ಬೆಳಗಾವಿಯಲ್ಲಿ ಯುವಕನ ಮರ್ಡರ್ – ಮಹಾರಾಷ್ಟ್ರ ಮೂಲದ ಇಬ್ಬರು ಆರೋಪಿಗಳ ಬಂಧನ

Public TV
1 Min Read

ಬೆಳಗಾವಿ: ಶಿವಬಸವ ನಗರದಲ್ಲಿ (Shivabasava Nagara) ನಡೆದ ನಾಗರಾಜ್ ಗಾಡಿವಡ್ಡರ್ ಯುವಕನ (Youth) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಹಂತಕರ ಪೈಕಿ ಇಬ್ಬರು ಆರೋಪಿಗಳನ್ನು ಮಾಳಮಾರುತಿ ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿಯ (Belagavi) ರಾಮನಗರದ ಗಾಡಿವಡ್ಡರ ನಿವಾಸಿ ನಾಗರಾಜ್ ಗಾಡಿವಡ್ಡರ್ (26) ಕೊಲೆಯಾದ ಯುವಕ. ಈತನ ಹಿಂಬದಿಯಿಂದ ಬಂದು ಕಲ್ಲಿನಿಂದ ಹೊಡೆದು ಹಂತಕರು ಕೊಲೆ ಮಾಡಿದ್ದರು. ಸದ್ಯ ಕೊಲ್ಲಾಪುರದ ಎಲ್‌ಸಿಬಿ ಪೊಲೀಸರ ಸಹಕಾರದೊಂದಿಗೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಕೊಲ್ಲಾಪುರ ಮೂಲದ ಪ್ರಥಮೇಶ್ ಕಸಬೇಕರ್ (20), ಆಕಾಶ್ ಪವಾರ್ (21) ಬಂಧಿತ ಆರೋಪಿಗಳು. ಇದನ್ನೂ ಓದಿ: ಹುಡುಗಿಯರ ಕಡೆ ನೋಡಲ್ಲ, ಆಂಟಿಯರು ಸಿಕ್ರೆ ಬಿಡಲ್ಲ – ಬೆಂಗ್ಳೂರಿನಲ್ಲೊಬ್ಬ ಕಾಮುಕ ಟೆಕ್ಕಿ ಅರೆಸ್ಟ್

ತಲೆ ಮರೆಸಿಕೊಂಡಿರುವ ಇನ್ನೋರ್ವ ಪ್ರಮುಖ ಆರೋಪಿಯ ಪತ್ತೆಗೆ ಕಾರ್ಯಾಚರಣೆ ಮುಂದುವರೆದಿದ್ದು, ಎ1 ಆರೋಪಿ ಪತ್ತೆಯಾದ ನಂತರವಷ್ಟೇ ನಿಖರ ಕಾರಣ ತಿಳಿದು ಬರಲಿದೆ. ಘಟನೆ ನಡೆದ 48 ಗಂಟೆಗಳಲ್ಲಿ ಪ್ರಕರಣ ಭೇದಿಸಿದ ಪೊಲೀಸರ ತಂಡಕ್ಕೆ ಬೆಳಗಾವಿ ಕಮಿಷನರ್ ಎಸ್.ಎನ್.ಸಿದ್ದರಾಮಪ್ಪ ಬಹುಮಾನ ಘೋಷಣೆ ಮಾಡಿದ್ದಾರೆ. ಇದನ್ನೂ ಓದಿ: ಮಗಳ ತಂಟೆಗೆ ಬರಬೇಡಿ ಎಂದಿದ್ದಕ್ಕೆ ಚಾಕುವಿನಿಂದ ಇರಿದು ಹತ್ಯೆ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್