ಪ್ರಜ್ವಲ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ – ಎಸ್‌ಐಟಿ ಸಹಾಯವಾಣಿಗೆ 30 ಕ್ಕೂ ಹೆಚ್ಚು ಕರೆ

Public TV
1 Min Read

ಹಾಸನ: ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ವಿರುದ್ಧ ಕೇಳಿ ಬಂದಿರುವ ಲೈಂಗಿಕ ದೌರ್ಜನ್ಯಕ್ಕೆ ಆರೋಪಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯರು ದೂರು ನೀಡಲು ವಿಶೇಷ ತನಿಖಾ ತಂಡ (SIT) ತೆರೆದಿದ್ದು, ಇದುವರೆಗೂ ಸಹಾಯವಾಣಿಗೆ 30 ಕ್ಕೂ ಹೆಚ್ಚು ಕರೆಗಳು ಬಂದಿರುವ ಬಗ್ಗೆ ಎಸ್‌ಐಟಿ ತಿಳಿಸಿದೆ.

ಅಶ್ಲೀಲ ವಿಡಿಯೋಗಳ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೌರ್ಜನ್ಯಕ್ಕೆ ಒಳಗಾಗಿರುವ ಸಂತ್ರಸ್ತೆಯರು ಪೊಲೀಸ್ ಠಾಣೆಗೆ ತೆರಳಿ ದೂರು ನೀಡಲು ಹಿಂಜರಿಯುತ್ತಾರೆ ಎಂಬ ಉದ್ದೇಶದಿಂದ ಎಸ್‌ಐಟಿಗೆ ದೂರು ನೀಡಲು ಸಹಾಯವಾಣಿ (6360938947) ತೆರೆಯಲಾಗಿತ್ತು. ಅಂದಿನಿಂದ ಇಲ್ಲಿಯ ವರೆಗೆ ಒಟ್ಟು 30 ಕ್ಕೂ ಹೆಚ್ಚು ಕರೆಗಳು ಬಂದಿವೆ. ಇದನ್ನೂ ಓದಿ: ಹಾಸನ ಜಿಲ್ಲೆಯ ಜನ ನನ್ನ ಕೈ ಬಿಡಲ್ಲ: ರೇವಣ್ಣ

ಇದುವರೆಗೂ ದೂರು ನೀಡದೆ ಇರುವ ಸಂತ್ರಸ್ತ ಮಹಿಳೆಯರು ಹೆಲ್ಪ್‌ಲೈನ್‌ಗೆ ಕರೆ ಮಾಡಿ ದೂರು ನೀಡಿದರೆ, ನೀವು ಹೇಳಿದ ಸ್ಥಳಕ್ಕೆ ಬಂದು ಮಾಹಿತಿ ಸಂಗ್ರಹಿಸಲು ಎಸ್‌ಐಟಿ ಅಧಿಕಾರಿಗಳು ಸಿದ್ದವಿದ್ದಾರೆ. ಗುರುತು ಹಾಗೂ ಮಾಹಿತಿ ಗೌಪ್ಯತೆ ಕಾಪಾಡಲಾಗುತ್ತದೆ. ಇಲ್ಲವೇ ನೇರವಾಗಿ ಅಧಿಕಾರಿಗಳನ್ನೂ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ಈಗಾಗಲೇ ಪ್ರಜ್ವಲ್ ರೇವಣ್ಣ ವಿರುದ್ಧ ಮೂರು ಪ್ರತ್ಯೇಕ ಅತ್ಯಾಚಾರ ಪ್ರಕರಣಗಳು ದಾಖಲಾಗಿದ್ದು, ತನಿಖೆ ಕೂಡ ನಡೆಸಲಾಗುತ್ತಿದೆ. ಸಹಾಯವಾಣಿ ಮೂಲಕ ಎಸ್‌ಐಟಿ ಅಧಿಕಾರಿಗಳನ್ನು ಸಂಪರ್ಕಿಸಿರುವ ಸಂತ್ರಸ್ತೆಯರು ಯಾವೆಲ್ಲ ಆರೋಪ ಮಾಡಿದ್ದಾರೆ? ಏನೆಲ್ಲ ಹೇಳಿಕೆ ನೀಡಿದ್ದಾರೆ ಎಂಬುದು ಗೌಪ್ಯವಾಗಿದೆ. ಅಲ್ಲದೇ ಹೆಲ್ಪ್‌ಲೈನ್‌ ಮೂಲಕ ದಾಖಲಾಗುವ ಹೇಳಿಕೆಗಳನ್ನೂ ಗಂಭೀರವಾಗಿ ಪರಿಗಣಿಸುವುದರಿಂದ ಪ್ರಜ್ವಲ್ ರೇವಣ್ಣ ಅವರಿಗೆ ಇನ್ನಷ್ಟು ಸಂಕಷ್ಟ ಎದುರಾಗಲಿದೆ. ಇದನ್ನೂ ಓದಿ: ಪೆನ್‌ಡ್ರೈವ್‌ ರೆಡಿ ಮಾಡಿದ್ದೇ ಡಿ.ಕೆ.ಶಿವಕುಮಾರ್: ಹೊಸ ಬಾಂಬ್‌ ಸಿಡಿಸಿದ ವಕೀಲ ದೇವರಾಜೇಗೌಡ

Share This Article