20 ಕೋಟಿ ಕೊಡಿ, ಇಲ್ಲದಿದ್ದರೆ ಕೊಲೆ ಮಾಡ್ತೀವಿ: ಮುಕೇಶ್ ಅಂಬಾನಿಗೆ ಬೆದರಿಕೆ

Public TV
1 Min Read

ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ (Reliance Industries Chairman Mukesh Ambani) ಅವರಿಗೆ ಕೊಲೆ ಬೆದರಿಕೆಯೊಂದು (Threat) ಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಇಮೇಲ್ ಮೂಲಕ ಬೆದರಿಕೆ ಹಾಕಿರುವ ವ್ಯಕ್ತಿ, 20 ಕೋಟಿ ಕೊಡಬೇಕು ಎಂಬುದಾಗಿ ಬೇಡಿಕೆ ಇಟ್ಟಿದ್ದಾನೆ. ನೀವು ನಮಗೆ 20 ಕೋಟಿ ರೂಪಾಯಿ ನೀಡದಿದ್ದರೆ, ನಾವು ನಿಮ್ಮನ್ನು ಕೊಲ್ಲುತ್ತೇವೆ. ನಾವು ಭಾರತದಲ್ಲಿ ಅತ್ಯುತ್ತಮ ಶೂಟರ್ ಗಳನ್ನು ಹೊಂದಿದ್ದೇವೆ ಎಂದು ಎಚ್ಚರಿಕೆ ನೀಡಿದ್ದಾನೆ.

ಅಕ್ಟೋಬರ್ 27 ರಂದು ಶಾದಾಬ್ ಖಾನ್ ಎಂಬ ಹೆಸರಿನಿಂದ ಈ ಬೆದರಿಕೆ ಮೇಲ್ ಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಸದ್ಯ ಅಂಬಾನಿ ನಿವಾಸ ಆಂಟಿಲಿಯಾದಲ್ಲಿ ಭದ್ರತಾ ಅಧಿಕಾರಿಗಳ ಗಮನಕ್ಕೆ ಬಂದ ನಂತರ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಈ ಸಂಬಂಧ ಸದ್ಯ ತನಿಖೆ ಮುಂದುವರಿದಿದೆ. ಇದನ್ನೂ ಓದಿ: ಪ್ರತಿಯೊಬ್ಬರ ನಡೆ ಕೂಡ ನಮಗೆ ಗೊತ್ತಿದೆ- ಶಾಸಕರಿಗೆ ಡಿಕೆಶಿ ಖಡಕ್ ಎಚ್ಚರಿಕೆ

ಕಳೆದ ವರ್ಷ ಅಂಬಾನಿ ಮತ್ತು ಅವರ ಕುಟುಂಬ ಸದಸ್ಯರನ್ನು ಗುರಿಯಾಗಿಸಿಕೊಂಡು ಅನಾಮಧೇಯ ಕರೆಗಳನ್ನು ಮಾಡಿದ್ದಕ್ಕಾಗಿ ಬಿಹಾರದ ವ್ಯಕ್ತಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದರು. ದಕ್ಷಿಣ ಮುಂಬೈನಲ್ಲಿರುವ ಅಂಬಾನಿ ಕುಟುಂಬದ ನಿವಾಸ ಆಂಟಿಲಿಯಾದ ಜೊತೆಗೆ ಎಚ್‍ಎನ್ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಯನ್ನು ಸ್ಫೋಟಿಸುವುದಾಗಿ ಬೆದರಿಕೆ ಕರೆ ಬಂದಿತ್ತು.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್