ದಶಕದ ನಂತರ ಮತ್ತೆ ಬಣ್ಣ ಹಚ್ಚಿದ ಸಂಗೀತ ನಿರ್ದೇಶಕ ಗುರುಕಿರಣ್

Public TV
1 Min Read

ನ್ನಡ ಸಿನಿಮಾ ರಂಗದ ಖ್ಯಾತ ಸಂಗೀತ ನಿರ್ದೇಶಕ, ಗಾಯಕ ಗುರುಕಿರಣ್ (Gurukiran) ಮತ್ತೆ ಬಣ್ಣ ಹಚ್ಚಿದ್ದಾರೆ. ಬರೋಬ್ಬರಿ ದಶಕದ ನಂತರ ಅವರು ತೆರೆಯ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ. ಶರಣ್ (Sharan) ನಟನೆಯ ಛೂ ಮಂತರ್ ಸಿನಿಮಾದಲ್ಲಿ ಅವರು ಅತಿಥಿ ಪಾತ್ರ ಮಾಡಿದ್ದು, ಅದಕ್ಕೂ ಮುನ್ನ 2007ರಲ್ಲಿ ತೆರೆಕಂಡ ಏಕದಂತ ಸಿನಿಮಾದಲ್ಲಿ ಗುರುಕಿರಣ್ ನಟಿಸಿದ್ದರು.

ಶರಣ್‌ ಈ ಸಿನಿಮಾದ ಮೂಲಕ ನಗಿಸಿ, ಹೆದರಿಸೋಕೆ ಬರುತ್ತಿದ್ದು, ಟೀಸರ್ ಮೂಲಕ ಕಮಾಲ್ ಕೂಡ ಮಾಡಿದ್ದಾರೆ. ಮಾನಸ ತರುಣ್, ತರುಣ್ ಶಿವಪ್ಪ ನಿರ್ಮಾಣದಲ್ಲಿ `ಛೂ ಮಂತರ್’ ಸಿನಿಮಾ ಮೂಡಿ ಬಂದಿದೆ. ಸದ್ಯ `ಛೂ ಮಂತರ್’ (Choo Mantar) ಟೀಸರ್ ಹಾರರ್ ಝಲಕ್ ಪ್ರೇಕ್ಷಕರನ್ನ ಬಡಿದೆಬ್ಬಿಸಿದೆ. ಮೊದಲ ಬಾರಿಗೆ ಹಾರರ್ ಸಿನಿಮಾದಲ್ಲಿ ನಟಿಸಿರುವ ಶರಣ್ ಅವರ ಹೊಸ ಅವತಾರ ಅಭಿಮಾನಿಗಳಿಗೆ ಇಷ್ಟವಾಗಿದೆ. ಇದನ್ನೂ ಓದಿ: ಅವಳಿ ಮಕ್ಕಳ ಮುದ್ದಾದ ಫೋಟೋ ಹಂಚಿಕೊಂಡ ಅಮೂಲ್ಯ

ಹಾಲಿವುಡ್ (Hollywood) ಸಿನಿಮಾಗಳನ್ನು ನೆನಪಿಸುವ ವಿಷ್ಯುವಲ್ಸ್ `ಛೂ ಮಂತರ್’ ಸಿನಿಮಾದಲ್ಲಿದೆ ಎನ್ನುವುದು ಟೀಸರ್ ನೋಡಿದ್ರೆ ಅರ್ಥವಾಗುತ್ತದೆ. ಪಾಳು ಬಿದ್ದ ಉತ್ತರಾಕಾಂಡದ ಮಾರ್ಗನ್ ಹೌಸ್ ಪ್ಯಾಲೇಸ್‌ನಲ್ಲಿ ಚಿತ್ರವಿಚಿತ್ರ ಘಟನೆಗಳು ನಡೆಯುತ್ತಿರುತ್ತದೆ. ಭೂತ ಪ್ರೇತ ಇರುವ ಆತಂಕ ಮನೆಯಲ್ಲಿರುವವರನ್ನು ಕಾಡುತ್ತಿರುತ್ತದೆ. ಆ ಪ್ರಶ್ನೆಗಳಿಗೆ ಉತ್ತರ ಹುಡುಕುವ ನಾಯಕನಾಗಿ ಶರಣ್ ಎಂಟ್ರಿ ಕೊಡುತ್ತಾರೆ. ಟೀಸರ್ ನೋಡುಗರನ್ನು ಕಥೆಯ ಒಳಗೆ ಕರೆದುಕೊಂಡು ಹೋಗುತ್ತದೆ.

ನಟ ಶರಣ್ ಈ ಸಿನಿಮಾದಲ್ಲಿ ಒಬ್ಬ ಮಂತ್ರವಾದಿ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರದಲ್ಲಿ ಮೇಘನಾ ಗಾಂವ್ಕರ್, ಅದಿತಿ, ನಟ ಚಿಕ್ಕಣ್ಣ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. `ಕರ್ವ’ (Karva) ಖ್ಯಾತಿಯ ನವನೀತ್ (Navaneeth) `ಛೂ ಮಂತರ್’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಭಿನ್ನ ಕಥೆಯನ್ನ ತೆರೆಯ ಮೇಲೆ ತೋರಿಸಲು ಹೊರಟಿದ್ದಾರೆ. ಸದ್ಯ ಸಿನಿಮಾದ ಪೋಸ್ಟರ್, ಟೀಸರ್ ಮೂಲಕ `ಛೂ ಮಂತರ್’ ಚಿತ್ರ ಸಂಚಲನ ಸೃಷ್ಟಿಸಿದೆ. ಸಿನಿಮಾ ಚಿತ್ರೀಕರಣ ಕೂಡ ಕಂಪ್ಲಿಟ್ ಆಗಿದ್ದು, ಸದ್ಯದಲ್ಲಿಯೇ ತೆರೆಯ ಮೇಲೆ ಅಬ್ಬರಿಸಲಿದೆ.

Share This Article