ಹಿಂದೂ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ ಮಾಡಿ ಭಾವೈಕ್ಯತೆ ಮೆರೆದ ಮುಸ್ಲಿಂ ಮಹಿಳೆ

Public TV
1 Min Read

ಮಡಿಕೇರಿ: ರಾಜ್ಯದಲ್ಲಿ ಧರ್ಮಗಳ ಮಧ್ಯೆ ಹಲವು ದಿನಗಳಿಂದ ನಡೆಯುತ್ತಿರುವ ಸಂಘರ್ಷಗಳ ನಡುವೆ ಹಿಂದೂ, ಮುಸ್ಲಿಂ ಬಾಂಧವರು ಭಾವೈಕ್ಯತೆಯಿಂದ ಒಟ್ಟಾಗಿ ಬಾಳುವಂತೆ ಮಾಡಿ ಎಂದು ಹಿಂದೂ ದೇವಾಲಯದಲ್ಲಿ ಮುಸ್ಲಿಂ ಮಹಿಳೆಯೊಬ್ಬರು ವಿಶೇಷ ಪ್ರಾರ್ಥನೆ ಮಾಡಿದ ಅಪರೂಪದ ಘಟನೆ ಮಡಿಕೇರಿಯಲ್ಲಿ ನಡೆದಿದೆ.

ರಾಜ್ಯದಲ್ಲಿ ಹಿಜಬ್ ವಿವಾದದ ಬಳಿಕ ಹಿಂದೂ ದೇವಾಲಯಗಳ ಬಳಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ವಿಧಿಸಲಾಗಿತ್ತು. ಆ ನಂತರ ಹಲಾಲ್ ಕಟ್ – ಜಟ್ಕಾ ಕಟ್ ಮಾಂಸ ಮಾರಾಟದ ಸಂಘರ್ಷ ಜೋರಾಗಿದೆ. ಇದನ್ನು ಗಮನಿಸಿದ ಬಳಿಕ ಹಾವೇರಿ ಮೂಲದ ರಜಿಯಾ ಮಡಿಕೇರಿ ನಗರದ ಮುನೇಶ್ವರ ದೇವಾಲಯದ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಕುಟುಂಬ ಸಮೇತರಾಗಿ ದೇವಾಲಯಕ್ಕೆ ಅಗಮಿಸಿ ಹಿಂಧೂ-ಮುಸ್ಲಿಂ ಸಮುದಾಯದವರು ಸಹೋದರರಂತೆ ಬದುಕು ನಡೆಸಬೇಕು ಎಂಬ ನಿಟ್ಟಿನಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಎಲ್ಲರಿಗೂ ಹಲಾಲ್ ಮಾಂಸ ತಿನ್ನಿಸುವ ಭಾವನೆ ಸರಿಯಲ್ಲ: ಶೋಭಾ ಕರಂದ್ಲಾಜೆ

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ರಜಿಯಾ, ಎಲ್ಲರ ಮೈಯಲ್ಲಿ ಹರಿಯುವುದು ಕೆಂಪು ರಕ್ತವೇ ಹೊರತು ಬೇರೆ ಅಲ್ಲ. ದೇಶದಲ್ಲಿ ಅನೇಕ ಧರ್ಮ, ಸಂಪ್ರದಾಯ, ಸಮುದಾಯ, ಭಾಷೆಗಳು ಇವೆ. ವಿವಿಧತೆಯಲ್ಲಿ ಏಕತೆ ಇರುವುದು ನಮ್ಮ ದೇಶದ ವಿಶೇಷ. ಕೆಲ ಭಿನ್ನತೆಗಳಿದ್ದರೂ ಎಲ್ಲರೂ ಕೂಡಿಕೊಂಡು ಒಟ್ಟಾಗಿ ಹೋಗುವುದು ಇಂದಿನ ದಿನಗಳಲ್ಲಿ ಅವಶ್ಯಕತೆಯಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ

ಮುಸ್ಲಿಂ ಮಹಿಳೆ ವಿಶೇಷ ಪ್ರಾರ್ಥನೆ ಮಾಡಿದನ್ನು ಕಂಡ ದೇವಾಲಯಕ್ಕೆ ಬಂದ ಸಾರ್ವಜನಿಕರು ಮಹಿಳೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

Share This Article
Leave a Comment

Leave a Reply

Your email address will not be published. Required fields are marked *