ಚಿಕ್ಕಮಗಳೂರು: ದತ್ತಪೀಠದಲ್ಲಿ (Datta Peeta) ದತ್ತಜಯಂತಿ ಹಿನ್ನೆಲೆ ಡಿ.1ರಿಂದ 4ರವರೆಗೆ ಚಿಕ್ಕಮಗಳೂರು (Chikkamagaluru) ತಾಲೂಕಿನ ಮುಳ್ಳಯ್ಯನಗಿರಿ (Mullayanagiri) ಭಾಗಕ್ಕೆ ಪ್ರವಾಸಿಗರಿಗೆ ನಿರ್ಬಂಧ ಹೇರಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಮುಳ್ಳಯ್ಯನಗಿರಿ, ದತ್ತಪೀಠ, ಸೀತಾಳಯ್ಯನಗಿರಿ, ಗಾಳಿಕೆರೆ ಮಾಣಿಕ್ಯಧಾರಕ್ಕೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಡಿಸೆಂಬರ್ 2, 3 ಹಾಗೂ 4ರಂದು ದತ್ತಪೀಠದಲ್ಲಿ ದತ್ತಜಯಂತಿ ಸಂಭ್ರಮ ನಡೆಯಲಿದೆ. ವಿಶ್ವಹಿಂದೂ ಪರಿಷತ್, ಬಜರಂಗದಳದ ನೇತೃತ್ವದಲ್ಲಿ ದತ್ತಜಯಂತಿ ಸಂಭ್ರಮ ನಡೆಯಲಿದೆ. ಇದನ್ನೂ ಓದಿ: ಈಗ ಯಕ್ಷಗಾನದಲ್ಲಿ ಸಲಿಂಗಕಾಮ ಇಲ್ಲ, ಹೇಳಿಕೆಯಿಂದ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ: ಪುರುಷೋತ್ತಮ ಬಿಳಿಮಲೆ
ಪ್ರವಾಸಿಗರಿಗೆ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ. ಡಿಸೆಂಬರ್ 5ರ ಬೆಳಗ್ಗೆ 10 ಗಂಟೆ ಬಳಿಕ ಮುಳ್ಳಯ್ಯನಗಿರಿ ಭಾಗ ಪ್ರವಾಸಿಗರಿಗೆ ಮುಕ್ತವಾಗಲಿದೆ. ಇದನ್ನೂ ಓದಿ: ವಿಧಾನಸೌಧದ ಮುಂದೆಯೇ ಡಕಾಯಿತಿ; ಹಲ್ಲೆ ನಡೆಸಿ ಹಣ, ಮೊಬೈಲ್ ಕಸಿದು ಪರಾರಿ
