ಸಾಧು ವೇಷ ಧರಿಸಿ ದೇವಸ್ಥಾನದಲ್ಲಿ ಬೀಡುಬಿಟ್ಟಿದ್ದ ಮುಸ್ಲಿಂ ವ್ಯಕ್ತಿ ಅರೆಸ್ಟ್‌

Public TV
1 Min Read

ಚಂಡೀಗಢ: ಸಾಧು (Sadhu) ವೇಷ ಧರಿಸಿ ದೇವಸ್ಥಾನದಲ್ಲಿ ಹಲವು ತಿಂಗಳಿಂದ ನೆಲೆಸಿದ್ದ ಮುಸ್ಲಿಂ ವ್ಯಕ್ತಿಯನ್ನು ಮೀರತ್‌ ಪೊಲೀಸರು (Meerut Police) ಬಂಧಿಸಿದ್ದಾರೆ.

ಬಂಧಿತನನ್ನು ಹರಿಯಾಣದ ಪಾಣಿಪತ್‌ನ ಗಾದ್ರಿ ಗ್ರಾಮದ ನಿವಾಸಿ ಗುಲ್ಲು ಎಂದು ಗುರುತಿಸಲಾಗಿದೆ. ಆತನ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ. ಮತ್ತೂರು ಗ್ರಾಮದ ಶಿವ ದೇವಸ್ಥಾನದ ಬಳಿ ಮುಸ್ಲಿಂ ಸಮುದಾಯಕ್ಕೆ ಸೇರಿದ ಈತ ಸಾಧು ಎಂದು ಹೇಳಿಕೊಂಡು ವಾಸವಾಗಿದ್ದ. ಇದನ್ನೂ ಓದಿ: ಕುಸ್ತಿಪಟುಗಳ ಮೇಲೆ ಲೈಂಗಿಕ ಕಿರುಕುಳ ಆರೋಪ ಕೇಸ್ – ಬ್ರಿಜ್ ಭೂಷಣ್‌ಗೆ ಬಿಗ್ ರಿಲೀಫ್

ಈ ವ್ಯಕ್ತಿ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿತು. ಪೊಲೀಸರು ಕಾರ್ಯಪ್ರವೃತ್ತರಾಗಿ ಸ್ಥಳಕ್ಕೆ ತಲುಪಿದ್ದಾರೆ. ದೇವಸ್ಥಾನದ ಆವರಣದ ಬಳಿ ಸಾಧು ವೇಷ ಧರಿಸಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಆರೋಪಿಯು ಪೊಲೀಸ್ ವಶದಲ್ಲಿದ್ದು, ಪ್ರಕರಣದ ಹೆಚ್ಚಿನ ತನಿಖೆ ನಡೆಯುತ್ತಿದೆ.

ಗುಲ್ಲು ಎಂಬಾತ 2023 ರ ಜನವರಿಯಿಂದ ದೇವಾಲಯದ ಸುತ್ತಮುತ್ತಲಿನ ಪ್ರದೇಶದಲ್ಲಿ ಸಾಧುವಿನಂತೆ ನಟಿಸುತ್ತಿದ್ದ. ಆತನ ಹಿನ್ನೆಲೆಯ ಬಗ್ಗೆ ಸ್ಥಳೀಯರಿಗೆ ತಿಳಿದಿರಲಿಲ್ಲ. ಈತನ ಕೃತ್ಯದ ಹಿಂದಿನ ಉದ್ದೇಶ ಮತ್ತು ಆತ ಏಕೆ ಮಾರುವೇಷದಲ್ಲಿ ಬದುಕಲು ನಿರ್ಧರಿಸಿದ ಎಂಬುದರ ಕುರಿತು ಸದ್ಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈತ ಅಪರಾಧ ಕೃತ್ಯಗಳ ಹಿನ್ನೆಲೆ ಹೊಂದಿದ್ದಾನೆಯೇ ಎಂಬ ವಿಚಾರವನ್ನು ಪೊಲೀಸರು ಇನ್ನೂ ಬಹಿರಂಗಪಡಿಸಿಲ್ಲ. ಈತನಿಗೆ ಮದುವೆಯಾಗಿರುವುದು ಗೊತ್ತಾಗಿದೆ. ಆದರೆ ಪತ್ನಿ ಜೊತೆಗೆ ವಾಸವಾಗಿಲ್ಲ ಎಂದು ದೌರಾಲಾ ಪೊಲೀಸ್ ಠಾಣೆಯ ಎಸ್‌ಐ ಅಭಿಷೇಕ್ ಪಟೇಲ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ವಿಮಾನ ತುರ್ತು ಭೂಸ್ಪರ್ಶದ ಬಳಿಕ ಸೋನಿಯಾ ಗಾಂಧಿ ಆರೋಗ್ಯ ವಿಚಾರಿಸಿದ ಮೋದಿ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್