆದರೆ ಈ ಘಟನೆ ಸಂಬಂಧಿಸಿದಂತೆ ಇದುವರೆಗೆ ಯಾವುದೇ ದೂರು ದಾಖಲಾಗಿಲ್ಲ.

Share This Article
Leave a Comment

Leave a Reply

Your email address will not be published. Required fields are marked *