MUDA Scam| ಸಿಎಂ ವಿರುದ್ಧ ಲೋಕಾಯುಕ್ತ ತನಿಖೆಗೆ ಕೋರ್ಟ್‌ ಆದೇಶ

Public TV
1 Min Read

ಬೆಂಗಳೂರು: ಮುಡಾ ಹಗರಣಕ್ಕೆ (MUDA Scam) ಸಂಬಂಧಿಸಿದಂತೆ ಸಿಎಂ ಸಿದ್ದರಾಮಯಯ್ಯ (Siddaramaiah) ವಿರುದ್ಧ ಎಫ್‌ಐಆರ್‌ ದಾಖಲಿಸಿ ತನಿಖೆ ನಡೆಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಪ್ರಕಟಿಸಿದೆ.

3 ತಿಂಗಳ ಒಳಗಡೆ ತನಿಖೆ ನಡೆಸಬೇಕೆಂದು ಮೈಸೂರು ಲೋಕಾಯುಕ್ತ ಎಸ್‌ಪಿಗೆ (lMysuru Lokayukta SP) ಕೋರ್ಟ್‌ ಆದೇಶಿಸಿದೆ.  ಇದನ್ನೂ ಓದಿ: ಮುಡಾ ಕೇಸ್‌: ಕಾನೂನಾತ್ಮಕವಾಗಿ ಮುಂದೇನು? ಕಾಂಗ್ರೆಸ್‌ ಹೈಕಮಾಂಡ್‌ ಮುಂದಿರುವ ಆಯ್ಕೆಗಳೇನು?

 

ಮುಡಾದಲ್ಲಿ ಅಕ್ರಮ ಎಸಗಿದ್ದಾರೆ ಎಂದು ಆರೋಪಿಸಿ  ಸಿದ್ದರಾಮಯ್ಯ ವಿರುದ್ಧ ಜನಪ್ರತಿನಿಧಿಗಳ ಕೋರ್ಟ್​ಗೆ ಸ್ನೇಹಮಯಿ ಕೃಷ್ಣ ಅವರು ಖಾಸಗಿ ದೂರು ದಾಖಲಿಸಿದ್ದರು. ವಿಚಾರಣೆ ನಡೆಯುತ್ತಿದ್ದ ಸಂದರ್ಭದಲ್ಲಿ ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದರು. ಈ ಆದೇಶವನ್ನು ಪ್ರಶ್ನಿಸಿ ಸಿಎಂ ಹೈಕೋರ್ಟ್​ ಮೆಟ್ಟಿಲೇರಿದ್ದರು. ಹೀಗಾಗಿ ಹೈಕೋರ್ಟ್ ಮುಂದಿನ ಆದೇಶ ಪ್ರಕಟವಾಗುವರೆಗೆ ​ ಜನಪ್ರತಿನಿಧಿಗಳ ನ್ಯಾಯಾಲಯದ ವಿಚಾರಣೆಗೆ  ತಡೆ ನೀಡಿತ್ತು. ಇದನ್ನೂ ಓದಿ: ಸಿಎಂ ಕುಟುಂಬದವರೇ ಫಲಾನುಭವಿ ಆಗಿರೋದ್ರಿಂದ ತನಿಖೆ ಅಗತ್ಯವಿದೆ: ಹೈಕೋರ್ಟ್‌ ಆದೇಶದಲ್ಲಿ ಏನಿದೆ?

ಮಂಗಳವಾರ ಹೈಕೋರ್ಟ್‌ ಸಿಎಂ ವಿರುದ್ಧ ತನಿಖೆಗೆ ಆದೇಶ ನೀಡಿದ ಬೆನ್ನಲ್ಲೇ ಜನಪ್ರತಿನಿಧಿಗಳ ಕೋರ್ಟ್‌ ಈಗ ಎಫ್‌ಐಆರ್‌ ದಾಖಲಿಸಿ ತನಿಖೆ ನಡೆಸುವಂತೆ  ಮೈಸೂರು ಲೋಕಾಯುಕ್ತಕ್ಕೆ  ಆದೇಶಿಸಿದೆ.

Share This Article