ಪತ್ನಿಯೊಂದಿಗೆ ಅನೈತಿಕ ಸಂಬಂಧ- ಬೆಂಗಳೂರಿನಿಂದ ಕಲಬುರಗಿಗೆ ಕರೆತಂದು ಪ್ರಾಣಸ್ನೇಹಿತನ ಹತ್ಯೆ

Public TV
1 Min Read

ಕಲಬುರಗಿ: ಪತ್ನಿಯ ಜೊತೆ ಅನೈತಿಕ ಸಂಬಂಧ ಆರೋಪ ಹಿನ್ನೆಲೆ ಪ್ರಾಣ ಸ್ನೇಹಿತನನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿ (Kalaburagi) ಜಿಲ್ಲೆಯ ಕಮಲಾಪುರ ತಾಲೂಕಿನ ಮುರಡಿ ಗ್ರಾಮದಲ್ಲಿ ನಡೆದಿದೆ.

ಅಂಬರೀಶ್ (28) ಸ್ನೇಹಿತನಿಂದಲೇ ಕೊಲೆಯಾದ ಯುವಕ. ಅಜಯ್ ಹಾಗೂ ಆತನ ಸ್ನೇಹಿತರು ಕೊಲೆ ಮಾಡಿರುವ ಆರೋಪಿಗಳು. ಅಜಯ್ ಪತ್ನಿ ಜೊತೆ ಅಂಬರೀಶ್ ಅನೈತಿಕ ಸಂಬಂಧ ಹೊಂದಿದ್ದಕ್ಕೆ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಇದನ್ನೂ ಓದಿ: 77 ಲಕ್ಷ ವಂಚನೆ – ಆಲಿಯಾ ಭಟ್‌ ಮಾಜಿ ಆಪ್ತ ಸಹಾಯಕಿ ಬೆಂಗಳೂರಿನಲ್ಲಿ ಅರೆಸ್ಟ್‌

ಅಜಯ್ ತನ್ನ ಹೆಂಡತಿ ಜೊತೆ ಇರುವಂತೆ ಹೇಳಿ ಕಲಬುರಗಿಯಿಂದ ಬೆಂಗಳೂರಿಗೆ (Bengaluru) ಹೋಗಿ ಅಂಬರೀಶ್‌ನನ್ನ ಕರೆತಂದಿದ್ದ. ಅಂಬರೀಶ್‌ನನ್ನು ಮುರಡಿ ಗ್ರಾಮಕ್ಕೆ ಕರೆತಂದ ಅಜಯ್, ಆತನ ಸ್ನೇಹಿತರ ಜೊತೆ ಸೇರಿ ವಯರ್‌ನಿಂದ ಕತ್ತು ಬಿಗಿದು ಕೊಲೆ ಮಾಡಿದ್ದಾನೆ. ಇದನ್ನೂ ಓದಿ: ಪತಿ ಜೊತೆ ಜಗಳವಾಡಿ ಕೆರೆಗೆ ಹಾರಿ ಬದುಕಿಸುವಂತೆ ಆಂಜನೇಯನನ್ನ ಬೇಡುತ್ತಿದ್ದ ಮಹಿಳೆಯ ರಕ್ಷಣೆ

ಅಜಯ್ ಪೊಲೀಸರಿಗೆ ಕರೆ ಮಾಡಿ, ಸ್ನೇಹಿತನನ್ನೇ ಕೊಲೆ ಮಾಡಿರೋದಾಗಿ ಹೇಳಿದ್ದ. ನಂತರ ನೇರವಾಗಿ ಪೊಲೀಸ್ ಠಾಣೆಗೆ ಹೋಗಿ ಅಜಯ್ ಶರಣಾಗಿದ್ದಾನೆ. ನರೋಣಾ ಪೊಲೀಸ್ (Narona Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Share This Article