ಬಹುಭಾಷಾ ನಟ ಪ್ರಕಾಶ್ ರಾಜ್ ಗುಜರಾತ್‌ನಲ್ಲೂ ಹೋರಾಟ ಮಾಡಲಿ – ಎಂಬಿಪಿ ತಿರುಗೇಟು

Public TV
1 Min Read

ಬೆಂಗಳೂರು: ಪ್ರಕಾಶ್ ರಾಜ್ ಬಹುಭಾಷಾ ನಟರಲ್ವಾ? ಕರ್ನಾಟಕದಲ್ಲಿ (Karnataka) ಮಾತ್ರವಲ್ಲ, ಗುಜರಾತ್‌ನಲ್ಲೂ (Gujarat) ಹೋರಾಟ ಮಾಡಲಿ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ (MB Patil) ತಿರುಗೇಟು ನೀಡಿದ್ದಾರೆ.ಇದನ್ನೂ ಓದಿ: ರಾಜ್ಯದ ಜನರಿಗೆ ಕಾಂಗ್ರೆಸ್ ಸರ್ಕಾರ ಮಕ್ಮಲ್ ಟೋಪಿ ಹಾಕಿದೆ: ರೇಣುಕಾಚಾರ್ಯ

ದೇವನಹಳ್ಳಿ ಕೃಷಿ ಭೂಮಿ ಸ್ವಾಧೀನಕ್ಕೆ ಪ್ರಕಾಶ್ ರಾಜ್ (Prakash Raj) ವಿರೋಧ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೇವಲ ಕರ್ನಾಟಕದಲ್ಲಿ ಮಾತ್ರ ಪ್ರಕಾಶ್ ರಾಜ್ ಹೋರಾಟ ಯಾಕೆ? ಅವರು ಬಹುಭಾಷಾ ನಟರಲ್ವಾ? ಕರ್ನಾಟಕದಲ್ಲಿ ಮಾತ್ರವಲ್ಲ, ಯುಪಿ, ಅಸ್ಸಾಂನಲ್ಲೂ ಹೋರಾಟ ಮಾಡಲಿ, ಅಷ್ಟೇ ಯಾಕೆ ಗುಜರಾತ್‌ನಲ್ಲೂ ಹೋರಾಟ ಮಾಡಲಿ ಎಂದು ತಿರುಗೇಟು ನೀಡಿದರು.

ಕೆಐಎಡಿಬಿ (KIADB) ಭೂಸ್ವಾಧೀನ ಫೈನಲ್ ನೋಟಿಫಿಕೇಷನ್ ಆಗಿದೆ. ಈಗ ಡಿನೋಟಿಫಿಕೇಷನ್ ಮಾಡಬೇಕಾಗುತ್ತದೆ. ಅದಕ್ಕಾಗಿ ಒಂದಿಷ್ಟು ಕಾನೂನು ತೊಡಕುಗಳೂ ಕೂಡ ಇವೆ. ಅವುಗಳ ಬಗ್ಗೆ ಅಡ್ವೋಕೇಟ್ ಜನರಲ್ ಹತ್ತಿರ ಚರ್ಚೆ ಮಾಡುತ್ತೇವೆ. ಕಾನೂನಾತ್ಮಕ ಅಂಶಗಳ ಬಗ್ಗೆ ಈಗ ಹೇಳುವುದಿಲ್ಲ. ಸರ್ಕಾರಕ್ಕೆ ನಷ್ಟ ಆಗುತ್ತಾ ಎನ್ನುವ ಬಗ್ಗೆ ಹೇಳಲು ಹೋಗುವುದಿಲ್ಲ. ಆದರೆ ಯಾರಿಗೂ ಕೂಡ ಅನ್ಯಾಯ ಆಗದ ತರಹ ನೋಡಿಕೊಳ್ಳುವಂತೆ ಸಿಎಂ ಹಾಗೂ ಕಾನೂನು ತಜ್ಞರ ಜೊತೆಗೆ ಚರ್ಚೆ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.ಇದನ್ನೂ ಓದಿ: ಯುಕೆ ಮೂಲದ ಶಸ್ತ್ರಾಸ್ತ್ರ ಸಲಹೆಗಾರ ಸಂಜಯ್ ಭಂಡಾರಿ ಪರಾರಿಯಾದ ಆರ್ಥಿಕ ಅಪರಾಧಿ: ದೆಹಲಿ ವಿಶೇಷ ಕೋರ್ಟ್‌ ಆದೇಶ

Share This Article