ದೊಡ್ಮನೆ ಸೊಸೆ ಭೇಟಿ ಮಾಡಿ ಸಹಕಾರ ಕೇಳಿದ ಸಂಸದೆ ಶೋಭಾ ಕರಂದ್ಲಾಜೆ

Public TV
1 Min Read

ಲೋಕಸಭೆ ಚುನಾವಣೆ (Lok Sabha Elections) ಘೋಷಿತ ಅಭ್ಯರ್ಥಿಗಳ ಮತಬೇಟೆ ಚಟುವಟಿಕೆಗಳು ಜೋರಾಗಿಯ ನಡೆಯುತ್ತಿವೆ. ತಮ್ಮ ಕ್ಷೇತ್ರದ ಪ್ರಭಾವಿತರ ಮನೆ ಮನೆಗೆ ತೆರಳುತ್ತಿರುವ ಅಭ್ಯರ್ಥಿಗಳು ಚುನಾವಣೆಗೆ ಅವರ ಸಹಕಾರವನ್ನು ಕೇಳುತ್ತಿದ್ದಾರೆ. ಹಾಗೆಯೇ ಸಂಸದೆ ಶೋಭಾ ಕರಂದ್ಲಾಜೆ ಕೂಡ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ  (Ashwini Puneet Rajkumar) ಅವರನ್ನು ಭೇಟಿ ಮಾಡಿದ್ದಾರೆ.

ದೊಡ್ಮನೆ ಸೊಸೆಯನ್ನು ಭೇಟಿ ಮಾಡಿದ ಬಳಿಕ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಶೋಭಾ (Shobha Karandlaje), ನಮ್ಮ ಪಕ್ಷಕ್ಕೆ ಅವರ ಸಹಕಾರ ಕೇಳಿದ್ದೇವೆ. ಅಶ್ವಿನಿ ಅವರಿಗೆ ರಾಜಕೀಯ ಪಾರ್ಟಿ ಇಲ್ಲ. ಹಾಗಾಗಿ ನಿಮ್ಮ ಸಹಕಾರ, ಬೆಂಬಲ ಬೇಕು ಅಂತ ಕೇಳಿದ್ದೇವೆ. ಅವ್ರು ನಮ್ಮದೇ ಕ್ಷೇತ್ರದಲ್ಲಿದ್ದಾರೆ. ಪ್ರಚಾರದ ಬಗ್ಗೆ ಕೇಳಿಲ್ಲ’ ಎಂದಿದ್ದಾರೆ.

ರಾಜಕಾರಣದ ವಿಚಾರದಲ್ಲಿ ಪುನೀತ್ ಯಾವತ್ತಿಗೂ ಹಿಂದೇಟು ಹಾಕುತ್ತಲೇ ಇದ್ದರು. ಸ್ವತಃ ಶಿವರಾಜ್ ಕುಮಾರ್ ಪತ್ನಿ ಚುನಾವಣೆಗೆ ನಿಂತಾಗಲೂ ಅವರು ಸಪೋರ್ಟ್ ಮಾಡಲಿಲ್ಲ. ರಾಜಕಾರಣದಿಂದ ಅಂತರ ಕಾಪಾಡಿಕೊಂಡೇ ಬಂದರು. ಅಶ್ವಿನಿ ಅವರು ಕೂಡ ಅದೇ ಹಾದಿಯಲ್ಲಿ ನಡೆಯುತ್ತಿದ್ದಾರೆ. ಮನೆಗೆ ಬಂದವರನ್ನು ಸೌಜನ್ಯವಾಗಿ ಮಾತನಾಡಿಸಿದ್ದಾರೆ.

 

ಈ ಕಡೆ ಶಿವರಾಜ್ ಕುಮಾರ್ ಪತ್ನಿ ಗೀತಾ ಕೂಡ ಈ ಬಾರಿ ಲೋಕಸಭೆಯ ಕಣದಲ್ಲಿ ಇದ್ದಾರೆ. ಶಿವಮೊಗ್ಗದಿಂದ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಹಾಗಾಗಿ ದೊಡ್ಮನೆಯಲ್ಲೇ ರಾಜಕಾರಣದ ಬಗ್ಗೆ ಭಿನ್ನ ನಿಲುವುಗಳಿವೆ.

Share This Article