ಲೋಕಸಭೆ ಚುನಾವಣೆ: RSS ಹಿನ್ನೆಲೆಯುಳ್ಳ ಅಭ್ಯರ್ಥಿಗಳು ಬಿಜೆಪಿಯಿಂದ ಕಣಕ್ಕೆ?

Public TV
1 Min Read

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಗೆ (Lok Sabha Elections) ಸಂಬಂಧಿಸಿದಂತೆ ಬಿಜೆಪಿ (BJP) ಶೀಘ್ರದಲ್ಲೇ ಮೊದಲ ಪಟ್ಟಿ ಬಿಡುಗಡೆ ಮಾಡುವುದಾಗಿ ತಿಳಿಸಿದೆ. ಹಾಗಾಗಿ ಯಾವ ಕ್ಷೇತ್ರದಿಂದ ಯಾರು ಅಭ್ಯರ್ಥಿ ಆಗ್ತಾರೆ ಅನ್ನೋದು ಕುತೂಹಲ ಮೂಡಿಸಿದೆ.

ರಾಜ್ಯಸಭೆಗೆ ಬಿಜೆಪಿಯಿಂದ ಸಂಘ ಪರಿವಾರ ಹಿನ್ನೆಲೆಯ ಅಭ್ಯರ್ಥಿ ಆಯ್ಕೆ ಬೆನ್ನಲ್ಲೇ ಲೋಕಸಭೆಗೂ ಆರ್‌ಎಸ್‌ಎಸ್ (RSS) ಹಿನ್ನೆಲೆಯುಳ್ಳ ಅಭ್ಯರ್ಥಿಗಳನ್ನು ಬಿಜೆಪಿ ಕಣಕ್ಕಿಳಿಸುವ ಚಿಂತನೆ ನಡೆಸಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಸಂಘಪರಿವಾರದ ಹಿನ್ನೆಲೆಯುಳ್ಳವರನ್ನು ಕಣಕ್ಕಿಳಿಸಲು ಬಿಜೆಪಿ ಈಗಾಗಲೇ ತಾಲೀಮು ಆರಂಭಿಸಿದ್ದು, ಸಂಘದ ಬಲ ಯಾವ ಕ್ಷೇತ್ರಗಳಲ್ಲಿ ಹೇಗಿದೆ? ಎಂಬ ಬಗ್ಗೆ ಸರ್ವೆಯನ್ನೂ ಕೈಗೊಂಡಿದೆ. ಸೋಲು-ಗೆಲುವಿನ ಲೆಕ್ಕಾಚಾರಗಳನ್ನಿಟ್ಟುಕೊಂಡು ಅಭ್ಯರ್ಥಿಗಳಿಗೆ ಟಿಕೆಟ್ ಘೋಷಣೆ ಮಾಡಲಾಗುತ್ತದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: Rajyasabha Polls: ಗುಜರಾತ್‌ನಿಂದ ಜೆ.ಪಿ ನಡ್ಡಾ, ಮಹಾರಾಷ್ಟ್ರದಿಂದ ಅಶೋಕ್ ಚವಾಣ್‌ಗೆ ಟಿಕೆಟ್‌

ಹಿರಿಯ ನಾಯಕರೊಂದಿಗೆ ಚರ್ಚೆ:
ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕವನ್ನು ಪ್ರತಿಷ್ಠೆಯ ಕಣವಾಗಿ ತೆಗೆದುಕೊಂಡಿರುವ ಬಿಜೆಪಿ 28ಕ್ಕೆ 28 ಕ್ಷೇತ್ರಗಳನ್ನೂ ಗೆಲ್ಲುವ ಗುರಿ ಹೊಂದಿದೆ. ಅದರಲ್ಲೂ ಸಿಎಂ ತವರು ಕ್ಷೇತ್ರದಲ್ಲಿ ಹೆಚ್ಚಿನ ಲೀಡ್ ತರಲೇಬೇಕೆಂದು ಕೇಂದ್ರ ಸಚಿವ ಅಮಿತ್ ಶಾ, ರಾಜ್ಯ ನಾಯಕರಿಗೆ ಸೂಚನೆ ಕೊಟ್ಟಿದ್ದಾರೆ. ಈ ಬೆನ್ನಲ್ಲೇ ಆರ್‌ಎಸ್‌ಎಸ್ ಮುಂಚೂಣಿ ನಾಯಕರು, ಬಿಜೆಪಿ ವರಿಷ್ಠರೊಂದಿಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

2023ರ ವಿಧಾನಸಭಾ ಚುನಾವಣೆಯಲ್ಲಿ ಸಂಘ ಪರಿವಾರದ ಹಿನ್ನೆಲೆಯುಳ್ಳ 10 ಮಂದಿಗೆ ಬಿಜೆಪಿಯಿಂದ ಟಿಕೆಟ್ ನೀಡಲಾಗಿತ್ತು. ಹಾಗಾಗಿ ಲೋಕಸಭಾ ಚುನಾವಣೆಗೆ ಕನಿಷ್ಠ 3 ಅಥವಾ 4 ಕ್ಷೇತ್ರಗಳಲ್ಲಿ ಸಂಘಪರಿವಾರದ ಹಿನ್ನೆಲೆಯುಳ್ಳ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಚಿಂತನೆ ನಡೆದಿದೆ. ಇದನ್ನೂ ಓದಿ: ಅಜ್ಜನ ಕನಸು ನೆರವೇರಿಸಲು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಲಾಲ್ ಬಹದ್ದೂರ್ ಶಾಸ್ತ್ರಿ ಮೊಮ್ಮೊಗ

Share This Article