ಲಕ್ನೋ: ಉತ್ತರ ಪ್ರದೇಶದ (Uttar Pradesh) ಮೊರಾದಾಬಾದ್‌ನಲ್ಲಿ (Moradabad) ಮುಸ್ಲಿಂ ಯುವಕ ಮತ್ತು ಹಿಂದೂ ಯುವತಿ ಪ್ರೇಮಿಗಳನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ. ಪ್ರಕರಣದಲ್ಲಿ ಯುವತಿಯ ಸಹೋದರನನ್ನು ಬಂಧಿಸಲಾಗಿದೆ.
27 ವರ್ಷದ ಮುಸ್ಲಿಂ ಯುವಕ ಮತ್ತು 22 ವರ್ಷದ ಹಿಂದೂ ಯುವತಿಯನ್ನು ಕೊಚ್ಚಿ ಕೊಲೆ ಮಾಡಲಾಗಿದೆ. ಯುವತಿಯ ಸಹೋದರ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿದ್ದ ಅರ್ಮಾನ್ ಕೆಲವು ತಿಂಗಳುಗಳಿಂದ ಮೊರಾದಾಬಾದ್‌ನಲ್ಲಿ ವಾಸಿಸುತ್ತಿದ್ದ. ಈ ಸಮಯದಲ್ಲಿ ಆತನಿಗೆ ಕಾಜಲ್ ಪರಿಚಯವಾಗಿದೆ. ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಕಾಜಲ್ ಸಹೋದರರು ಅಂತರ್ಧರ್ಮೀಯ ಸಂಬಂಧಕ್ಕೆ ವಿರೋಧ ವ್ಯಕ್ತಪಡಿಸಿದ್ದ. ಇದನ್ನೂ ಓದಿ: ಆಂಧ್ರದಲ್ಲಿ ಮತ್ತೊಂದು ಬಸ್ ದುರಂತ – ಮೂವರು ಸಜೀವ ದಹನ; ಬಸ್, ಕಂಟೈನರ್ ಧಗಧಗ
ಮೂರು ದಿನಗಳ ಹಿಂದೆ ಅರ್ಮಾನ್ ಮತ್ತು ಕಾಜಲ್ ಕಾಣೆಯಾಗಿದ್ದರು. ಅರ್ಮಾನ್ ತಂದೆ ಹನೀಫ್ ನಾಪತ್ತೆ ದೂರು ದಾಖಲಿಸಿದ್ದರು. ಪೊಲೀಸರು ತನಿಖೆ ನಡೆಸಿದಾಗ, ಕಾಜಲ್ ಕೂಡ ನಾಪತ್ತೆಯಾಗಿದ್ದಾಳೆ ಎಂದು ತಿಳಿದುಬಂದಿದೆ. ಆಕೆಯ ಸಹೋದರರನ್ನು ವಿಚಾರಣೆ ನಡೆಸಿದಾಗ, ಜೋಡಿಯನ್ನು ಕೊಂದಿದ್ದಾಗಿ ಒಪ್ಪಿಕೊಂಡಿದ್ದಾನೆ. ಆರೋಪಿಗಳು ಪೊಲೀಸರಿಗೆ ಶವಗಳನ್ನು ಹೂತಿಟ್ಟ ಸ್ಥಳವನ್ನು ತೋರಿಸಿದ್ದಾರೆ. ನಿನ್ನೆ ಸಂಜೆ ಶವಗಳನ್ನು ಹೊರತೆಗೆಯಲಾಗಿದೆ. ಅರ್ಮಾನ್ ಮತ್ತು ಕಾಜಲ್ ಕೈಕಾಲುಗಳನ್ನು ಕಟ್ಟಿಹಾಕಿ ಕೊಚ್ಚಿ ಕೊಲ್ಲಲಾಗಿದೆ ಎಂದು ಆರೋಪಿಗಳು ಪೊಲೀಸರಿಗೆ ತಿಳಿಸಿದ್ದಾರೆ.
ಯುವತಿಯ ಸಹೋದರನೇ ಇಬ್ಬರನ್ನು ಕೊಂದಿದ್ದಾರೆ ಎಂದು ನಮಗೆ ತನಿಖೆಯಿಂದ ತಿಳಿದುಬಂದಿದೆ. ಶವಗಳನ್ನು ವಶಪಡಿಸಿಕೊಂಡಿದ್ದೇವೆ. ಕೊಲೆಗೆ ಬಳಸಿದ ಗುದ್ದಲಿಯನ್ನು ಸಹ ವಶಪಡಿಸಿಕೊಂಡಿದ್ದೇವೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಸತ್ಪಾಲ್ ಆಂಟಿಲ್ ಹೇಳಿದ್ದಾರೆ. ಇದನ್ನೂ ಓದಿ: ಶಾಲೆಯಿಂದ ಮನೆಗೆ ಬರುತ್ತಿದ್ದ ಬಾಲಕಿಯನ್ನು ಹಿಂಬಾಲಿಸಿದ್ದ ಅಪರಿಚಿತ ಅರೆಸ್ಟ್
ಯುವತಿಯ ಮೂವರು ಸಹೋದರರ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಅವರಲ್ಲಿ ಇಬ್ಬರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಆಘಾತಕಾರಿ ಅಪರಾಧವು ಕೋಮು ಉದ್ವಿಗ್ನತೆಗೆ ಕಾರಣವಾಗದಂತೆ ನೋಡಿಕೊಳ್ಳಲು ಪೊಲೀಸರು, ಜೋಡಿ ವಾಸಿಸುತ್ತಿದ್ದ ಗ್ರಾಮದಲ್ಲಿ ಭಾರೀ ಬಿಗಿಭದ್ರತೆ ಕಲ್ಪಿಸಿದ್ದಾರೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ ಎನ್ನಲಾಗಿದೆ.

