ರೇವಣ್ಣಗೆ ಭವಾನಿಯವರ ಚಿಂತೆ, ಕುಮಾರಣ್ಣನಿಗೆ ನಿಖಿಲ್ ಚಿಂತೆ, ಸಿದ್ದರಾಮಯ್ಯಗೆ ಕ್ಷೇತ್ರದ ಚಿಂತೆ – ಪ್ರತಾಪ್‌ಸಿಂಹ ವ್ಯಂಗ್ಯ

Public TV
2 Min Read

– ಎಲ್ಲ ಭಾಗ್ಯಗಳನ್ನ ಕೊಟ್ಟ ಸಿದ್ದರಾಮಯ್ಯಗೆ ಕ್ಷೇತ್ರಭಾಗ್ಯವೇ ಇಲ್ಲವೆಂದು ಲೇವಡಿ

ಮಡಿಕೇರಿ: ರೇವಣ್ಣಗೆ ಭವಾನಿಯವರ (Bhavani Revanna) ಚಿಂತೆ, ಕುಮಾರಣ್ಣ (HD Kumaraswamy) ಅವ್ರಿಗೆ ನಿಖಿಲ್‌ನ ಚಿಂತೆಯಾದ್ರೆ ಸಿದ್ದರಾಮಯ್ಯ ಅವರಿಗೆ ಕ್ಷೇತ್ರದ ಚಿಂತೆಯಾಗಿದೆ ಎಂದು ಸಂಸದ ಪ್ರತಾಪ್ ಸಿಂಹ (Pratap Simha) ವ್ಯಂಗ್ಯವಾಡಿದ್ದಾರೆ.

ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೇವಣ್ಣಗೆ ಭವಾನಿಯವರ ಚಿಂತೆ, ಕುಮಾರಣ್ಣ ಅವ್ರಿಗೆ ನಿಖಿಲ್‌ನ ಚಿಂತೆಯಾದ್ರೆ ಸಿದ್ದರಾಮಯ್ಯಗೆ (Siddaramaiah) ಕ್ಷೇತ್ರದ ಚಿಂತೆ. ಇವರಿಗೆಲ್ಲ ಅವರವರ ಕುಟುಂಬಗಳ ಚಿಂತೆ ಇದೆ ಆದ್ದರಿಂದ ಕರ್ನಾಟಕದ ಜನ ಇವರ ಮಾತಿಗೆ ಮರುಳಾಗಿ ಮಂಗಗಳಾಗಬೇಡಿ ಎಂದು ಲೇವಡಿ ಮಾಡಿದ್ದಾರೆ.

ಅನ್ನಭಾಗ್ಯ, ಶಾದಿಭಾಗ್ಯ, ಕ್ಷೀರಭಾಗ್ಯ ಕೊಟ್ಟೆ ಎನ್ನುವ ಸಿದ್ದರಾಮಯ್ಯನವರಿಗೆ ಕ್ಷೇತ್ರಭಾಗ್ಯವೇ ಇಲ್ಲ. ಇದನ್ನ ನೋಡಿದ್ರೆ ಬಹಳ ಆಶ್ಚರ್ಯವಾಗುತ್ತೆ, ಅಷ್ಟೇ ಸೋಜಿಗವೂ ಆಗುತ್ತೆ ಎಂದು ಕುಟುಕಿದ್ದಾರೆ. ಇದನ್ನೂ ಓದಿ: ಯುಗಾದಿಯಂದೇ ಕಳ್ಳತನ – ಬಾಗಿಲು ಮುರಿದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

ಕರ್ನಾಟಕದ ಜನ ಮಂಗಗಳಾಗಬೇಡಿ:
ಸಿದ್ದರಾಮಯ್ಯ ಅವರಿಗೆ ಯುಗಾದಿ ದಿನ ಕಾಂಗ್ರೆಸ್ ಟಿಕೆಟ್ ಘೋಷಣೆ ಆಗಬೇಕಾಗಿತ್ತು. ಆದರೆ ಇವತ್ತಿನವರೆಗೆ ಟಿಕೆಟ್ ಘೋಷಣೆ ಆಗಿಲ್ಲ. ಒಂದು ಕ್ಷೇತ್ರ ಹುಡುಕಿಕೊಳ್ಳಲು ಸಿದ್ದರಾಮಯ್ಯ ಅವರಿಗೆ ಈ ಪರಿಸ್ಥಿತಿ ಬಂದಿದ್ರೆ ಅಂದ್ರೆ ಅವರ ಭಾಗ್ಯಗಳಿಗೆ ಜನ ಬೆಲೆ ಕೊಟ್ಟಿಲ್ಲ. ನಾನು ಈಗಲೂ ಹೇಳುತ್ತೇನೆ ಅವರು ಕಡೆಗೆ ಮೈಸೂರಿನ ವರುಣಾಕ್ಕೆ ಬರುತ್ತಾರೆ. ಹೀಗಾಗಿ ಕರ್ನಾಟಕದ ಜನ ಇವರ ಮಾತಿಗೆ ಮರುಳಾಗಿ ಮಂಗಗಳಾಗಬೇಡಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ತಲೆಗೆ ಪೆಟ್ಟುಬಿದ್ದು ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಸಾವು – ಹಾಸನ ಡಿಸಿ

ಈಗಾಗಲೇ ಕಾಂಗ್ರೆಸ್ ಅವರು ಕೊಡುವ 200 ಯೂನಿಟ್ ವಿದ್ಯುತ್ ಉಚಿತ, ಗೃಹಿಣಿಯರಿಗೆ 2,000 ರೂ. ಮಾಸಿಕ ಭತ್ಯೆ ಕೊಡುತ್ತೇನೆ ಅನ್ನೋದನ್ನೆಲ್ಲಾ ನಂಬಬೇಡಿ. ಪಂಜಾಬ್ ನಲ್ಲಿ ಎಎಪಿಯವರು ಇದನ್ನೇ ಹೇಳಿ ಟೋಪಿ ಹಾಕಿದ್ದಾರೆ. ಈಗ ಕಾಂಗ್ರೆಸ್ ಅವರು ರಾಜ್ಯದ ಜನರಿಗೆ ಟೋಪಿ ಹಾಕಲು ಹೋರಟಿದ್ದಾರೆ. ಯಾವುದೇ ಪಕ್ಷ ಸುಳ್ಳು ಹೇಳಿಕೊಂಡು ಮತ ಕೇಳಿದರೂ, ಜನರು ಅರಿತು ಮತ ನೀಡಿ ಬಿಜೆಪಿ ಅವರು ಸುಳ್ಳು ಹೇಳಿದ್ರೂ ಮತ ನೀಡಬೇಡಿ ನಾನು ಬಿಜೆಪಿ ಕಾರ್ಯಕರ್ತನಾಗಿ ಈ ಮಾತು ಹೇಳುತ್ತಿದ್ದೇನೆ ಎಂದು ಹೇಳಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *