ನವದೆಹಲಿ: ಮುರುಘಾ ಮಠದ (Murugha Mutt) ಆಸ್ತಿಯನ್ನು ಸರ್ಕಾರದ ವಶಕ್ಕೆ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ (Supreme Court) ರಾಜ್ಯ ಸರ್ಕಾರಕ್ಕೆ (State Govt) ನೋಟಿಸ್ ನೀಡಿದೆ.

ಹೆಚ್.ಏಕಾಂತಯ್ಯ ಸಲ್ಲಿಸಿದ್ದ ಅರ್ಜಿಯನ್ನು ನ್ಯಾ.ಪಂಕಜ್ ಮಿಥಲ್ ನೇತೃತ್ವದ ದ್ವಿ-ಸದಸ್ಯ ಪೀಠ ವಿಚಾರಣೆ ನಡೆಸಿದೆ. ಅರ್ಜಿಯಲ್ಲಿ ಮಠದ ಆಸ್ತಿಯನ್ನು ಸರ್ಕಾರದ ವಶಕ್ಕೆ ನೀಡಬೇಕು ಎಂದು ಮನವಿ ಮಾಡಲಾಗಿದೆ. ಇದನ್ನೂ ಓದಿ: ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್


ಇದಕ್ಕೂ ಮೊದಲು ಮಠದ ಆಸ್ತಿಯನ್ನು ಮಠದ ಸುಪರ್ದಿಗೆ ನೀಡುವಂತೆ ಹೈಕೋರ್ಟ್ ಆದೇಶ ನೀಡಿತ್ತು. ಹೈಕೋರ್ಟ್‌ನ ಈ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲಾಗಿತ್ತು.

ಸುಪ್ರೀಂಕೋರ್ಟ್‌ನ ವಿಚಾರಣೆ ವೇಳೆ ಮಠದ ಭಕ್ತೆಯೊಬ್ಬರು ಮಧ್ಯಪ್ರವೇಶ ಅರ್ಜಿ ಸಲ್ಲಿಸಿ, ಈಗಾಗಲೇ ಸ್ವಾಮೀಜಿ ಮಠದ ಆಸ್ತಿಯನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದಾರೆ ಎಂಬ ಆತಂಕ ವ್ಯಕ್ತಪಡಿಸಿದರು. ಈ ಹಿನ್ನೆಲೆ ತಮ್ಮನ್ನು ಕೂಡ ಪ್ರಕರಣದಲ್ಲಿ ಭಾಗಿಯಾಗಲು ಅವಕಾಶ ನೀಡುವಂತೆ ಮನವಿ ಮಾಡಿದರು. ಈ ಮನವಿಗೆ ಸುಪ್ರೀಂಕೋರ್ಟ್ ಒಪ್ಪಿಗೆ ಸೂಚಿಸಿದ್ದು, ಮುಂದಿನ ವಿಚಾರಣೆ ವೇಳೆ ಹೆಚ್ಚಿನ ವಿವರಗಳನ್ನು ಪರಿಶೀಲಿಸುವುದಾಗಿ ತಿಳಿಸಿದೆ.ಇದನ್ನೂ ಓದಿ: ಕೊಡಗಿನ ಹೋಂ ಸ್ಟೇಯಲ್ಲಿ ವಿದೇಶಿ ಮಹಿಳೆ ರೇಪ್ ಆರೋಪ – ಇಬ್ಬರನ್ನು ಬಂಧಿಸಲಾಗಿದೆ: ಪೊನ್ನಣ್ಣ

