ಬೆಂಗಳೂರು: ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧದ ಮುಡಾ ಹಗರಣದಲ್ಲಿ (MUDA Scam) ಲೋಕಾಯುಕ್ತ ಸಲ್ಲಿಕೆ ಮಾಡಿದ್ದ ಬಿ-ರಿಪೋರ್ಟ್ ಕುರಿತ ಆದೇಶವನ್ನು ಕೋರ್ಟ್ ಡಿ.23ಕ್ಕೆ ಆದೇಶ ಕಾಯ್ದಿರಿಸಿದೆ.
ಲೋಕಾಯುಕ್ತ ಪೊಲೀಸರು ಸಲ್ಲಿಕೆ ಮಾಡಿದ್ದ ಬಿ-ರಿಪೋರ್ಟ್ ಪ್ರಶ್ನಿಸಿ, ದೂರುದಾರ ಸ್ನೇಹಮಯಿ ಕೃಷ್ಣ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ಇಂದು ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪ್ರಕರಣದ ಕೇಸ್ ಡೈರಿ ನೀಡುವಂತೆ ಎಸ್‌ಪಿಪಿ ಸೂಚನೆ ನೀಡಿದೆ. ಬಿ-ರಿಪೋರ್ಟ್ ಸಂಬಂಧಿಸಿದಂತೆ ಹೆಚ್ಚುವರಿ ವಾದವಿದ್ದರೆ ಸಲ್ಲಿಸುವಂತೆ ಇಡಿ, ದೂರುದಾರರಿಗೆ ಲೋಕಾಯುಕ್ತ ಪೊಲೀಸರಿಗೆ ಸೂಚನೆ ನೀಡಿದೆ.ಇದನ್ನೂ ಓದಿ: ಮಾನ್ವಿಗೆ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು
ಈ ಹಿಂದೆ ಲೋಕಾಯುಕ್ತ ಪೊಲೀಸರು ಸಾಕಷ್ಟು ದೋಷಾರೋಪ ಪಟ್ಟಿ ಹಾಕಿದ್ದರಲ್ಲ. ಯಾಕೆ ಅಂತಿಮ ವರದಿ ಸಲ್ಲಿಕೆ ಮಾಡ್ತಿಲ್ಲ ಎಂದು ಜಡ್ಜ್ ಪ್ರಶ್ನಿಸಿದ್ರು. ಇದಕ್ಕೆ ಉತ್ತರಿಸಿದ ವೆಂಕಟೇಶ್ ಅರಬಾಟಿ, ಈಗಾಗಲೇ ಅಂತಿಮ ವರದಿ ತಯಾರಿ ಆಗಿದೆ. ಅನುಮತಿ ಸಿಗದ ಕಾರಣ ಸಲ್ಲಿಕೆ ಮಾಡುತ್ತಿಲ್ಲ. ಸ್ವಲ್ಪ ಸಮಯ ನೀಡಿದರೆ ಸೀಲ್ಡ್ ಕವರ್‌ನಲ್ಲಿ ವರದಿ ನೀಡಲು ಸಿದ್ಧಎಂದು ತಿಳಿಸಿದ್ರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ದೂರುದಾರ ಸ್ನೇಹಮಯಿ ಕೃಷ್ಣ, ಕೋರ್ಟ್ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಇನ್ನೂ ಎರಡೂ ವರ್ಷಗಳ ಕಾಲ ನೀಡಿದ್ರೂ ಕೂಡ ಅಂತಿಮ ವರದಿ ಸಲ್ಲಿಸೋದಿಲ್ಲ. ತನಿಖಾಧಿಕಾರಿ ಇಲ್ಲೇ ಇದ್ದಾರೆ. ಅವರನ್ನೇ ಕೇಳಿ ಯಾವುದಾದರೂ ತನಿಖೆ ಮಾಡಿದ್ದಾರಾ? ಎಂದು ಅಸಮಾಧಾನ ವ್ಯಕ್ತಪಡಿಸಿದ್ರು.
ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಪ್ರಕರಣದ ತನಿಖೆ ಇನ್ನೂ ಮುಗಿಯದಿಲ್ಲ ಎಂದಿದ್ದು, ಡಿ.23ಕ್ಕೆ ಆದೇಶ ಕಾಯ್ದಿರಿಸಿದ್ದಾರೆ. ಈ ಮಧ್ಯೆ, ಸ್ನೇಹಮಯಿ ಕೃಷ್ಣ ಉದ್ದೇಶಪೂರ್ವಕವಾಗಿ ಕಿರುಕುಳ ಕೊಡ್ತಿದ್ದಾರೆ ಅಂತ ಸಚಿವ ಬೈರತಿ ಸುರೇಶ್ ಕಿಡಿಕಾರಿದ್ದಾರೆ.ಇದನ್ನೂ ಓದಿ: ಪಬ್‌ನಲ್ಲಿ ಯುವತಿಯ ಮೊಬೈಲ್ ನಂಬರ್ ಕೇಳಿ ಕಿರುಕುಳ – ಕನ್ನಡ ಸಂಘಟನೆ ಮುಖಂಡನ ವಿರುದ್ಧ FIR

