ಸಿಎಂ, ಡಿಸಿಎಂ ಭೇಟಿಯಾದ ರೇಣುಕಾಚಾರ್ಯ- ಕುತೂಹಲ ಮೂಡಿಸಿದ ಮಾತುಕತೆ

Public TV
1 Min Read

ಬೆಂಗಳೂರು: ಆಪರೇಷನ್ ಹಸ್ತದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ (Siddaramaiah) ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಅವರನ್ನು ಮಾಜಿ ಸಚಿವ ರೇಣುಕಾಚಾರ್ಯ ಭೇಟಿಯಾಗಿದ್ದಾರೆ.

ಸಿಎಂ ನಿವಾಸದಲ್ಲಿ 20 ನಿಮಿಷಗಳ ಕಾಲ ಮಾತುಕತೆ ನಡೆಸಿದರು. ಬಳಿಕ ಸದಾಶಿವನಗರದಲ್ಲಿರುವ ಡಿಕೆಶಿ ನಿವಾಸಲ್ಲಿ ಭೇಟಿ ಮಾಡಿ ರೇಣುಕಾಚಾರ್ಯ ಮಾತುಕತೆ ನಡೆಸಿದ್ರು. ರೇಣುಕಾಚಾರ್ಯ (Renukacharya) ಸಿಎಂ, ಡಿಕೆಶಿಯನ್ನು ಭೇಟಿಯಾಗಿರೋದು ತೀವ್ರ ಕುತೂಹಲ ಮೂಡಿಸಿದೆ. ಇದನ್ನೂ ಓದಿ: ರಾಜ್ಯ ಬಿಜೆಪಿ ಮುಳುಗುತ್ತಿರುವ ಹಡಗು – ಸಚಿವ ಎಂ‌.ಬಿ ಪಾಟೀಲ್‌ ಟೀಕೆ

ಸಿಎಂ, ಡಿಸಿಎಂ ಭೇಟಿ ಬಳಿಕ ಮಾತನಾಡಿದ ರೇಣುಕಾಚಾರ್ಯ, ಹೊನ್ನಾಳಿ ಕ್ಷೇತ್ರದಲ್ಲಿ ಬರ ಪರಿಸ್ಥಿತಿ ಇದೆ. ಆ ಸಂಬಂಧ ಸಿಎಂ ಹಾಗೂ ಡಿಸಿಎಂ ಇಬ್ಬರನ್ನು ಭೇಟಿ ಮಾಡಿದ್ದೇನೆ. ಕ್ಷೇತ್ರದಲ್ಲಿ ಶಾಸಕರು ಇರಬಹುದು. ಆದರೆ ನಾನು 3 ಬಾರಿ ಶಾಸಕನಾಗಿದ್ದ ಕ್ಷೇತ್ರ. ಅದಕ್ಕೆ ಬರ ತಾಲೂಕಿಗೆ ಸೇರಿಸಿ ಎಂದು ಮನವಿ ಮಾಡಿದ್ದೇನೆ ಅಂತ ರೇಣುಕಾಚಾರ್ಯ ಹೇಳಿದರು. ಇದೇ ವೇಳೆ ದಾವಣಗೆರೆ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ (Loksabha Election) ನಾನು ಬಿಜೆಪಿ ಟಿಕೆಟ್ ಕೇಳಿದ್ದೇನೆ. ನಾನು ಪ್ರಬಲ ಆಕಾಂಕ್ಷಿ ಅಂತಲೂ ರೇಣುಕಾಚಾರ್ಯ ತಿಳಿಸಿದ್ದಾರೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್