ತುಮಕೂರು: ಆರ್‌ಎಸ್‌ಎಸ್‌ಗೆ (RSS) ಅಂಕುಶ ಹಾಕಲು ಹೊರಟಿದ್ದ ಸರ್ಕಾರದ ಧೋರಣೆಗೆ ಮಾಜಿ ಸಚಿವ ಕೆ.ಎನ್.ರಾಜಣ್ಣ (K.N.Rajanna) ಪರೋಕ್ಷವಾಗಿ ಬೇಸರ ವ್ಯಕ್ತಪಡಿಸಿದ್ದಾರೆ.
ತುಮಕೂರಿನಲ್ಲಿ (Tumakuru) ಮಾತನಾಡಿದ ರಾಜಣ್ಣ, ಈದ್ಗಾ ಮೈದಾನದಲ್ಲಿ ನಮಾಜ್ ಮಾಡುವಾಗ ರಸ್ತೆಯಲ್ಲೇ ನಮಾಜ್ ಮಾಡ್ತಾರಪ್ಪ. ಹಾಗಾದರೆ ಅವರೆಲ್ಲ ಪರ್ಮಿಷನ್ ತಗೊಂಡೇ ಅಲ್ಲಿ ನಮಾಜ್ ಮಾಡ್ತಾರಾ ಎಂದು ರಾಜಣ್ಣ ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ನಾಳೆ RSS ಪಥ ಸಂಚಲನ – ಚಿತ್ತಾಪುರದಲ್ಲಿ ಹಾಕಿದ್ದ ಬ್ಯಾನರ್, ಬಂಟಿಂಗ್ ತೆರವು
ಪರ್ಮಿಷನ್ ಕೊಡಿ ಅಂತ ಅವ್ರು ಬರಲ್ಲಾ. ಅಥವಾ ಪರ್ಮಿಷನ್ ತಗೊಳಿ ಅಂತ ನಾವು ಕೇಳೋದಿಲ್ಲ. ಹೀಗಾಗಿ, ಜಾರಿ ಮಾಡಲು ಸಾಧ್ಯವಾಗುವಂತಹ ಕಾನೂನನ್ನು ಮಾತ್ರ ತರಬೇಕು. ಅದನ್ನು ಬಿಟ್ಟು ಜಾರಿ ಮಾಡಲಾಗದ ಕಾನೂನು ತಂದ್ರೆ ಪುಸ್ತಕದಲ್ಲಿ ಇರಬೇಕು ಅಷ್ಟೇ ಎಂದು ಆರ್‌ಎಸ್‌ಎಸ್‌ಗೆ ನಿರ್ಬಂಧ ಹಾಕುವ ಸರ್ಕಾರದ ಧೋರಣೆಗೆ ರಾಜಣ್ಣ ಪರೋಕ್ಷವಾಗಿ ಬೇಸರ ವ್ಯಕ್ತಪಡಿಸಿದ್ದಾರೆ.
ಸರ್ಕಾರಿ ಜಾಗದಲ್ಲಿ ಆರ್‌ಎಸ್‌ಎಸ್ ಆಗಲಿ ಬೇರೆ ಯಾವುದೇ ಸಂಘಟನೆ ಆಗಲಿ ಅನುಮತಿ ಪಡೆದು ಕಾರ್ಯಕ್ರಮ ಮಾಡಿ ಅಂತ ಹೇಳಿದ್ದಾರೆ. ಅದು ಎಷ್ಟರ ಮಟ್ಟಿಗೆ ಜಾರಿ ಆಗುತ್ತೆ ಎನ್ನುವುದನ್ನು ನೋಡೋಣ ಎಂದು ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ಲಿಂಗಾಯತ ಧರ್ಮದ ಬಗ್ಗೆ ಅವಹೇಳನ; ಬಾಗಲಕೋಟೆ ತೊರೆಯುವಂತೆ ಕನ್ನೇರಿ ಶ್ರೀಗಳಿಗೆ ನೊಟೀಸ್!