– ನಮ್ಮೂರಲ್ಲಿ ಏರ್‌ಪೋರ್ಟ್ ಇದ್ರೂ ಬೇರೆ ಊರಿಗೆ ಹೋಗಿ ಬರೋ ದುಸ್ಥಿತಿ!
ಶಿವಮೊಗ್ಗ: ವಿಮಾನ ನಿಲ್ದಾಣವನ್ನು (Shivamogga Airport) ರಾಜ್ಯ ಸರ್ಕಾರದ ನಿರ್ವಹಣೆಗೆ ಕೊಟ್ಟು ದೊಡ್ಡ ತಪ್ಪು ಮಾಡ್ಬಿಟ್ಟೆ ಎಂದು ಸಂಸದ ಬಿ.ವೈ.ರಾಘವೇಂದ್ರ (B.Y Raghavendra) ಬೇಸರ ವ್ಯಕ್ತಪಡಿಸಿದರು.
ನಗರದ (Shivamogga) ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, ಶುಕ್ರವಾರ (ಸೆ.12) ವಿಮಾನ ಶಿವಮೊಗ್ಗದಲ್ಲಿ ಲ್ಯಾಂಡ್ ಆಗದೆ ಹುಬ್ಬಳ್ಳಿಗೆ ತೆರಳಿತ್ತು. ಹುಬ್ಬಳ್ಳಿಯಿಂದ ರಸ್ತೆ ಮಾರ್ಗವಾಗಿ ನಾನು ಶಿವಮೊಗ್ಗಕ್ಕೆ ಆಗಮಿಸಿದೆ. ನಮ್ಮೂರಿನಲ್ಲೇ ವಿಮಾನ ನಿಲ್ದಾಣವಿದ್ದರೂ ಇನ್ನೊಂದು ಊರಿಗೆ ಹೋಗಿ ಬರುವಂತಹ ದುಸ್ಥಿತಿ ಇದೆ ಎಂದು ಬೇಸರವಾಗುತ್ತದೆ. ಇದನ್ನೂ ಓದಿ: ಕಾಂಡ್ಲಾದಲ್ಲಿ ಟೇಕಾಫ್ ವೇಳೆ ಕಳಚಿದ ಸ್ಪೈಸ್‌ಜೆಟ್ ಚಕ್ರ – ಮುಂಬೈನಲ್ಲಿ ಸೇಫ್ ಲ್ಯಾಂಡಿಂಗ್
ನಮ್ಮ ತಂದೆ ಮುಖ್ಯಮಂತ್ರಿ ಆಗಿದ್ದಾಗ ವಿಮಾನ ನಿಲ್ದಾಣದ ನಿರ್ವಹಣೆಯನ್ನು ರಾಜ್ಯ ಸರ್ಕಾರಕ್ಕೆ ವಹಿಸಿಬಿಟ್ಟೆ. ಇದು ನಾನು ಮಾಡಿದ ದೊಡ್ಡ ತಪ್ಪು ಎಂದು ಈಗ ಅನಿಸಲು ಶುರುವಾಗಿದೆ. ವಿಮಾನ ನಿಲ್ದಾಣದ ನಿರ್ವಹಣೆಯನ್ನು ಭಾರತೀಯ ವಿಮಾನಯಾನ ಪ್ರಾಧಿಕಾರಕ್ಕೆ ವಹಿಸಿದ್ದರೆ ಎಲ್ಲಾ ಕೆಲಸಗಳು ಸುಗಮವಾಗುತ್ತಿತ್ತು.
ನೈಟ್ ಲ್ಯಾಂಡಿಂಗ್ ವ್ಯವಸ್ಥೆಗೆ ಪೂರಕವಾದ ಉಪಕರಣಗಳನ್ನು ತರಿಸಿ ಮೂರು ತಿಂಗಳಾಗಿದೆ. ಇವುಗಳ ಅಳವಡಿಕೆಗೆ ಎರಡರಿಂದ ಮೂರು ಕೋಟಿ ರೂ. ಅಗತ್ಯವಿದೆ. ಟೆಂಡರ್ ಕರೆಯಲು ವಿಳಂಬವಾಗುತ್ತಿದೆ. ಇದರ ಬದಲು ನಿರ್ಮಿತಿ ಕೇಂದ್ರಕ್ಕೆ ವಹಿಸಿದ್ದರೆ ಟೆಂಡರ್ ರಹಿತವಾಗಿ ಕಾಮಗಾರಿ ಪೂರ್ಣಗೊಳಿಸುತ್ತಿದ್ದರು. ಸರ್ಕಾರ ಒಂದು ಕೋಟಿ ರೂ. ಕೊಡಲು ಸಂಪುಟ ಸಭೆ ನಡೆಸಬೇಕು ಎನ್ನುತ್ತಿದೆ. ರಾಜ್ಯ ಸರ್ಕಾರದಿಂದ ಹಣ ಕೊಡಲೂ ವಿಳಂಬವಾಗುತ್ತಿದೆ. ಕೆಲಸ ಆರಂಭಿಸಲೂ ತಡವಾಗುತ್ತಿದೆ. ಇದರಿಂದ ನಮಗೆ ದೊರೆಯಬೇಕಿದ್ದ ಅವಕಾಶ ಬೇರೆಯವರ ಪಾಲಾಗುತ್ತಿದೆ ಎಂದು ಬೇಸರ ಹೊರಹಾಕಿದ್ದಾರೆ.
ಸರ್ಕಾರ ಕೂಡಲೇ ನೈಟ್ ಲ್ಯಾಂಡಿಂಗ್ ಉಪಕರಣಗಳನ್ನು ಅಳವಡಿಸಿ ಕೊಡಬೇಕು. ಆ ಬಳಿಕ ದೆಹಲಿಯಲ್ಲಿ ಚರ್ಚೆ ನಡೆಸಿ ಮತ್ತಷ್ಟು ವಿಮಾನಗಳನ್ನು ತರಿಸುವ ಪ್ರಯತ್ನ ಮಾಡುತ್ತೇನೆ. ಇಲ್ಲವಾದಲ್ಲಿ ಇಂತಹ ಮೋಡದ ವಾತಾವರಣ ಇದ್ದರೆ ಅನೇಕ ವಿಮಾನಗಳು ರದ್ದಾಗುತ್ತವೆ ಎಂದಿದ್ದಾರೆ. ಇದನ್ನೂ ಓದಿ: ಹಾಟ್ ಏರ್ ಬಲೂನ್ ಹಾರುವ ಮುನ್ನವೇ ಬೆಂಕಿ – ಮಧ್ಯಪ್ರದೇಶ ಸಿಎಂ ಬಚಾವ್!