ಮೈಸೂರು: ಮುಡಾ ಪ್ರಕರಣದಲ್ಲಿ ಸಿಎಂ ಮತ್ತು ಸಿಎಂ ಕುಟುಂಬಕ್ಕೆ (Chief Minister Family) ಮತ್ತೆ ಸಂಕಷ್ಟ ಎದುರಾಗಿದೆ. ಪ್ರಕರಣದಲ್ಲಿ ಲೋಕಾಯುಕ್ತ ಸಲ್ಲಿಸಿದ್ದ ಬಿ ರೀಪೋರ್ಟ್ ಪ್ರಶ್ನಿಸಿ ಇಡಿ ಈಗ ಹೈಕೋರ್ಟ್ ಗೆ ಅರ್ಜಿ ಹಾಕಿದೆ. ಅರ್ಜಿಯಲ್ಲಿ ಸಿಎಂ ಹಾಗೂ ಸಿಎಂ ಕುಟುಂಬದ ಸದಸ್ಯರ ಮೇಲಿನ ಆರೋಪಕ್ಕೆ ಸಾಕ್ಷಿ ಇದೆ ಎಂದು ಕೂಡ ಹೇಳಿದೆ.
ಈ ಬಗ್ಗೆ ಪ್ರಕರಣದ ಮೂಲ ದೂರುದಾರ ಸ್ನೇಹಮಹಿ ಕೃಷ್ಣ (Snehamayi Krishna) ʻಪಬ್ಲಿಕ್ ಟಿವಿʼಗೆ ಪ್ರತಿಕ್ರಿಯಿಸಿ, ಮುಡಾ ಪ್ರಕರಣದಲ್ಲಿ ಸಿಎಂ ಕುಟುಂಬಕ್ಕೆ ತಾತ್ಕಾಲಿಕ ರಿಲೀಫ್ ಅಷ್ಟೇ ಸಿಕ್ಕಿರೋದು. ಈ ಪ್ರಕರಣದಲ್ಲಿ ಅವರ ಕುಟುಂಬಕ್ಕೆ ಜೈಲು ಶಿಕ್ಷೆ ಆಗುವುದು ಖಚಿತ ಎಂದು ಪ್ರತಿಪಾದಿಸಿದ್ದಾರೆ. ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ ಕೇಸ್ – ಬಿ ರಿಪೋರ್ಟ್ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ ED ಅರ್ಜಿ
ಜಾರಿ ನಿರ್ದೇಶನಾಲಯ ಹೇಳಿರುವಂತೆ ಆರೋಪಿಗಳ ಮೇಲಿನ ಆರೋಪಕ್ಕೆ ನನ್ನ ಬಳಿಯೂ ಬಹಳಷ್ಟು ಸಾಕ್ಷಿ ಇವೆ. ಈ ಪ್ರಕರಣದಲ್ಲಿ ಬಿ ರಿಪೋರ್ಟ್ ಹಾಕಿದ ಲೋಕಾಯುಕ್ತ ಅಧಿಕಾರಿಗಳಿಗೂ ಶಿಕ್ಷೆ ಕೊಡಿಸುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕೇಂದ್ರ ಸರ್ಕಾರ ರಾಜ್ಯಕ್ಕೆ ಬರಬೇಕಾದ ಕನಿಷ್ಠ ಅನಿಲವನ್ನೂ ಪೂರೈಕೆ ಮಾಡಿಲ್ಲ: ಪರಮೇಶ್ವರ್ ಬೇಸರ
ED ಯಿಂದ ಪ್ರತ್ಯೇಕ ಅರ್ಜಿ
ಸದ್ಯ ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧದ ಮುಡಾ ಹಗರಣ (MUDA Scam Case) ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ ರಿಪೋರ್ಟ್ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ ಜಾರಿ ನಿರ್ದೇಶನಾಲಯ ಅರ್ಜಿ ಸಲ್ಲಿಸಿದೆ. ನಮ್ಮ ತನಿಖೆಯಲ್ಲಿ ಸಾಕಷ್ಟು ಮಾಹಿತಿ ಬಹಿರಂಗ ಆಗಿದೆ ಎಂದು ಕೆಳಹಂತದ ನ್ಯಾಯಾಲಯ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ ಇ.ಡಿ ಅಧಿಕಾರಿಗಳು ಅರ್ಜಿ ಸಲ್ಲಿಕೆ ಮಾಡಿದ್ದಾರೆ.
ಮುಡಾದಲ್ಲಿ ಹಗರಣ ನಡೆದಿದೆ. ನಾಲ್ವರು ಆರೋಪಿಗಳ ಪಾತ್ರ ಇರೋದು ತನಿಖೆಯಲ್ಲಿ ಸಾಕ್ಷ್ಯಾಧಾರ ಇದೆ. ಹೀಗಾಗಿ, ಮರು ತನಿಖೆಗೆ ಮನವಿ ಮಾಡಲಾಗಿದೆ. ಸ್ನೇಹಮಯಿ ಕೃಷ್ಣ ಬಳಿಕ ಇ.ಡಿಯಿಂದಲೂ ಪ್ರತ್ಯೇಕವಾಗಿ ಅರ್ಜಿ ಸಲ್ಲಿಕೆಯಾಗಿದೆ. ಇದನ್ನೂ ಓದಿ: ಶೃಂಗೇರಿ ವಿಧಾನಸಭಾ ಚುನಾವಣೆಯ ಪೋಸ್ಟಲ್ ಬ್ಯಾಲೆಟ್ ಮತ ಮರುಪರಿಶೀಲಿಸಿ, ಹೊಸದಾಗಿ ಫಲಿತಾಂಶ ಪ್ರಕಟಿಸುವಂತೆ ಹೈಕೋರ್ಟ್ ಆದೇಶ


