ಎಆರ್ ರೆಹಮಾನ್ ಸಂಗೀತ ಕಾರ್ಯಕ್ರಮಕ್ಕೆ ಬ್ರೇಕ್ ಹಾಕಿದ ಪುಣೆ ಪೊಲೀಸರು

By
1 Min Read

ಬಾಲಿವುಡ್ (Bollywood) ಸ್ಟಾರ್ ಸಂಗೀತ ನಿರ್ದೇಶಕ ಎ.ಆರ್ ರೆಹಮಾನ್ (AR Rahman) ಸಂಗೀತ ಕಾರ್ಯಕ್ರಮವನ್ನು ಅರ್ಧಕ್ಕೆ ನಿಲ್ಲಿಸಿದ ಘಟನೆ ಪುಣೆಯಲ್ಲಿ ನಡೆದಿದೆ. ಸ್ವತಃ ಎ.ಆರ್ ರೆಹಮಾನ್ ವೇದಿಕೆಯಲ್ಲಿ ಹಾಡುತ್ತಿದ್ದ ವೇಳೆ ಕಾರ್ಯಕ್ರಮಕ್ಕೆ ಎಂಟ್ರಿ ಕೊಟ್ಟ ಪುಣೆ ಪೊಲೀಸರು, ಆಯೋಜಕರಿಗೆ ಈವೆಂಟ್ ನಿಲ್ಲಿಸುವಂತೆ ಹೇಳಿದ್ದಾರೆ. ವೇದಿಕೆಯ ಮೇಲೆ ಹಾಡುತ್ತಿದ್ದ ರೆಹಮಾನ್‌ಗೂ ಪೊಲೀಸರು ಹಾಡು ನಿಲ್ಲಿಸುವಂತೆ ಸೂಚಿಸಿದ್ದಾರೆ. ಪೊಲೀಸರ ಸೂಚನೆಯಂತೆ ಕಾರ್ಯಕ್ರಮ ಅರ್ಧಕ್ಕೆ ನಿಲ್ಲಿಸಲಾಗಿದೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಭಾರಿ ಆಕ್ರೋಶ ವ್ಯಕ್ತವಾಗಿದೆ. ಇದನ್ನೂ ಓದಿ:ಎಲೆಕ್ಷನ್ ರಿಸಲ್ಟ್ ದಿನವೇ ರಾಘವ್ ಚಡ್ಡಾ- ಪರಿಣಿತಿ ಚೋಪ್ರಾ ಎಂಗೇಜ್‌ಮೆಂಟ್

ಪುಣೆಯಲ್ಲಿ ರಾತ್ರಿ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿತ್ತು. ಎಆರ್ ರೆಹಮಾನ್ ತಂಡ ಈ ಕಾರ್ಯಕ್ರಮದಲ್ಲಿ ವಿಶೇಷ ಪ್ರದರ್ಶನ ನೀಡಿತ್ತು. ಸುಪ್ರೀಂ ಕೋರ್ಟ್ ನಿಯಮದ ಪ್ರಕಾರ ರಾತ್ರಿ 10 ಗಂಟೆಯೊಳಗೆ ಪುಣೆಯಲ್ಲಿ ಎಲ್ಲಾ ಕಾರ್ಯಕ್ರಮಗಳನ್ನು ಮುಗಿಸಬೇಕು. ಆದರೆ ಎಆರ್ ರಹೆಮಾನ್ ಸಂಗೀತ ಕಾರ್ಯಕ್ರಮ 10 ಗಂಟೆಯಾದರೂ ಮುಗಿಯಲಿಲ್ಲ. ಹಾಗಾಗಿ ಈ ಕಾರ್ಯಕ್ರಮಕ್ಕೆ ಪೊಲೀಸರು ತಡೆ ನೀಡಿದ್ದಾರೆ. ಸ್ವತಃ ಎ.ಆರ್ ರೆಹಮಾನ್ ಹಾಡುತ್ತಿದ್ದಂತೆ ಪುಣೆ ಪೊಲೀಸರು ವೇದಿಯತ್ತ ಆಗಮಿಸಿ ಕಾರ್ಯಕ್ರಮಕ್ಕೆ ಬ್ರೇಕ್ ಹಾಕಿದ್ದಾರೆ.

ಇತ್ತ ಎ.ಆರ್ ರೆಹಮಾನ್ ಪುಣೆ ಸಂಗೀತ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ್ದಕ್ಕೆ ಟ್ವಿಟ್ಟರ್ ಮೂಲಕ ಧನ್ಯವಾದ ತಿಳಿಸಿದ್ದಾರೆ. ಪುಣೆ ಮತ್ತೆ ಬರೋದಾಗಿ ಅಭಿಮಾನಿಗಳಿಗೆ ತಿಳಿಸಿದ್ದಾರೆ.

Share This Article